ಆಗಸ್ಟ್ 10..ಬೆಂಗಳೂರು ಪಾಲಿಗೆ ಅತ್ಯಂತ ಮಹತ್ವದ ದಿನ. ಏಕೆಂದರೆ ನಾಳೆ ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನಮ್ಮ ಮೆಟ್ರೋದ ಬಹುನಿರೀಕ್ಷಿತ ಹಳದಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಅತಿಮುಖ್ಯವಾಗಿ ಗಮನ ಇರಿಸಬೇಕಾದ ಸಂಗತಿ ಏನಂದ್ರೆ, ನಾಳೆ ನಗರದ ವಿವಿಧ ಭಾಗಗಳಲ್ಲಿ ಸಂಚಾರ ಅಸೌಕರ್ಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರು ಸಂಚಾರ ಪೊಲೀಸರು (BTP) ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಪಾರ್ಕಿಂಗ್ ಮೇಲೆ ತಾತ್ಕಾಲಿಕ ನಿರ್ಬಂಧ ಹೇರಿದ್ದಾರೆ.

ಮೋದಿಯವರ ಕಾರ್ಯಕ್ರಮದ ವಿವರ:
ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ಬೆಳಿಗ್ಗೆ 10.30ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಅವರು ಹೆಲಿಕಾಪ್ಟರ್ ಮತ್ತು ರಸ್ತೆ ಮಾರ್ಗವನ್ನು ಬಳಸಿಕೊಂಡು ಕೆಎಸ್‌ಆರ್ ಬೆಂಗಳೂರು (ನಗರ) ರೈಲು ನಿಲ್ದಾಣ ತಲುಪಲಿದ್ದಾರೆ. ಅಲ್ಲಿ ಅವರು ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಕೆಎಸ್‌ಆರ್ ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ, ಹಾಗೂ ಅಜ್ನಿ (ನಾಗ್ಪುರ)-ಪುಣೆ ಮಾರ್ಗಗಳು.
ರೈಲು ನಿಲ್ದಾಣದ ಕಾರ್ಯಕ್ರಮದ ನಂತರ, ಮೋದಿ ರಸ್ತೆ ಮಾರ್ಗದಿಂದ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ತೆರಳಲಿದ್ದಾರೆ. ಬೆಳಿಗ್ಗೆ 11.45 ರಿಂದ ಮಧ್ಯಾಹ್ನ 12.50ರವರೆಗೆ ಅವರು ರಾಗಿಗುಡ್ಡದಿಂದ ಎಲೆಕ್ಟ್ರಾನಿಕ್ಸ್ ಸಿಟಿವರೆಗೆ ಮೆಟ್ರೋದಲ್ಲಿ ಪ್ರಯಾಣ ಮಾಡಲಿದ್ದಾರೆ. ಇದು ಹಳದಿ ಮಾರ್ಗದ ಮೊದಲ ಅಧಿಕೃತ ಪ್ರಯಾಣವಾಗಲಿದೆ.
ಮಧ್ಯಾಹ್ನ 12.50ಕ್ಕೆ ಎಲೆಕ್ಟ್ರಾನಿಕ್ಸ್ ಸಿಟಿ ಮೆಟ್ರೋ ನಿಲ್ದಾಣ ತಲುಪಿದ ನಂತರ, ಅವರು ರಸ್ತೆ ಮಾರ್ಗದ ಮೂಲಕ ಎಲೆಕ್ಟ್ರಾನಿಕ್ಸ್ ಸಿಟಿ ಹಂತ 1ರಲ್ಲಿರುವ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT) ತಲುಪಲಿದ್ದಾರೆ. ಐಐಐಟಿಬಿ ಸಭಾಂಗಣದಲ್ಲಿ, ಮೋದಿ ಹಳದಿ ಮಾರ್ಗವನ್ನು ಉದ್ಘಾಟಿಸಿ, ಮೆಟ್ರೋ 3ನೇ ಹಂತದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಎಚ್‌ಎಎಲ್ ವಿಮಾನ ನಿಲ್ದಾಣ ತಲುಪಿದ ಬಳಿಕ, ಮಧ್ಯಾಹ್ನ 2.45ಕ್ಕೆ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.
ಸಂಚಾರ ನಿರ್ಬಂಧ ಇರುವ ಪ್ರಮುಖ ರಸ್ತೆ ಪ್ರದೇಶಗಳು:
ಪ್ರಧಾನಿಯವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಭಾನುವಾರ ನಗರದ ಕೆಲ ರಸ್ತೆಗಳು ನಿರ್ದಿಷ್ಟ ಸಮಯಗಳಲ್ಲಿ ಸಂಪೂರ್ಣವಾಗಿ ವಾಹನ ಸಂಚಾರಕ್ಕೆ ಮುಚ್ಚಲ್ಪಡಲಿವೆ.
- ಬೆಳಿಗ್ಗೆ 8.30ರಿಂದ ಮಧ್ಯಾಹ್ನದವರೆಗೆ
- ಮಾರೇನಹಳ್ಳಿ ಮುಖ್ಯರಸ್ತೆ: ರಾಜಲಕ್ಷ್ಮಿ ಜಂಕ್ಷನ್‌ನಿಂದ 18ನೇ ಮುಖ್ಯರಸ್ತೆವರೆಗೆ.
- ಮಾರೇನಹಳ್ಳಿ ಈಸ್ಟ್ ಎಂಡ್ ಮುಖ್ಯರಸ್ತೆ: ಈಸ್ಟ್ ಎಂಡ್ ಜಂಕ್ಷನ್‌ನಿಂದ ಅರವಿಂದ್ ಜಂಕ್ಷನ್ ವರೆಗೆ.
ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ:
ಸಿಲ್ಕ್ ಬೋರ್ಡ್ ನಿಂದ ಎಲೆಕ್ಟ್ರಾನಿಕ್ಸ್ ಸಿಟಿವರೆಗೆ ಇರುವ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ.
ಹೊಸೂರು ರಸ್ತೆ - ಬೆಂಗಳೂರಿನಿಂದ ಹೊಸೂರು ಮತ್ತು ಹೊಸೂರಿನಿಂದ ಬೆಂಗಳೂರಿನ ಮಾರ್ಗಗಳು.
ಎಲೆಕ್ಟ್ರಾನಿಕ್ಸ್ ಸಿಟಿ ಹಂತ 1ರ ಇನ್ಫೋಸಿಸ್ ಅವೆನ್ಯೂ, ವೆಲಂಕಾಣಿ ರಸ್ತೆ, HP ಅವೆನ್ಯೂ ಭಾಗಗಳು.
ಪರ್ಯಾಯ ಮಾರ್ಗಗಳು:
- ಸಂಚಾರ ಪೊಲೀಸರು ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಿದ್ದಾರೆ, ಹೀಗಾಗಿ ಅವರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳಬಹುದು. ಮಾರೇನಹಳ್ಳಿ ಮುಖ್ಯರಸ್ತೆ ಮೂಲಕ ಜಯದೇವ ಆಸ್ಪತ್ರೆಗೆ ಹೋಗುವ ವಾಹನಗಳು ಸಾರಕ್ಕಿ ಮಾರ್ಕೆಟ್ ರಸ್ತೆ, 9ನೇ ಅಡ್ಡರಸ್ತೆ, ಐಜಿ ವೃತ್ತ, ಆರ್‌ವಿ ಡೆಂಟಲ್ ಜಂಕ್ಷನ್ ಮೂಲಕ ತೆರಳಬಹುದು.
- ಹೊರವರ್ತುಲ ರಸ್ತೆಯನ್ನು ಬಳಸಿಕೊಂಡು ಸಾರಕ್ಕಿ ಜಂಕ್ಷನ್ ಮೂಲಕ ಬನ್ನೇರುಘಟ್ಟ ರಸ್ತೆ ತಲುಪಬಹುದು.
- 4ನೇ ಮುಖ್ಯರಸ್ತೆಯಿಂದ ಬರುವ ವಾಹನಗಳು ರಾಜಲಕ್ಷ್ಮಿ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ, ಸಾರಕ್ಕಿ ಮುಖ್ಯರಸ್ತೆ, ಐಜಿ ವೃತ್ತ, ಆರ್‌ವಿ ಡೆಂಟಲ್ ಮಾರ್ಗದ ಮೂಲಕ ಜಯದೇವ ಆಸ್ಪತ್ರೆ ತಲುಪಬಹುದು.
- ಈಸ್ಟ್ ಎಂಡ್ ವೃತ್ತದಿಂದ ಬನಶಂಕರಿ ಕಡೆಗೆ ಹೋಗುವವರು 29ನೇ ಮುಖ್ಯರಸ್ತೆ, 28ನೇ ಮುಖ್ಯರಸ್ತೆ, ಡೆಲ್ಮಿಯಾ ಜಂಕ್ಷನ್, ಹೊರವರ್ತುಲ ರಸ್ತೆ, ಸಾರಕ್ಕಿ ಜಂಕ್ಷನ್ ಮೂಲಕ ಕನಕಪುರ ರಸ್ತೆ ತಲುಪಬಹುದು.
- ಹೊಸೂರು ರಸ್ತೆಯಿಂದ ಕನಕಪುರ, ಮೈಸೂರು, ತುಮಕೂರು ರಸ್ತೆ ಕಡೆಗೆ ಹೋಗುವವರು ಬೊಮ್ಮಸಂದ್ರ ಜಂಕ್ಷನ್‌ನಿಂದ ಜಿಗಣಿ ರಸ್ತೆ, ಬನ್ನೇರುಘಟ್ಟ ರಸ್ತೆ, ನೈಸ್ ರಸ್ತೆ ಬಳಸಬಹುದು.
- ಸರ್ಜಾಪುರ, ವರ್ತೂರು, ವೈಟ್‌ಫೀಲ್ಡ್, ಹೊಸಕೋಟೆ ಕಡೆಗೆ ಹೋಗುವವರು ಚಂದಾಪುರ ಜಂಕ್ಷನ್‌ನಿಂದ ದೊಮ್ಮಸಂದ್ರ ರಸ್ತೆಯ ಮೂಲಕ ಪ್ರಯಾಣಿಸಬಹುದು.
ಪಾರ್ಕಿಂಗ್ ನಿಷೇಧ:
ಮಾರೇನಹಳ್ಳಿ ಮುಖ್ಯರಸ್ತೆ, 4ನೇ ಮುಖ್ಯರಸ್ತೆ ಮತ್ತು 18ನೇ ಮುಖ್ಯರಸ್ತೆಗಳಲ್ಲಿ ಯಾವುದೇ ವಾಹನ ನಿಲುಗಡೆ ಮಾಡಲು ಅನುಮತಿ ಇರುವುದಿಲ್ಲ. ಇದೇ ರೀತಿ ಎಲೆಕ್ಟ್ರಾನಿಕ್ಸ್ ಸಿಟಿ ಹಂತ 1ರ ಕೆಲವು ಒಳರಸ್ತೆಗಳಲ್ಲಿ ಸಹ ಪಾರ್ಕಿಂಗ್ ನಿಷೇಧ ಜಾರಿಯಲ್ಲಿರುತ್ತದೆ.
ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಹೆಚ್ಚಿನ ಗಣ್ಯರು ಮತ್ತು ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಸಂಚಾರದಲ್ಲಿ ಹೆಚ್ಚಿನ ಒತ್ತಡ ಉಂಟಾಗಬಹುದು. ಸಂಚಾರ ಪೊಲೀಸರು ಸಾರ್ವಜನಿಕರಿಗೆ, ಮುಂಚಿತವಾಗಿ ತಮ್ಮ ಮಾರ್ಗವನ್ನು ಯೋಜಿಸಿಕೊಳ್ಳಲು, ಸಾರ್ವಜನಿಕ ಸಾರಿಗೆ ಬಳಸಲು ಮತ್ತು ಸೂಚನೆಗಳನ್ನು ಪಾಲಿಸಲು ಮನವಿ ಮಾಡಿದ್ದಾರೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications