For Quick Alerts
ALLOW NOTIFICATIONS  
For Daily Alerts

ಗುಡ್‌ನ್ಯೂಸ್: 15 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ದರ ಇಳಿಕೆ

|

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ 15 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಿವೆ. ನವದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 16 ಪೈಸೆ ಇಳಿಕೆಗೊಂಡು 90.40 ರೂ. ತಲುಪಿದ್ದು, ಡೀಸೆಲ್ ದರ ಪ್ರತಿ ಲೀಟರ್‌ಗೆ 14 ಪೈಸೆ ಕಡಿತಗೊಂಡು 80.73 ರೂ.ಗೆ ತಲುಪಿದೆ.

 

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಗುಡ್‌ನ್ಯೂಸ್: 15 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ದರ ಇಳಿಕೆ

ದೇಶದ ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.40 ರೂ. ಮತ್ತು ಡೀಸೆಲ್ ದರ 80.73 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.62 ರೂ. ಮತ್ತು ಡೀಸೆಲ್ ದರ 83.61 ರೂ.

ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.83 ರೂ. ಮತ್ತು ಡೀಸೆಲ್ ದರ 87.81 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.43 ರೂ. ಮತ್ತು ಡೀಸೆಲ್ ದರ 85.60 ರೂ.

ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.99 ರೂ. ಮತ್ತು ಡೀಸೆಲ್ ದರ 88.05 ರೂ.

ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 92.43 ರೂ. ಮತ್ತು ಡೀಸೆಲ್ ದರ 85.75 ರೂ.

English summary

Petrol Diesel Prices Cut After 15 Days: Check Rates In Your City

Domestic petrol and diesel prices Down After 15 days On Monday In Many cities. Latest Rates Here
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X