ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಏರಿಕೆ ಕಂಡಿದ್ದ ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಂಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಿದ್ದವು. ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು ಕಳೆದ ಒಂದು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ.
ಈ ಪರಿಷ್ಕರಣೆಯ ವೇಳೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಏರಿಕೆ ಆಗುತ್ತಿದೆ. ದೇಶದಲ್ಲಿ ಕಳೆದ 25 ದಿನಗಳಲ್ಲಿ 15 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿದೆ. ಆದರೆ ಇಂದು (ಏಪ್ರಿಲ್ 16, ಶನಿವಾರ) ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ ಹತ್ತು ದಿನಗಳಿಂದ ಇಂಧನ ದರ ಸ್ಥಿರವಾಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಬಳಿಕ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು, ಕಳೆದ ಹತ್ತು ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯು ಏರಿಕೆ ಕಂಡಿದೆ. ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಆಮದು ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಇಂಧನ ದರ ಕಡಿಮೆಯಾಗುವ ಸಾಧ್ಯತೆ ಇದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಏಳು ದಿನ ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಏ.16: 111.09 ರೂ.
ಏ.15: 111.09 ರೂ.
ಏ.14: 111.09 ರೂ.
ಏ.13: 111.09 ರೂ.
ಏ.12: 111.09 ರೂ.
ಡೀಸೆಲ್ (ಪ್ರತಿ ಲೀಟರ್)
ಏ.16: 94.79 ರೂ.
ಏ.15: 94.79 ರೂ.
ಏ.14: 94.79 ರೂ.
ಏ.13: 94.79 ರೂ.
ಏ.12: 94.79 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಏ.16: 105.41 ರೂ.
ಏ.15: 105.41 ರೂ.
ಏ.14: 105.41 ರೂ.
ಏ.13: 105.41 ರೂ.
ಏ.12: 105.41 ರೂ.
ಡೀಸೆಲ್ (ಪ್ರತಿ ಲೀಟರ್)
ಏ.16: 96.67 ರೂ.
ಏ.15: 96.67 ರೂ.
ಏ.14: 96.67 ರೂ.
ಏ.13: 96.67 ರೂ.
ಏ.12: 96.67 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಏ.16: 120.51 ರೂ.
ಏ.15: 120.51 ರೂ.
ಏ.14: 120.51 ರೂ.
ಏ.13: 120.51 ರೂ.
ಏ.12: 120.51 ರೂ.
ಡೀಸೆಲ್ (ಪ್ರತಿ ಲೀಟರ್)
ಏ.16: 104.77 ರೂ.
ಏ.15: 104.77 ರೂ.
ಏ.14: 104.77 ರೂ.
ಏ.13: 104.77 ರೂ.
ಏ.12: 104.77 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಏ.16: 110.85 ರೂ.
ಏ.15: 110.85 ರೂ.
ಏ.14: 110.85 ರೂ.
ಏ.13: 110.85 ರೂ.
ಏ.12: 110.85 ರೂ.
ಡೀಸೆಲ್ (ಪ್ರತಿ ಲೀಟರ್)
ಏ.16: 100.94 ರೂ.
ಏ.15: 100.94 ರೂ.
ಏ.14: 100.94 ರೂ.
ಏ.13: 100.94 ರೂ.
ಏ.12: 100.94 ರೂ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿದ್ದವು. ಆದರೆ ಇಂದು (ಶನಿವಾರ, ಏಪ್ರಿಲ್ 16) ಇಂಧನ ದರ ಏರಿಕೆಯಾಗಿಲ್ಲ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 111.7 ಯುಎಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications