ಪೆಟ್ರೋಲ್, ಡೀಸೆಲ್ ದರ ಇಳಿಕೆ : ಮಾರ್ಚ್‌ 24ರ ದರ ಹೀಗಿದೆ

ಸಾರ್ವಕಾಲಿಕ ದಾಖಲೆಗೆ ಸಾಕ್ಷಿಯಾಗಿದ್ದ ತೈಲ ದರವು ಸತತ 24 ದಿನಗಳು ಯಾವುದೇ ಬದಲಾವಣೆ ಆಗದೆ ಉಳಿದಿತ್ತು. ಆದರೆ ಬುಧವಾರ (ಮಾ. 24) ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಿವೆ. ಇಷ್ಟಾದರೂ ದೇಶದ ಪ್ರಮುಖ ನಗರಗಳಲ್ಲಿ ತೈಲ ದರವು ತುಂಬಾನೆ ಹೆಚ್ಚಿದ್ದು, ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿಯೇ ಉಳಿದಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಪೆಟ್ರೋಲ್, ಡೀಸೆಲ್ ದರ ಇಳಿಕೆ : ಮಾರ್ಚ್‌ 24ರ ದರ ಹೀಗಿದೆ

ದೇಶದ ಪ್ರಮುಖ ನಗರಗಳಲ್ಲಿ ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.99 ರೂ. ಮತ್ತು ಡೀಸೆಲ್ ದರ 81.30 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.18 ರೂ. ಮತ್ತು ಡೀಸೆಲ್ ದರ 84.18 ರೂ.

ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 97.40 ರೂ. ಮತ್ತು ಡೀಸೆಲ್ ದರ 88.42 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.04 ರೂ. ಮತ್ತು ಡೀಸೆಲ್ ದರ 86.21 ರೂ.

ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.61 ರೂ. ಮತ್ತು ಡೀಸೆಲ್ ದರ 88.67 ರೂ.

ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 92.95 ರೂ. ಮತ್ತು ಡೀಸೆಲ್ ದರ 86.29 ರೂ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+