ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಹೆಚ್ಚಳ: ಜನವರಿ 23ರಂದು ಎಷ್ಟಿದೆ?
ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರಗಳು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿದ್ದು, ಶನಿವಾರ ಸರ್ಕಾರಿ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರ್‌ಗೆ 25 ಪೈಸೆ ಏರಿಕೆ ಮಾಡಿವೆ. ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 25 ಪೈಸೆ ಹೆಚ್ಚಳಗೊಂಡು 85.70 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 25 ಪೈಸೆ ಏರಿಕೆಗೊಂಡು 75.88 ರೂಪಾಯಿ ದಾಖಲಾಗಿದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದ್ದು, ಕ್ರಮವಾಗಿ ಲೀಟರ್‌ಗೆ 93.59 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 83.85 ರೂ. ತಲುಪಿಬಿಟ್ಟಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿನಂತಿದೆ:
ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 85.70 ರುಪಾಯಿ, 1 ಲೀಟರ್ ಡೀಸಸೆಲ್ ಬೆಲೆ ಪ್ರತಿ ಲೀಟರ್‌ಗೆ 75.88 ರುಪಾಯಿ
ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 87.11 ರುಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 79.48 ರುಪಾಯಿ
ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗ 92.28 ರುಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 82.66 ರುಪಾಯಿ
ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗ 88.59 ರುಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 80.47 ರುಪಾಯಿ
ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 88.38 ರುಪಾಯಿ, ಅದೇ ಸಮಯದಲ್ಲಿ 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 81.23 ರುಪಾಯಿ