ನವದೆಹಲಿ, ಮಾರ್ಚ್ 14: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಭಾನುವಾರ(ಮಾರ್ಚ್ 14)ದಂದು ಯಾವುದೇ ಬದಲಾವಣೆಯಾಗಿಲ್ಲ. ಫೆಬ್ರವರಿ 27ರ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿಲ್ಲ.
ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಂಡಿದ್ದರೂ ಭಾರತದಲ್ಲಿ ತೈಲ ಬೆಲೆ ಸ್ಥಿರತೆ ಕಂಡುಕೊಂಡಿದೆ. ಫೆಬ್ರವರಿ 9ರಿಂದ ಸುಮಾರು 14 ಬಾರಿ ಇಂಧನ ದರ ಪರಿಷ್ಕರಣೆಯಾಗಿದ್ದು, ಒಟ್ಟಾರೆ, ಪೆಟ್ರೋಲ್ ಬೆಲೆ 4.22 ರು ಪ್ರತಿ ಲೀಟರ್ ಹಾಗೂ ಡೀಸೆಲ್ 4.34 ಪ್ರತಿ ಲೀಟರ್ ಏರಿಕೆ ಕಂಡಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 69.22 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ತನಕ ತಲುಪಿದೆ. ಡಾಲರ್ ಎದುರು ರುಪಾಯಿ ಮೌಲ್ಯ72.69 ತಲುಪಿದೆ.
ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

* ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.17 ರೂ. ಮತ್ತು ಡೀಸೆಲ್ ದರ 81.47 ರೂ.
* ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.35 ರೂ. ಮತ್ತು ಡೀಸೆಲ್ ದರ 84.35 ರೂ.
* ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 97.57 ರೂ. ಮತ್ತು ಡೀಸೆಲ್ ದರ 88.60 ರೂ.
* ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.22 ರೂ. ಮತ್ತು ಡೀಸೆಲ್ ದರ 86.37 ರೂ. * ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.79 ರೂ. ಮತ್ತು ಡೀಸೆಲ್ ದರ 88.86 ರೂ. * ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.19 ರೂ. ಮತ್ತು ಡೀಸೆಲ್ ದರ 86.53 ರೂ.
ನಿಮ್ಮ ನಗರಗಳಲ್ಲಿನ ಇಂದಿನ ಇಂಧನ ದರ ತಿಳಿಯಲು ಕ್ಲಿಕ್ ಮಾಡಿ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.


Click it and Unblock the Notifications