ಪೆಟ್ರೋಲ್, ಡೀಸೆಲ್ ದರ ತಗ್ಗಿಸಲು ಕೇಂದ್ರ ಸರ್ಕಾರ ಚಿಂತನೆ?
ತೈಲ ದರಗಳು ಗಗನಕ್ಕೇರುವ ಮೂಲಕ ಹಣದುಬ್ಬರದ ಹೊರೆ ಹೆಚ್ಚಾಗುತ್ತಿದೆ. ಈಗಾಗಲೇ ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ 100ರ ಗಡಿ ದಾಟಿವೆ. ದೇಶದ ಎಲ್ಲಾ ಮೆಟ್ರೋ ನಗರಗಳಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಹೋಗಿದೆ. ಏತನ್ಮಧ್ಯೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಮಾತು ಕೂಡ ಕೇಳಿಬರುತ್ತಿದೆ.
ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ನಿರಂತರ ಹೆಚ್ಚಳದಿಂದಾಗಿ, ಸಾಮಾನ್ಯ ಜನರ ಮೇಲೆ ಹೊರೆ ಹೆಚ್ಚುತ್ತಿದೆ. ಅದೇ ಸಮಯದಲ್ಲಿ, ಸರ್ಕಾರದ ಮೇಲೆ ಒತ್ತಡ ಹೆಚ್ಚುತ್ತಿದೆ. ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಸಲಹೆಗಳನ್ನು ಜಿಎಸ್ಟಿ ಕೌನ್ಸಿಲ್ ಕಾರ್ಯಗತಗೊಳಿಸಿದರೆ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗುತ್ತದೆ.
ಎರಡು ದಿನಗಳ ಹಿಂದೆ, ಪೆಟ್ರೋಲಿಯಂ ಉತ್ಪನ್ನಗಳನ್ನು ತನ್ನ ವ್ಯಾಪ್ತಿಯಲ್ಲಿ ಸೇರಿಸಲು ಜಿಎಸ್ಟಿ ಕೌನ್ಸಿಲ್ಗೆ ತಮ್ಮ ಸಚಿವಾಲಯ ನಿರಂತರವಾಗಿ ವಿನಂತಿಸುತ್ತಿದೆ ಎಂದಿದ್ದರು. ಏಕೆಂದರೆ ಇದು ಜನರಿಗೆ ಪ್ರಯೋಜನಕಾರಿಯಾಗಿದೆ. ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಕೂಡ ಇದೇ ರೀತಿಯ ಸೂಚನೆಗಳನ್ನು ನೀಡಿದ್ದಾರೆ.
ಫೆಬ್ರವರಿ 25ರ ಪೆಟ್ರೋಲ್, ಡೀಸೆಲ್ ದರ ಹೀಗಿದೆ
ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಸ್ಥಳಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದ್ದು, ಇದಕ್ಕೆ ತೆರಿಗೆ ದೊಡ್ಡ ಕಾರಣವಾಗಿದೆ. ಕೇಂದ್ರ ಸರ್ಕಾರ ಅಬಕಾರಿ ಮತ್ತು ರಾಜ್ಯ ವ್ಯಾಟ್ ವಿಧಿಸುತ್ತದೆ. ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಬಕಾರಿ ಮತ್ತು ವ್ಯಾಟ್ ಹೆಸರಿನಲ್ಲಿ 100 ಪ್ರತಿಶತಕ್ಕಿಂತ ಹೆಚ್ಚಿನ ತೆರಿಗೆಯನ್ನು ಸಂಗ್ರಹಿಸುತ್ತಿವೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 91 ರೂ. ಮತ್ತು ಡೀಸೆಲ್ ಲೀಟರ್ಗೆ 81 ರೂ. ನಷ್ಟಿದೆ.