ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಬುಧವಾರದಂದು ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಶನಿವಾರದ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿಲ್ಲ. ಕೆಲವು ದಿನಗಳಲ್ಲಿ ಸರಿ ಸುಮಾರು 23-25 ಪೈಸೆಯಂತೆ ಪೆಟ್ರೋಲ್ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 24-26 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿತ್ತು. ಒಟ್ಟಾರೆ ಈ ತಿಂಗಳಲ್ಲಿ ಪೆಟ್ರೋಲ್ ಒಟ್ಟು 4.87 ಪ್ರತಿ ಲೀಟರ್ ಹಾಗೂ ಡೀಸೆಲ್ 4.99 ಪ್ರತಿ ಲೀಟರ್ ನಷ್ಟು ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 62.87 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ.
ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 91.17 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ 81.47 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಪ್ರಮುಖ ನಗರಗಳಲ್ಲಿ ಮಾರ್ಚ್ 3ರ ಇಂಧನ ದರ
ನಗರ - ಪೆಟ್ರೋಲ್- ಡೀಸೆಲ್
ದೆಹಲಿ: 91.17 ರೂ- 81.47 ರೂ
ಮುಂಬೈ: 97.57 ರೂ - 88.60 ರೂ
ಚೆನ್ನೈ: 93.11 ರೂ- 86.45 ರೂ
ಬೆಂಗಳೂರು: 94.22 ರೂ - 86.35 ರೂ
ನಿಮ್ಮ ನಗರ, ಪಟ್ಟಣಗಳಲ್ಲಿನ ಇಂಧನ ದರವನ್ನು ತಿಳಿಯಲು ಕ್ಲಿಕ್ ಮಾಡಿ
More From GoodReturns

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

Egg Price Karnataka: ಕೋಳಿ ಮೊಟ್ಟೆ ದರ 7 ರಿಂದ 4 ರೂ.ವರೆಗೆ ಇಳಿಕೆ; ಕೋಳಿ ಸಾಕಾಣಿಕಾರರಿಗೆ ಟೆನ್ಶನ್

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ



Click it and Unblock the Notifications