ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಶನಿವಾರ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೂ ಕಳೆದ ಹಲವು ದಿನಗಳು ಸತತ ತೈಲ ದರ ಏರಿಕೆಯ ನಡುವೆ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ತುಂಬಾನೆ ತುಟ್ಟಿಯಾಗಿದೆ.
ನವದೆಹಲಿಯಲ್ಲಿ ಇಂದು ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 86.95 ರೂ. ಏರಿಕೆಯಾಗಿದ್ದು, ಡೀಸೆಲ್ ದರ ಸ್ಥಿರವಾಗಿ ಪ್ರತಿ ಲೀಟರ್‌ಗೆ 77.13 ರೂ. ತಲುಪಿದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಸಂಜೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 86.95 ರೂ. ಮತ್ತು ಡೀಸೆಲ್ ದರ 77.13 ರೂ.
ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 88.30 ರೂ. ಮತ್ತು ಡೀಸೆಲ್ ದರ 80.71 ರೂ.
ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.49 ರೂ. ಮತ್ತು ಡೀಸೆಲ್ ದರ 83.99 ರೂ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 89.85 ರೂ. ಮತ್ತು ಡೀಸೆಲ್ ದರ 81.76 ರೂ.
ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.42 ರೂ. ಮತ್ತು ಡೀಸೆಲ್ ದರ 84.14 ರೂ.
ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 89.46 ರೂ. ಮತ್ತು ಡೀಸೆಲ್ ದರ 82.39 ರೂ.


Click it and Unblock the Notifications