ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತಿನ ಬಿಡುಗಡೆಗಾಗಿ ರೈತರು ಕಾತರದಿಂದ ಕಾಯುತ್ತಿದ್ದಾರೆ.ಪಿಎಂ ಕಿಸಾನ್ ಭಾರತದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡಲು ವಿನ್ಯಾಸಗೊಳಿಸಲಾದ ಪ್ರಮುಖ ಸರ್ಕಾರ ಪ್ರಮುಖ ಉಪಕ್ರಮ ಎಂದರೆ ತಪ್ಪಾಗಲಾರದು. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 18 ನೇ ಕಂತನ್ನು ಭಾರತ ಸರ್ಕಾರವು ಕಳೆದ ವರ್ಷ ಅಕ್ಟೋಬರ್ 05ರಂದು ಬಿಡುಗಡೆ ಮಾಡಿತ್ತು. ಜೂನ್ ನಲ್ಲಿ ಇದರ 17 ನೇ ಕಂತು ಹಾಗೂ 16 ನೇ ಕಂತನ್ನು ಕಳೆದ ವರ್ಷದ ಫೆಬ್ರವರಿಯಲ್ಲಿ ಬಿಡುಗಡೆ ಮಾಡಲಾಗಿತ್ತು. ಇದೀಗ ಈ ಯೋಜನೆಯ ಫಲಾನುಭವಿಗಳು 19 ನೇ ಕಂತಿಗಾಗಿ ಕಾಯುತ್ತಿದ್ದಾರೆ.
ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಹಣ ಆಗಿದೆ. ಇದನ್ನು ಮೂರು ಸಮಾನ ಕಂತುಗಳಲ್ಲಿ 2 ಪ್ರತಿ ವರ್ಷ ನೀಡಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಭೂಮಿ ಹೊಂದಿರುವ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡಲು ಈ ಯೋಜನೆಯನ್ನು ಫೆಬ್ರವರಿ 24, 2019 ರಂದು ಪ್ರಾರಂಭಿಸಲಾಯಿತು. 2019 ರ ಮಧ್ಯಂತರ ಬಜೆಟ್‌ನಲ್ಲಿ ಆಗಿನ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಘೋಷಿಸಿದರು. ಇದು ಈಗ ವಿಶ್ವದ ಅತಿದೊಡ್ಡ ನೇರ ಲಾಭ ವರ್ಗಾವಣೆ ಯೋಜನೆಯಾಗಿದೆ.

ಪಿಎಂ ಕಿಸಾನ್ 19ನೇ ಕಂತಿನ ನಿರೀಕ್ಷಿತ ದಿನಾಂಕ
19 ನೇ ಕಂತು ಫೆಬ್ರವರಿ 2025 ರ ಕೊನೆಯ ವಾರದಲ್ಲಿ ವಿತರಿಸುವ ನಿರೀಕ್ಷೆಯಿದೆ. ಸರ್ಕಾರ ಇನ್ನೂ ಪಿಎಂ ಕಿಸಾನ್ 19ನೇ ಕಂತಿನ ಹಣ ಬಿಡುಗಡೆ ದಿನಾಂಕವನ್ನು ನಿಖರವಾಗಿ ಹೇಳದಿದ್ದರೂ, ಪಿಎಂ ಕಿಸಾನ್ ಪಾವತಿಗಳನ್ನು ಸಾಮಾನ್ಯವಾಗಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಸ್ಥಿರವಾದ ವೇಳಾಪಟ್ಟಿಯನ್ನು ಅನುಸರಿಸಿ ನೀಡಲಾಗುತ್ತದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಫೆಬ್ರವರಿ 2025 ರ ಅಂತ್ಯದ ವೇಳೆಗೆ 19 ನೇ ಕಂತನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ.
ಪಿಎಂ ಕಿಸಾನ್ 19ನೇ ಕಂತಿನ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ?
ರೈತರು ತಮ್ಮ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪಾವತಿ ಸ್ಥಿತಿಯನ್ನು ಈ ಸರಳ ಹಂತಗಳನ್ನು ಅನುಸರಿಸುವ ಮೂಲಕ ಪರಿಶೀಲಿಸಬಹುದು:
ಅಧಿಕೃತ ಪಿಎಂ ಕಿಸಾನ್ ಪೋರ್ಟಲ್ https://pmkisan.gov.in. ಭೇಟಿ ನೀಡಿ .
'ರೈತರ ಕಾರ್ನರ್' ವಿಭಾಗದ ಅಡಿಯಲ್ಲಿ ''Beneficiary Status'' ಮೇಲೆ ಕ್ಲಿಕ್ ಮಾಡಿ.
ನಿಮ್ಮ ಆಧಾರ್ ಸಂಖ್ಯೆ, ನೋಂದಣಿ ಸಂಖ್ಯೆ, ನೋಂದಾಯಿತ ಮೊಬೈಲ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆ ಸಂಖ್ಯೆಯನ್ನು ಒದಗಿಸಿ.
ಈ ವ್ಯವಸ್ಥೆಯು ಹಿಂದಿನ ಕಂತುಗಳು ಮತ್ತು ಮುಂಬರುವ ಪಾವತಿಗಳ ವಿವರಗಳನ್ನು ಪ್ರದರ್ಶಿಸುತ್ತದೆ.
ಪಿಎಂ ಕಿಸಾನ್ ಗೆ ಅರ್ಜಿ ಸಲ್ಲಿಸುವುದು ಹೇಗೆ?
ಹೊಸ ರೈತರು ಪಿಎಂ ಕಿಸಾನ್ ಸಮ್ಮಾನ್
ಹಂತ 1: ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: 'ಹೊಸ ರೈತ ನೋಂದಣಿ' ('New Farmer Registration')ಮೇಲೆ ಕ್ಲಿಕ್ ಮಾಡಿ.
ಹಂತ 3: ಆಧಾರ್ ಸಂಖ್ಯೆ, ರಾಜ್ಯ, ಜಿಲ್ಲೆ ಮತ್ತು ವೈಯಕ್ತಿಕ/ಬ್ಯಾಂಕ್ ಮಾಹಿತಿಯಂತಹ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
ಹಂತ 4: ಫಾರ್ಮ್ ಅನ್ನು ಸಲ್ಲಿಸಿ ಮತ್ತು ಭವಿಷ್ಯದ ಅಗತ್ಯಕ್ಕಾಗಿ ಇದನ್ನು ಸೇವ್ ಮಾಡಿ ನಿಮ್ಮ ಬಳಿ ಇಟ್ಟುಕೊಳ್ಳಿ
ಹಂತ 5: ಅರ್ಜಿಯನ್ನು ಸಲ್ಲಿಸಿದ ನಂತರ, ಅನುಮೋದನೆ ನೀಡುವ ಮೊದಲು ಸ್ಥಳೀಯ ಅಧಿಕಾರಿಗಳು ಅದನ್ನು ಪರಿಶೀಲಿಸುತ್ತಾರೆ


Click it and Unblock the Notifications