ದೇಶದ ಸರ್ಕಾರಿ ತೈಲ ಕಂಪನಿಗಳು ಇಂದು ರವಿವಾರ (ಫೆಬ್ರವರಿ 06) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್ 4ರಿಂದ ಇಂಧನ ದರ ಸ್ಥಿರವಾಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದ್ದರೂ ಬರೋಬ್ಬರಿ 93 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಬದಲಾಗಿಲ್ಲ. ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂಧನದ ದರ ಪರಿಷ್ಕರಿಸಿಲ್ಲ, ಬಜೆಟ್ ನಂತರವೂ ಇದೇ ಪರಿಸ್ಥಿತಿ ಮುಂದುವರೆದಿದೆ.
ಕೇಂದ್ರ ಬಜೆಟ್ 2022ನಲ್ಲಿ ಮಿಶ್ರಣವಲ್ಲದ ಇಂಧನದ ಪ್ರತಿ ಲೀಟರ್ ಮೇಲೆ 2 ರೂ. ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಆದರೆ, ಈ ಹೆಚ್ಚುವರಿ ಸುಂಕ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಹೀಗಾಗಿ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮಾಡಿಲ್ಲ.
ಸಾಮಾನ್ಯ ಹಣದುಬ್ಬರದ ಹಿನ್ನೆಲೆಯಿಂದಾಗಿ ಭಾರತದಲ್ಲಿ ತೈಲ ಬೆಲೆಗೆ ಇನ್ನಷ್ಟು ಉತ್ತೇಜನ ನೀಡಬಹುದು. ಅದರಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಕಾರಣ ಆಗುತ್ತದೆ. ಹೊಸ ವರ್ಷದ ಶುರುವಿನಿಂದಲೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇದೆ. ಒಂದು ವರದಿಗಳ ಪ್ರಕಾರ, ಕಳೆದ ನಾಲ್ಕು ವಾರದಲ್ಲಿ ಶೇ.25ರಷ್ಟು ಹೆಚ್ಚಳವಾಗಿದೆ.
ಪ್ರಮುಖ ನಗರಗಳಲ್ಲಿ ಕಳೆದ ಏಳು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ತಿಂಗಳು ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ ಶೇ 2.16ರಷ್ಟು ಏರಿಕೆಯಾಗಿ 93.27 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 6: 100.58 ರೂ
ಫೆ. 5: 100.58 ರೂ
ಫೆ. 4: 100.58 ರೂ
ಫೆ. 3: 100.58 ರೂ.
ಫೆ. 2: 100.58 ರೂ.
ಫೆ. 1: 100.58 ರೂ.
ಜ. 31: 100.58 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 6: 85.01 ರೂ.
ಫೆ. 5: 85.01 ರೂ.
ಫೆ. 4: 85.01 ರೂ.
ಫೆ. 3: 85.01 ರೂ.
ಫೆ. 2: 85.01 ರೂ.
ಫೆ. 1: 85.01 ರೂ.
ಜ. 31: 85.01 ರೂ.
ದೆಹಲಿಯಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 6: 95.41 ರೂ.
ಫೆ. 5: 95.41 ರೂ.
ಫೆ. 4: 95.41 ರೂ.
ಫೆ. 3: 95.41 ರೂ.
ಫೆ. 2: 95.41 ರೂ.
ಫೆ. 1: 95.41 ರೂ.
ಜ. 31: 95.41 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 6: 86.67 ರೂ.
ಫೆ. 5: 86.67 ರೂ.
ಫೆ. 4: 86.67 ರೂ.
ಫೆ. 3: 86.67 ರೂ.
ಫೆ. 2: 86.67 ರೂ.
ಫೆ. 1: 86.67 ರೂ.
ಜ. 31: 86.67 ರೂ.
ಮುಂಬೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 6: 109.98 ರೂ.
ಫೆ. 5: 109.98 ರೂ.
ಫೆ. 4: 109.98 ರೂ.
ಫೆ. 3: 109.98 ರೂ.
ಫೆ. 2: 109.98 ರೂ.
ಫೆ. 1: 109.98 ರೂ.
ಜ. 31: 109.98 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 6: 94.14 ರೂ.
ಫೆ. 5: 94.14 ರೂ.
ಫೆ. 4: 94.14 ರೂ.
ಫೆ. 3: 94.14 ರೂ.
ಫೆ. 2: 94.14 ರೂ.
ಫೆ. 1: 94.14 ರೂ.
ಜ. 31: 94.14 ರೂ.
ಚೆನ್ನೈನಲ್ಲಿ 7ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 6: 101.40 ರೂ.
ಫೆ. 4: 101.40 ರೂ.
ಫೆ. 4: 101.40 ರೂ.
ಫೆ. 3: 101.40 ರೂ.
ಫೆ. 2: 101.40 ರೂ.
ಫೆ. 1: 101.40 ರೂ.
ಜ. 31: 101.40 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 6: 91.43 ರೂ.
ಫೆ. 5: 91.43 ರೂ.
ಫೆ. 4: 91.43 ರೂ.
ಫೆ. 3: 91.43 ರೂ.
ಫೆ. 2: 91.43 ರೂ.
ಫೆ. 1: 91.43 ರೂ.
ಜ. 31: 91.43 ರೂ.
ಹೈದ್ರಾಬಾದ್‌ನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 6: 108.20 ರೂ.
ಫೆ. 5: 108.20 ರೂ.
ಫೆ. 4: 108.20 ರೂ.
ಫೆ. 3: 108.20 ರೂ.
ಫೆ. 2: 108.20 ರೂ.
ಫೆ. 1: 108.20 ರೂ.
ಜ. 31: 108.20 ರೂ.
ಡೀಸೆಲ್ ದರ (ಪ್ರತಿ ಲೀಟರ್)
ಫೆ. 6: 94.62 ರೂ.
ಫೆ. 5: 94.62 ರೂ.
ಫೆ. 4: 94.62 ರೂ.
ಫೆ. 3: 94.62 ರೂ.
ಫೆ. 3: 94.62 ರೂ.
ಫೆ. 2: 94.62 ರೂ.
ಫೆ. 1: 94.62 ರೂ.
ಜ. 31: 94.62 ರೂ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications