ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಜಾಗತಿಕವಾಗಿ ಕಚ್ಚಾತೈಲ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಿದ್ದವು. ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು ಇಂದು ಯಥಾಸ್ಥಿತಿ ಕಾಯ್ದುಕೊಂಡಿವೆ.
ಈ ಪರಿಷ್ಕರಣೆಯ ವೇಳೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಏರಿಕೆ ಆಗುತ್ತಿದೆ. ದೇಶದಲ್ಲಿ ಕಳೆದ 23 ದಿನಗಳಲ್ಲಿ 15 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿದೆ. ಆದರೆ ಇಂದು (ಏಪ್ರಿಲ್ 14, ಗುರುವಾರ) ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ ಎಂಟು ದಿನಗಳಿಂದ ಇಂಧನ ದರ ಸ್ಥಿರವಾಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಬಳಿಕ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು, ಕಳೆದ ಆರು ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯು ಏರಿಕೆ ಕಂಡಿದೆ. ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಆಮದು ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಇಂಧನ ದರ ಕಡಿಮೆಯಾಗುವ ಸಾಧ್ಯತೆ ಇದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಏಳು ದಿನ ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಏ.14: 111.09 ರೂ.
ಏ.13: 111.09 ರೂ.
ಏ.12: 111.09 ರೂ.
ಏ.11: 111.09 ರೂ.
ಏ.10: 111.09 ರೂ.
ಡೀಸೆಲ್ (ಪ್ರತಿ ಲೀಟರ್)
ಏ.14: 94.79 ರೂ.
ಏ.13: 94.79 ರೂ.
ಏ.12: 94.79 ರೂ.
ಏ.11: 94.79 ರೂ.
ಏ.10: 94.79 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಏ.14: 105.41 ರೂ.
ಏ.13: 105.41 ರೂ.
ಏ.12: 105.41 ರೂ.
ಏ.11: 105.41 ರೂ.
ಏ.10: 105.41 ರೂ.
ಡೀಸೆಲ್ (ಪ್ರತಿ ಲೀಟರ್)
ಏ.14: 96.67 ರೂ.
ಏ.13: 96.67 ರೂ.
ಏ.12: 96.67 ರೂ.
ಏ.11: 96.67 ರೂ.
ಏ.10: 96.67 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಏ.14: 120.51 ರೂ.
ಏ.13: 120.51 ರೂ.
ಏ.12: 120.51 ರೂ.
ಏ.11: 120.51 ರೂ.
ಏ.10: 120.51 ರೂ.
ಡೀಸೆಲ್ (ಪ್ರತಿ ಲೀಟರ್)
ಏ.14: 104.77 ರೂ.
ಏ.13: 104.77 ರೂ.
ಏ.12: 104.77 ರೂ.
ಏ.11: 104.77 ರೂ.
ಏ.10: 104.77 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಏ.14: 110.85 ರೂ.
ಏ.13: 110.85 ರೂ.
ಏ.12: 110.85 ರೂ.
ಏ.11: 110.85 ರೂ.
ಏ.10: 110.85 ರೂ.
ಡೀಸೆಲ್ (ಪ್ರತಿ ಲೀಟರ್)
ಏ.14: 100.94 ರೂ.
ಏ.13: 100.94 ರೂ.
ಏ.12: 100.94 ರೂ.
ಏ.11: 100.94 ರೂ.
ಏ.10: 100.94 ರೂ.


Click it and Unblock the Notifications