ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಶನಿವಾರ ಮತ್ತೊಮ್ಮೆ ತೈಲ ದರ ಏರಿಕೆ ಮಾಡಿದ್ದು, ಸತತ ಐದನೇ ದಿನವು ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ತುಂಬಾನೆ ತುಟ್ಟಿಯಾಗಿದ್ದು, ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 30 ಪೈಸೆ ಏರಿಕೆಗೊಂಡು 88.44 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 36 ಪೈಸೆ ಹೆಚ್ಚಾಗಿ 78.74 ರೂಪಾಯಿಗೆ ಮುಟ್ಟಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 88.44 ರೂ. ಮತ್ತು ಡೀಸೆಲ್ ದರ 78.74 ರೂ.
ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 89.13 ರೂ. ಮತ್ತು ಡೀಸೆಲ್ ದರ 82.33 ರೂ.
ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.33 ರೂ. ಮತ್ತು ಡೀಸೆಲ್ ದರ 85.70 ರೂ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.40 ರೂ. ಮತ್ತು ಡೀಸೆಲ್ ದರ 83.47 ರೂ.
ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.96 ರೂ. ಮತ್ತು ಡೀಸೆಲ್ ದರ 85.89 ರೂ.
ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.70 ರೂ. ಮತ್ತು ಡೀಸೆಲ್ ದರ 83.86 ರೂ.


Click it and Unblock the Notifications