ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಜುಲೈ ತಿಂಗಳಿನ ಹಣ ಬಿಡುಗಡೆಗಾಗಿ ರೈತರು ಕಾತರದಿಂದ ಕಾಯುತ್ತಿದ್ದಾರೆ. ಈ ಯೋಜನೆಯಡಿಯಲ್ಲಿ, ರೈತರಿಗೆ ಸಾಲವಾಗಿ ಕೇಂದ್ರಸರ್ಕಾರ ಪ್ರತಿ ವರ್ಷ 6000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ. ಸರ್ಕಾರವು DBT (ನೇರ ಪ್ರಯೋಜನ ವರ್ಗಾವಣೆ) ಮೂಲಕ ಕಳುಹಿಸುವ ಪ್ರತಿ ಕಂತಿನಲ್ಲಿ ರೈತರು 2000 ರೂ.ಗನ್ನು ಪಡೆಯಬಹುದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಲ್ಲಿ ನೋಂದಾಯಿಸಿಕೊಂಡ ರೈತರು ಜೂನ್‌ನಲ್ಲಿ ಯೋಜನೆಯ ಇಪ್ಪತ್ತನೇ ಕಂತು ಪಡೆಯುವ ನಿರೀಕ್ಷೆಯಲ್ಲಿ ಇದ್ದಾರೆ. ಭೂಮಿ ಹೊಂದಿರುವ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡಲು ಈ ಯೋಜನೆಯನ್ನು ಫೆಬ್ರವರಿ 24, 2019 ರಂದು ಕೇಂದ್ರ ಸರ್ಕಾರ ಆರಂಭವನ್ನು ಮಾಡಿದೆ.

ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಹಣವನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಹಣ ಆಗಿದೆ. ಇದನ್ನು ಮೂರು ಸಮಾನ ಕಂತುಗಳಲ್ಲಿ 2 ಪ್ರತಿ ವರ್ಷ ನೀಡಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
20ನೇ ಕಂತಿನ ಹಣ ಬಿಡುಗಡೆಯ ದಿನಾಂಕ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಜುಲೈ ತಿಂಗಳ ಕಂತು ವಿಳಂಬವಾಗುತ್ತಿದೆ ಎಂಬ ವರದಿಗಳ ನಡುವೆ, ಫಲಾನುಭವಿಗಳು ಜುಲೈ ಮೊದಲಾರ್ಧದಲ್ಲಿ 20 ನೇ ಕಂತು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ವರದಿಗಳ ಪ್ರಕಾರ ರೈತರಿಗೆ ಜುಲೈ 18 ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಹಣ ಖಾತೆಗೆ ವರ್ಗಾವಣೆಯಾಗಬಹುದು.
ಈ ಯೋಜನೆಯ ವಿಶೇಷತೆ ಏನು?
ರೈತರು ಕೃಷಿ ಸಾಮಗ್ರಿಗಳು ಮತ್ತು ಮನೆಯ ಅಗತ್ಯಗಳನ್ನು ಪೂರೈಸಲು ಅವರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸಲು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ-ಕಿಸಾನ್) ಅನ್ನು ಪ್ರಾರಂಭಿಸಿತು. ಪ್ರಧಾನಿ ಮೋದಿ ಅವರು ಫೆಬ್ರವರಿ 24, 2025 ರಂದು ಯೋಜನೆಯ ಹತ್ತೊಂಬತ್ತನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ.
ಲಾಭ ಯಾರಿಗೆ ಸಿಗುತ್ತದೆ..?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಪ್ರಯೋಜನವನ್ನು ನೀಡಲಾಗುತ್ತದೆ. ರೈತ ಮತ್ತು ಅವನ ಮಗ ಇಬ್ಬರೂ ಕೃಷಿ ಮಾಡುತ್ತಿದ್ದರೂ ಸಹ, ಇಬ್ಬರೂ ಒಟ್ಟಿಗೆ ಈ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ. ಈ ಯೋಜನೆಯ ಪ್ರಯೋಜನವನ್ನು ಕೃಷಿ ಭೂಮಿಯನ್ನು ಯಾರ ಹೆಸರಿನಲ್ಲಿ ನೋಂದಾಯಿಸಲಾಗಿದೆಯೋ ಆ ಸದಸ್ಯರಿಗೆ ಮಾತ್ರ ನೀಡಲಾಗುತ್ತದೆ, ಅಂದರೆ, ಭೂಮಿಯನ್ನು ಯಾರ ಹೆಸರಿನಲ್ಲಿ ನೋಂದಾಯಿಸಲಾಗಿದೆಯೋ ಅವರನ್ನು ಅರ್ಹರೆಂದು ಪರಿಗಣಿಸಲಾಗುತ್ತದೆ.
ಪಿಎಂ ಕಿಸಾನ್ 20ನೇ ಕಂತಿನ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ?
- ಅಧಿಕೃತ ಪಿಎಂ ಕಿಸಾನ್ ಪೋರ್ಟಲ್ https://pmkisan.gov.in. ಭೇಟಿ ನೀಡಿ .
- 'ರೈತರ ಕಾರ್ನರ್' ವಿಭಾಗದ ಅಡಿಯಲ್ಲಿ ''Beneficiary Status'' ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಆಧಾರ್ ಸಂಖ್ಯೆ, ನೋಂದಣಿ ಸಂಖ್ಯೆ, ನೋಂದಾಯಿತ ಮೊಬೈಲ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆ ಸಂಖ್ಯೆಯನ್ನು ಒದಗಿಸಿ.
- ಈ ವ್ಯವಸ್ಥೆಯು ಹಿಂದಿನ ಕಂತುಗಳು ಮತ್ತು ಮುಂಬರುವ ಪಾವತಿಗಳ ವಿವರಗಳನ್ನು ಪ್ರದರ್ಶಿಸುತ್ತದೆ.
ಹೀಗೆ ಹಣ ಬಿಡುಗಡೆಯ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು.


Click it and Unblock the Notifications