ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಏರಿಕೆ ಕಂಡಿದ್ದ ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಿದ್ದವು. ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು, ಕಳೆದ ನಾಲ್ಕು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ. ಇಂದು (ಮೇ 6, ಶುಕ್ರವಾರ) ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ 30 ದಿನಗಳಿಂದ ಇಂಧನ ದರ ಸ್ಥಿರವಾಗಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಕಳೆದ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಸುಮಾರು 10 ರು ಬೆಲೆ ಏರಿಕೆ ಬಳಿಕ ಇಂಧನ ದರ ಬಹುತೇಕ ಒಂದು ತಿಂಗಳಿನಿಂದ ಸ್ಥಿರವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.ಭಾರತದಲ್ಲೇ ಅತ್ಯಧಿಕ ಇಂಧನ ದರ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ದಾಖಲಾಗಿದೆ. ಪೆಟ್ರೋಲ್ 123.16 ರು ಪ್ರತಿ ಲೀಟರ್ ಹಾಗೂ ಡೀಸೆಲ್ 105.55 ರು ನಷ್ಟಿದೆ.
ಬೆಂಗಳೂರು
ಪೆಟ್ರೋಲ್ ದರ (ಪ್ರತಿ ಲೀಟರ್) : 111.09 ರೂ.
ಡೀಸೆಲ್ (ಪ್ರತಿ ಲೀಟರ್): 94.79 ರೂ.
ದೆಹಲಿಯಲ್ಲಿ
ಪೆಟ್ರೋಲ್ ದರ (ಪ್ರತಿ ಲೀಟರ್) : 105.41 ರೂ.
ಡೀಸೆಲ್ (ಪ್ರತಿ ಲೀಟರ್): 96.67 ರೂ.

ಮುಂಬೈನಲ್ಲಿ ಇಂಧನ ದರ
ಪೆಟ್ರೋಲ್ ದರ (ಪ್ರತಿ ಲೀಟರ್) : 120.51 ರೂ.
ಡೀಸೆಲ್ (ಪ್ರತಿ ಲೀಟರ್): 104.77 ರೂ.
ಚೆನ್ನೈನಲ್ಲಿ ಇಂಧನ ದರ
ಪೆಟ್ರೋಲ್ ದರ (ಪ್ರತಿ ಲೀಟರ್): 110.85 ರೂ.
ಡೀಸೆಲ್ (ಪ್ರತಿ ಲೀಟರ್): 100.94 ರೂ.
ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿದ್ದವು.
ಆದರೆ ಇಂದು (ಶುಕ್ರವಾರ, ಮೇ 6) ಇಂಧನ ದರ ಏರಿಕೆಯಾಗಿಲ್ಲ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 111.5 ಯುಎಸ್ ಡಾಲರ್ ನಂತೆ ವ್ಯವಹಾರ ನಡೆಸುತ್ತಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications