ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಶನಿವಾರ ಯಾವುದೇ ಬದಲಾವಣೆಗಳಾಗಿಲ್ಲ. ಇಂದು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ದೆಹಲಿಯಲ್ಲಿ ಶನಿವಾರ ಪೆಟ್ರೋಲ್ ದರ ಲೀಟರ್‌ಗೆ 86.30 ರೂ. ನಷ್ಟಿದ್ದು, ಡೀಸೆಲ್ ಲೀಟರ್‌ಗೆ 76.48 ರೂ. ಆಗಿದೆ.
ಸತತ ಏರಿಕೆಯ ನಡುವೆ ಕಳೆದ ಎರಡು ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ತಟಸ್ಥವಾಗಿರುವುದು ಗ್ರಾಹಕರಿಗೆ ಸಾಕಷ್ಟು ಸಮಾಧಾನ ತಂದಿದೆ. ಆದರೂ ದೇಶದ ಪ್ರಮುಖ ನಗರಗಳಲ್ಲಿ ಇನ್ನೂ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿದೆ:
ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 86.30 ರೂಪಾಯಿ, 1 ಲೀಟರ್ ಡೀಸಸೆಲ್ ಬೆಲೆ ಪ್ರತಿ ಲೀಟರ್‌ಗೆ 76.48 ರೂಪಾಯಿ

ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 87.69 ರೂಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 80.08 ರೂಪಾಯಿ
ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗ 92.86 ರೂಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 83.30 ರೂಪಾಯಿ
ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗ 89.21 ರೂಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 81.10 ರೂಪಾಯಿ
ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 88.82 ರೂಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 81.71 ರೂಪಾಯಿ


Click it and Unblock the Notifications