ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ

ಕೊರೊನಾವೈರಸ್ ಸೋಂಕು ಹರಡುವಿಕೆ ತಪ್ಪಿಸಲು ಲಾಕ್‌ಡೌನ್‌ ಸಂಬಂಧಪಟ್ಟಂತೆ ಇಂದು(ಮಂಗಳವಾರ) ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರವ್ಯಾಪಿ ವಿಧಿಸಲಾಗಿರುವ ಮೂರನೇ ಹಂತದ ಲಾಕ್‌ಡೌನ್‌ ಮೇ 17ರಂದು ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮಾತನಾಡುವ ಸಾಧ್ಯತೆ ಹೆಚ್ಚಿದ್ದು ಪಿಎಂಒ ಟ್ವೀಟ್ ಮಾಡಿದೆ.

ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ

ಲಾಕ್‌ಡೌನ್ ಮೂರನೇ ಹಂತ ಕೊನೆಯಾಗಲು ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಸೋಮವಾರ(ಮೇ 11)ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಜೊತೆಗೆ ನರೇಂದ್ರ ಮೋದಿ ವಿಡಿಯೋ ಸಂವಾದ ನಡೆಸಿ ಅಭಿಪ್ರಾಯವನ್ನು ಸಂಗ್ರಹಿಸಿದ್ದರು. ಈ ಸಂವಾದದಲ್ಲಿ ಕಂಟೈನ್‌ಮೆಂಟ್ ವಲಯ ಬಿಟ್ಟು ಉಳಿದ ಎಲ್ಲಾ ಭಾಗಗಳಲ್ಲಿ ಆರ್ಥಿಕ ಚಟುವಟಿಕೆ ಆರಂಭಿಸಲು ಅವಕಾಶ ನೀಡುವಂತೆ ಅಭಿಪ್ರಾಯ ವ್ಯಕ್ತವಾಗಿತ್ತು.

ರಾಜ್ಯಗಳ ಮುಖ್ಯಮಂತ್ರಿ ಜೊತೆಗೆ ಸಂವಾದದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವ್ಯಾಪಿ ಲಾಕ್‌ಡೌನ್ ಮುಂದುವರಿಸುತ್ತಾರ ಅಥವಾ ಮತ್ತಷ್ಟು ವಿನಾಯಿತಿಗಳನ್ನು ನೀಡುತ್ತಾರ ಎಂಬ ಕುತೂಹಲವು ಹೆಚ್ಚಾಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+