ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತಿನ ಬಿಡುಗಡೆಗಾಗಿ ರೈತರು ಕಾತರದಿಂದ ಕಾಯುತ್ತಿದ್ದಾರೆ. ಈ ಯೋಜನೆಯಡಿಯಲ್ಲಿ, ರೈತರಿಗೆ ಸಾಲವಾಗಿ ಕೇಂದ್ರಸರ್ಕಾರ ಪ್ರತಿ ವರ್ಷ 6000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ. ಸರ್ಕಾರವು DBT (ನೇರ ಪ್ರಯೋಜನ ವರ್ಗಾವಣೆ) ಮೂಲಕ ಕಳುಹಿಸುವ ಪ್ರತಿ ಕಂತಿನಲ್ಲಿ ರೈತರು 2000 ರೂ.ಗನ್ನು ಪಡೆಯಬಹುದು.
ಹೌದು, ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಹಣವನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಹಣ ಆಗಿದೆ. ಇದನ್ನು ಮೂರು ಸಮಾನ ಕಂತುಗಳಲ್ಲಿ 2 ಪ್ರತಿ ವರ್ಷ ನೀಡಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಭೂಮಿ ಹೊಂದಿರುವ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡಲು ಈ ಯೋಜನೆಯನ್ನು ಫೆಬ್ರವರಿ 24, 2019 ರಂದು ಕೇಂದ್ರ ಸರ್ಕಾರ ಆರಂಭವನ್ನು ಮಾಡಿದೆ.

20ನೇ ಕಂತಿನ ಹಣ ಯಾವಾಗ ಬಿಡುಗಡೆ..?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ 20ನೇ ಕಂತು ಬಿಡುಗಡೆಯಾಗಲಿದೆ. ಇಲ್ಲಿಯವರೆಗೆ, ಈ ಯೋಜನೆಯ 19 ಕಂತುಗಳನ್ನು ರೈತರಿಗೆ ಹಣ ಸೇರಿದೆ. ಕೇಂದ್ರ ಸರ್ಕಾರವು ಈ ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಬ್ಯಾಂಕ್ ಖಾತೆಗಳಿಗೆ ಕಳುಹಿಸುತ್ತದೆ. 19 ನೇ ಕಂತನ್ನು ಫೆಬ್ರವರಿ 2025 ರಲ್ಲಿ ಕಳುಹಿಸಲಾಗಿತ್ತು, ಆದರೆ ಅದಕ್ಕೂ ಮೊದಲು 18 ನೇ ಕಂತನ್ನು ಅಕ್ಟೋಬರ್ 2024 ರಲ್ಲಿ ನೀಡಲಾಗಿದೆ. ಜೂನ್ ಅಂತ್ಯದಲ್ಲಿ 20 ನೇ ಕಂತು ಬಿಡುಗಡೆಯಾಗುವ ಸಾಧ್ಯತೆಯಿದೆ. ಆದರೆ, ಅದರ ಅಧಿಕೃತ ದಿನಾಂಕವನ್ನು ಸರ್ಕಾರ ಇನ್ನೂ ಘೋಷಣೆಯನ್ನು ಮಾಡಿಲ್ಲ.
ಯೋಜನೆಯ ಲಾಭ ಯಾರಿಗೆ ಸಿಗುತ್ತದೆ..?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಪ್ರಯೋಜನವನ್ನು ನೀಡಲಾಗುತ್ತದೆ. ರೈತ ಮತ್ತು ಅವನ ಮಗ ಇಬ್ಬರೂ ಕೃಷಿ ಮಾಡುತ್ತಿದ್ದರೂ ಸಹ, ಇಬ್ಬರೂ ಒಟ್ಟಿಗೆ ಈ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ. ಈ ಯೋಜನೆಯ ಪ್ರಯೋಜನವನ್ನು ಕೃಷಿ ಭೂಮಿಯನ್ನು ಯಾರ ಹೆಸರಿನಲ್ಲಿ ನೋಂದಾಯಿಸಲಾಗಿದೆಯೋ ಆ ಸದಸ್ಯರಿಗೆ ಮಾತ್ರ ನೀಡಲಾಗುತ್ತದೆ, ಅಂದರೆ, ಭೂಮಿಯನ್ನು ಯಾರ ಹೆಸರಿನಲ್ಲಿ ನೋಂದಾಯಿಸಲಾಗಿದೆಯೋ ಅವರನ್ನು ಅರ್ಹರೆಂದು ಪರಿಗಣಿಸಲಾಗುತ್ತದೆ.
ಪಿಎಂ ಕಿಸಾನ್ 19ನೇ ಕಂತಿನ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ?
- ಅಧಿಕೃತ ಪಿಎಂ ಕಿಸಾನ್ ಪೋರ್ಟಲ್ https://pmkisan.gov.in. ಭೇಟಿ ನೀಡಿ .
- 'ರೈತರ ಕಾರ್ನರ್' ವಿಭಾಗದ ಅಡಿಯಲ್ಲಿ ''Beneficiary Status'' ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಆಧಾರ್ ಸಂಖ್ಯೆ, ನೋಂದಣಿ ಸಂಖ್ಯೆ, ನೋಂದಾಯಿತ ಮೊಬೈಲ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆ ಸಂಖ್ಯೆಯನ್ನು ಒದಗಿಸಿ.
- ಈ ವ್ಯವಸ್ಥೆಯು ಹಿಂದಿನ ಕಂತುಗಳು ಮತ್ತು ಮುಂಬರುವ ಪಾವತಿಗಳ ವಿವರಗಳನ್ನು ಪ್ರದರ್ಶಿಸುತ್ತದೆ.
ಪಿಎಂ ಕಿಸಾನ್ ಗೆ ಅರ್ಜಿ ಸಲ್ಲಿಸುವುದು ಹೇಗೆ?
ಹಂತ 1: ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: 'ಹೊಸ ರೈತ ನೋಂದಣಿ' ('New Farmer Registration')ಮೇಲೆ ಕ್ಲಿಕ್ ಮಾಡಿ.
ಹಂತ 3: ಆಧಾರ್ ಸಂಖ್ಯೆ, ರಾಜ್ಯ, ಜಿಲ್ಲೆ ಮತ್ತು ವೈಯಕ್ತಿಕ/ಬ್ಯಾಂಕ್ ಮಾಹಿತಿಯಂತಹ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
ಹಂತ 4: ಫಾರ್ಮ್ ಅನ್ನು ಸಲ್ಲಿಸಿ ಮತ್ತು ಭವಿಷ್ಯದ ಅಗತ್ಯಕ್ಕಾಗಿ ಇದನ್ನು ಸೇವ್ ಮಾಡಿ ನಿಮ್ಮ ಬಳಿ ಇಟ್ಟುಕೊಳ್ಳಿ
ಹಂತ 5: ಅರ್ಜಿಯನ್ನು ಸಲ್ಲಿಸಿದ ನಂತರ, ಅನುಮೋದನೆ ನೀಡುವ ಮೊದಲು ಸ್ಥಳೀಯ ಅಧಿಕಾರಿಗಳು ಅದನ್ನು ಪರಿಶೀಲಿಸುತ್ತಾರೆ


Click it and Unblock the Notifications