ದೇಶದ ಪ್ರಮುಖ ನಗರಗಳಲ್ಲಿ ಸತತ ಎಂಟನೇ ದಿನವಾದ ಭಾನುವಾರ (ಮಾರ್ಚ್ 7) ಕೂಡಾ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಶನಿವಾರದ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿಲ್ಲ.ಇದಕ್ಕೂ ಮುನ್ನ ಕೆಲವು ದಿನಗಳಲ್ಲಿ ಸರಿ ಸುಮಾರು 23-25 ಪೈಸೆಯಂತೆ ಪೆಟ್ರೋಲ್ ಏರಿಕೆಯಾಗಿದ್ದು, ಡೀಸೆಲ್ ಬೆಲೆ 24-26 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿತ್ತು.
ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 91.17 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ 81.47 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.
ಫೆಬ್ರವರಿ 9ರಿಂದ ಸುಮಾರು 14 ಬಾರಿ ಇಂಧನ ದರ ಪರಿಷ್ಕರಣೆಯಾಗಿದ್ದು, ಒಟ್ಟಾರೆ, ಪೆಟ್ರೋಲ್ ಬೆಲೆ 4.22 ರು ಪ್ರತಿ ಲೀಟರ್ ಹಾಗೂ ಡೀಸೆಲ್ 4.34 ಪ್ರತಿ ಲೀಟರ್ ಏರಿಕೆ ಕಂಡಿದೆ.
ಒಡಿಶಾದ ಭುವನೇಶ್ವರದಲ್ಲಿ ಶನಿವಾರದಂಡು ಪೆಟ್ರೋಲ್ ಅಲ್ಲದೆ ಡೀಸೆಲ್ ದರ ಕೂಡಾ ಇಳಿಕೆಯಾಗಿತ್ತು. ಶನಿವಾರದಂದು ಪೆಟ್ರೋಲ್ ಬೆಲೆ 91.90 ರು ಹಾಗೂ ಡೀಸೆಲ್ ಬೆಲೆ 88.79 ರುಗೆ ಇಳಿಕೆಯಾಗಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 2.62% ಏರಿಕೆ ಕಂಡು 69.36 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ತಲುಪಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ.
ಪ್ರಮುಖ ನಗರಗಳಲ್ಲಿ ಮಾರ್ಚ್ 7ರ ಇಂಧನ ದರ
ನಗರ - ಪೆಟ್ರೋಲ್- ಡೀಸೆಲ್
ದೆಹಲಿ: 91.17 ರೂ- 81.47 ರೂ
ಕೋಲ್ಕತ್ತಾ: 91.35 ರೂ- 84.35 ರೂ
ಮುಂಬೈ: 97.57 ರೂ - 88.60 ರೂ
ಚೆನ್ನೈ: 93.11ರೂ(-14ಪೈಸೆ) - 86.45 ರೂ(-13)
ಬೆಂಗಳೂರು: 94.22 ರೂ - 86.37 ರೂ
ಜೈಪುರ: 97.72 ರೂ-89.98 ರೂ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ನಿಮ್ಮ ನಗರ, ಪಟ್ಟಣಗಳಲ್ಲಿನ ಇಂಧನ ದರವನ್ನು ತಿಳಿಯಲು ಕ್ಲಿಕ್ ಮಾಡಿ


Click it and Unblock the Notifications