ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಏರಿಕೆ ಕಂಡಿದ್ದ ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಲಾಗಿತ್ತು.
ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು ಕಳೆದ ಮೂರು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ. ಇನ್ನು ರಾಜಸ್ಥಾನದ ಗಂಗಾನಗರದಲ್ಲಿ ಪೆಟ್ರೋಲ್ ಅತ್ಯಧಿಕ 122.93 ಪ್ರತಿ ಲೀಟರ್ ಹಾಗೂ ಡೀಸೆಲ್ 105.34 ರು ನಷ್ಟಿದೆ.
ಈ ಪರಿಷ್ಕರಣೆಯ ವೇಳೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಏರಿಕೆಯಾಗಿತ್ತು. ದೇಶದಲ್ಲಿ ಕಳೆದ ಒಂದು ತಿಂಗಳಿನಲ್ಲಿ 15 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿದೆ. ಆದರೆ ಇಂದು (ಏಪ್ರಿಲ್ 27, ಬುಧವಾರ) ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ 20 ದಿನಗಳಿಂದ ಇಂಧನ ದರ ಸ್ಥಿರವಾಗಿದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಏಳು ದಿನ ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿದೆ.
ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿದ್ದವು.
ಆದರೆ ಇಂದು (ಬುಧವಾರ, ಏಪ್ರಿಲ್ 27) ಇಂಧನ ದರ ಏರಿಕೆಯಾಗಿಲ್ಲ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 105.7 ಯುಎಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಪರಿಶೀಲಿಸಿ.


Click it and Unblock the Notifications