ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ಕಚ್ಚಾತೈಲ ಬೆಲೆ ದಿನದಿಂದ ದಿನಕ್ಕೆ ಏರಿಳಿತ ಕಾಣುತ್ತಿದೆ. ಪಂಚ ರಾಜ್ಯಗಳ ಚುನಾವಣೆಯ ಬಳಿಕ ದೇಶದ ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ ದಿನ ಪರಿಷ್ಕರಣೆ ವೇಳೆ ಏರಿಕೆ ಮಾಡುತ್ತಿದೆ. ದೇಶದಲ್ಲಿ 10 ದಿನಗಳಲ್ಲಿ 9 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿತ್ತು. ಆದರೆ, ಇಂದು(ಏಪ್ರಿಲ್ 1) ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿಲ್ಲ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರಿ ಏರಿಕೆ ಕಂಡಿದೆ. ಪ್ರಮುಖವಾಗಿ ಪಂಚ ರಾಜ್ಯಗಳ ಚುನಾವಣೆಯ ಬಳಿಕ ಅಂದರೆ 137 ದಿನಗಳ ಬಳಿಕ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಮಾರ್ಚ್ 31ರಂದು ಪೆಟ್ರೋಲ್, ಡೀಸೆಲ್‌ಗೆ ಪ್ರತಿ ಲೀಟರ್‌ಗೆ 80 ಪೈಸೆ ಏರಿಕೆಯಾಗಿತ್ತು. ಏಪ್ರಿಲ್ 1ರಂದು ಪ್ರಮುಖ ಮೆಟ್ರೋನಗರಗಳಲ್ಲಿ ಬೆಲೆಯಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಬದಲಾವಣೆ ಆಗಿದೆ. ಈ ಹಿಂದೆ ಯುಎಸ್ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧದ ನಡುವೆ ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕೊಂಚ ಕುಗ್ಗಿ 107.9 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.1: 107.30 ರೂ.
ಮಾ. 31: 107.30 ರೂ.
ಮಾ. 30: 106.46 ರೂ.
ಮಾ. 29: 105.62 ರೂ.
ಮಾ. 28: 104.78 ರೂ.
ಮಾ. 27: 104.46 ರೂ.
ಮಾ. 26: 103.93 ರೂ.
ಡೀಸೆಲ್ (ಪ್ರತಿ ಲೀಟರ್)
ಏ.1: 91.27 ರೂ.
ಮಾ. 31: 91.27 ರೂ.
ಮಾ. 30: 90.49 ರೂ.
ಮಾ. 29: 89.70 ರೂ.
ಮಾ. 28: 88.67 ರೂ.
ಮಾ. 27: 88.67 ರೂ.
ಮಾ. 26: 88.14 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.1: 101.81 ರೂ.
ಮಾ. 31: 101.81 ರೂ.
ಮಾ. 30: 101.01 ರೂ.
ಮಾ. 29: 100.21 ರೂ.
ಮಾ. 28: 99.11 ರೂ.
ಮಾ. 27: 99.11 ರೂ.
ಮಾ. 26: 98.61 ರೂ.
ಡೀಸೆಲ್ (ಪ್ರತಿ ಲೀಟರ್)
ಏ.1: 93.07 ರೂ.
ಮಾ. 31: 93.07 ರೂ.
ಮಾ. 30: 92.27 ರೂ.
ಮಾ. 29: 91.47 ರೂ.
ಮಾ. 28: 90.42 ರೂ.
ಮಾ. 27: 90.42 ರೂ.
ಮಾ. 26: 89.87 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.1: 116.72 ರೂ.
ಮಾ. 31: 116.72 ರೂ.
ಮಾ. 30: 115.88 ರೂ.
ಮಾ. 29: 115.04 ರೂ.
ಮಾ. 28: 114.19 ರೂ.
ಮಾ. 27: 113.88 ರೂ.
ಮಾ. 26: 113.35 ರೂ.
ಡೀಸೆಲ್ (ಪ್ರತಿ ಲೀಟರ್)
ಏ.1: 100.94 ರೂ.
ಮಾ. 31: 100.94 ರೂ.
ಮಾ. 30: 100.10 ರೂ.
ಮಾ. 29: 99.25 ರೂ.
ಮಾ. 28: 98.50 ರೂ.
ಮಾ. 27: 98.13 ರೂ.
ಮಾ. 26: 97.55 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.1: 107.45 ರೂ.
ಮಾ. 31: 107.45 ರೂ.
ಮಾ. 30: 106.69 ರೂ.
ಮಾ. 29: 105.94 ರೂ.
ಮಾ. 28: 105.18 ರೂ.
ಮಾ. 27: 105.00 ರೂ.
ಮಾ. 26: 104.43 ರೂ.
ಡೀಸೆಲ್ (ಪ್ರತಿ ಲೀಟರ್)
ಏ.1: 97.52 ರೂ.
ಮಾ. 31: 97.52 ರೂ.
ಮಾ. 30: 96.76 ರೂ.
ಮಾ. 29: 96.00 ರೂ.
ಮಾ. 28: 95.33 ರೂ.
ಮಾ. 27: 95.10 ರೂ.
ಮಾ. 26: 94.47 ರೂ.


Click it and Unblock the Notifications