For Quick Alerts
ALLOW NOTIFICATIONS  
For Daily Alerts

ಮೇ.08: ಕಚ್ಚಾತೈಲ ಬೆಲೆ ಏರಿಕೆ, ಭಾರತದಲ್ಲಿ ಇಂಧನ ದರ ಸ್ಥಿರ

|

ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಸತತವಾಗಿ 110 ಪ್ಲಸ್ ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ನಂತೆ ವ್ಯವಹರಿಸುತ್ತಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಿದ್ದವು. ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು, ಕಳೆದ ನಾಲ್ಕು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ. ಇಂದು (ಮೇ 8, ರವಿವಾರ) ಪೆಟ್ರೋಲ್‌, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ 32 ದಿನಗಳಿಂದ ಇಂಧನ ದರ ಸ್ಥಿರವಾಗಿದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಕಳೆದ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಸುಮಾರು 10 ರು ಬೆಲೆ ಏರಿಕೆ ಬಳಿಕ ಇಂಧನ ದರ ಬಹುತೇಕ ಒಂದು ತಿಂಗಳಿನಿಂದ ಸ್ಥಿರವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.

ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಭಾರತದಲ್ಲೇ ಅತ್ಯಧಿಕ ಇಂಧನ ದರ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ದಾಖಲಾಗಿದೆ. ಪೆಟ್ರೋಲ್ 122.85 ರು ಪ್ರತಿ ಲೀಟರ್ ಹಾಗೂ ಡೀಸೆಲ್ 105.28ರು ನಷ್ಟಿದೆ.

ಮೇ.08: ಕಚ್ಚಾತೈಲ ಬೆಲೆ ಏರಿಕೆ, ಭಾರತದಲ್ಲಿ ಇಂಧನ ದರ ಸ್ಥಿರ

ಬೆಂಗಳೂರು

ಪೆಟ್ರೋಲ್ ದರ (ಪ್ರತಿ ಲೀಟರ್) : 111.09 ರೂ.
ಡೀಸೆಲ್ (ಪ್ರತಿ ಲೀಟರ್): 94.79 ರೂ.

ದೆಹಲಿಯಲ್ಲಿ
ಪೆಟ್ರೋಲ್ ದರ (ಪ್ರತಿ ಲೀಟರ್) : 105.41 ರೂ.
ಡೀಸೆಲ್ (ಪ್ರತಿ ಲೀಟರ್): 96.67 ರೂ.

ಮುಂಬೈನಲ್ಲಿ ಇಂಧನ ದರ
ಪೆಟ್ರೋಲ್ ದರ (ಪ್ರತಿ ಲೀಟರ್) : 120.51 ರೂ.
ಡೀಸೆಲ್ (ಪ್ರತಿ ಲೀಟರ್): 104.77 ರೂ.

ಚೆನ್ನೈನಲ್ಲಿ ಇಂಧನ ದರ

ಪೆಟ್ರೋಲ್ ದರ (ಪ್ರತಿ ಲೀಟರ್): 110.95 ರೂ.
ಡೀಸೆಲ್ (ಪ್ರತಿ ಲೀಟರ್): 101.04 ರೂ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿದ್ದವು. ಆದರೆ ಇಂದು (ರವಿವಾರ, ಮೇ 8) ಇಂಧನ ದರ ಏರಿಕೆಯಾಗಿಲ್ಲ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 112.4 ಯುಎಸ್ ಡಾಲರ್ ನಂತೆ ವ್ಯವಹಾರ ನಡೆಸುತ್ತಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary

Petrol And Diesel Prices Unchanged On 08 May 2022: Check Rates In Your City

Domestic Petrol and Diesel Price Unchanged on Sunday (May 08) in Many cities of across India. Latest Rates Here.
Story first published: Sunday, May 8, 2022, 8:22 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X