ನವದೆಹಲಿ, ಜುಲೈ 24: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ ಏಳನೇ ದಿನ ಸ್ಥಿರತೆ ಕಾಯ್ದುಕೊಂಡಿದೆ. ಜುಲೈ 24ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ.
ಆರು ದಿನಗಳ ಹಿಂದೆ ಕೊನೆಯದಾಗಿ ಬೆಲೆ ಏರಿಕೆ ಮಾಡಲಾಗಿದ್ದು, ಆ ಪರಿಷ್ಕರಣೆಯೊಂದಿಗೆ ದೇಶದ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲಿಗೆ 102 ರೂ ಆಗಿತ್ತು. ದಾಖಲೆ ಮಟ್ಟದಲ್ಲಿ ಇಂಧನ ಬೆಲೆ ಏರಿಕೆ ಕಂಡ ನಂತರ ವಾರವಿಡೀ ಸ್ಥಿರತೆ ಕಾಯ್ದುಕೊಂಡಿದೆ. ಮುಂದೆ ಓದಿ...
ಯಾವ್ಯಾವ ನಗರದಲ್ಲಿ ಎಷ್ಟಿದೆ ಇಂಧನ ಬೆಲೆ
ನವದೆಹಲಿ: ಪೆಟ್ರೋಲ್ 101.84 ರೂ- ಡೀಸೆಲ್ 89.87ರೂ
ಕೋಲ್ಕತಾ: ಪೆಟ್ರೋಲ್ 102.08 ರೂ- ಡೀಸೆಲ್ 93.02 ರೂ
ಮುಂಬೈ: ಪೆಟ್ರೋಲ್ 107.83 ರೂ- ಡೀಸೆಲ್ 97.45 ರೂ
ಚೆನ್ನೈ: ಪೆಟ್ರೋಲ್ 102.49 ರೂ- ಡೀಸೆಲ್ 94.39 ರೂ
ಬೆಂಗಳೂರು: ಪೆಟ್ರೋಲ್ 105.25 ರೂ- ಡೀಸೆಲ್ 95.26 ರೂ
ತಿರುವನಂತಪುರಂ: ಪೆಟ್ರೋಲ್ 103.82 ರೂ- ಡೀಸೆಲ್ 96.47 ರೂ
ಪಾಟ್ನಾ: ಪೆಟ್ರೋಲ್ 104.39 ರೂ- ಡೀಸೆಲ್ 95.64ರ ರೂ
ಹೈದರಾಬಾದ್: ಪೆಟ್ರೋಲ್ 105.83 ರೂ- ಡೀಸೆಲ್ 97.96 ರೂ
ನೋಯ್ಡಾ: ಪೆಟ್ರೋಲ್ 98.90 ರೂ- ಡೀಸೆಲ್ 90.23 ರೂ
ಜೈಪುರ: ಪೆಟ್ರೋಲ್ 108.85 ರೂ- ಡೀಸೆಲ್ 99.14 ರೂ
ಇಂಧನ ಬೆಲೆ 100 ರೂ ಬೆಲೆ ದಾಟಿದ ರಾಜ್ಯಗಳು
ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಖ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ ದಾಟಿದೆ.
ಹೆಚ್ಚು ವ್ಯಾಟ್, ಸೆಸ್ ವಿಧಿಸಿರುವ ರಾಜ್ಯಗಳು
ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಹಾಗೂ ಒಡಿಶಾ ಹೆಚ್ಚು ವ್ಯಾಟ್, ಸೆಸ್ ವಿಧಿಸುತ್ತಿವೆ. ದೇಶದಲ್ಲಿ ಈ ರಾಜ್ಯಗಳಲ್ಲಿ ಇಂಧನ ದರ ದುಬಾರಿಯಾಗಿದೆ. ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಇಂಧನ ದರದ ಮೇಲೆ ತೆರಿಗೆ ಅತ್ಯಂತ ಕಡಿಮೆ ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 113ರೂ ನಷ್ಟಿದೆ, ಡೀಸೆಲ್ ಬೆಲೆ 102.95 ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.
ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 73.53 ಯುಎಸ್ ಡಾಲರ್(1 USD=74.42 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.
More From GoodReturns

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications