For Quick Alerts
ALLOW NOTIFICATIONS  
For Daily Alerts

ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ: ಜೂನ್ 07ರಂದು ಪ್ರತಿ ಲೀಟರ್‌ಗೆ ಎಷ್ಟು ಏರಿಕೆ?

|

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ಬೆಲೆಯನ್ನು ಮತ್ತಷ್ಟು ಹೆಚ್ಚಿಸಿವೆ. ಇದರಿಂದಾಗಿ ಸೋಮವಾರ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ದಾಖಲೆಯ ಮಟ್ಟವನ್ನು ತಲುಪಿದೆ. ನವದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 28 ​​ಪೈಸೆ ಏರಿಕೆಯಾಗಿ 95.31 ರೂ.ಗೆ ಏರಿದೆ. ಡೀಸೆಲ್ ದರ ಲೀಟರ್‌ಗೆ 27 ಪೈಸೆ ಹೆಚ್ಚಳದಿಂದ 86.22 ರೂಗಳಿಗೆ ಏರಿದೆ.

ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿದಿನ ಬೆಳಿಗ್ಗೆ 6 ರಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸಿ, ವಿತರಿಸುತ್ತವೆ.

ಪೆಟ್ರೋಲ್, ಡೀಸೆಲ್ ದರ ಏರಿಕೆ: ಜೂನ್ 07ರಂದು ಯಾವ ನಗರದಲ್ಲಿ ಎಷ್ಟಿದೆ?

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 95.31 ರೂ. ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 86.22 ರೂ.

ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 95.28 ರೂ. ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 89.07 ರೂ.

ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 101.52 ರೂ. ಆಗಿದ್ದು ಡೀಸೆಲ್ ಪ್ರತಿ ಲೀಟರ್‌ಗೆ 93.98 ರೂ.

ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 96.71 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 90.92 ರೂ.

ಮೇ 4 ರಿಂದ 21ನೇ ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ದೇಶದಲ್ಲಿ ಐತಿಹಾಸಿಕ ಹೆಚ್ಚಳ ಕಂಡಿದೆ. ಈ 21 ಏರಿಕೆಗಳಲ್ಲಿ ಪೆಟ್ರೋಲ್ ದರ ಲೀಟರ್‌ಗೆ 4.97 ರೂ ಮತ್ತು ಡೀಸಲ್ ಲೀಟರ್‌ಗೆ 5.55 ರೂ. ಏರಿಕೆಯಾಗಿದೆ.

English summary

Petrol Diesel Prices On 07 June: Check Rates In Your City

Domestic petrol and diesel prices Hikes on Monday In Many cities. Latest Rates Here
Story first published: Monday, June 7, 2021, 9:02 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X