ವಿಜಯ ರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರದಂದು (ಅಕ್ಟೋಬರ್ 12, 2020) 100 ರುಪಾಯಿ ನಾಣ್ಯವನ್ನು ವರ್ಚುವಲ್ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು. ಈ ವಿಶೇಷ ನಾಣ್ಯವನ್ನು ಹಣಕಾಸು ಸಚಿವಾಲಯವು ಟಂಕಿಸಿದೆ. ಅಂದ ಹಾಗೆ ವಿಜಯ ರಾಜೇ ಸಿಂಧಿಯಾ ಅವರು ಜನಸಂಘದ ನಾಯಕಿ ಹಾಗೂ ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರು.
"ವಿಜಯ ರಾಜೇ ಸಿಂಧಿಯಾ ಅವರ ಗೌರವಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿ 100 ರುಪಾಯಿಯ ವಿಶೇಷ ನಾಣ್ಯವನ್ನು ವರ್ಚುವಲ್ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ. ವಿಜಯ ರಾಜೇ ಸಿಂಧಿಯಾ ಅವರನ್ನು ಗ್ವಾಲಿಯರ್ ನ ರಾಜಮಾತಾ ಅಂತಲೇ ಖ್ಯಾತಿ ಗಳಿಸಿದ್ದರು," ಎಂದು ಸಂಸ್ಕೃತಿ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿತ್ತು.
ಸಿಂಧಿಯಾ ಅವರ ಕುಟುಂಬ ಸದಸ್ಯರು, ಇತರ ಗಣ್ಯರು ದೇಶದ ನಾನಾ ಭಾಗಗಳಿಂದ ವರ್ಚುವಲ್ ಪ್ಲಾಟ್ ಫಾರ್ಮ್ ನಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿತ್ತು. ಇನ್ನು ಮೋದಿ ಕೂಡ ತಮ್ಮ ಟ್ವಿಟ್ಟರ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದರು.

ರಾಜಮಾತಾ ಸಿಂಧಿಯಾ ಅವರ ಜೀವನ ಹಾಗೂ ಕೆಲಸ ಯಾವಾಗಲೂ ಬಡವರಿಗೆ ಭರವಸೆ ತುಂಬುವಂಥದ್ದು. ಅವರ ಜೀವನ ಜನಸೇವೆಗೆ ಮೀಸಲಾಗಿತ್ತು ಎಂದು ಪ್ರಧಾನಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ. ವಿಜಯ ರಾಜೇ ಸಿಂಧಿಯಾ ಅವರು ಜನಿಸಿದ್ದು ಅಕ್ಟೋಬರ್ 12, 1919ರಲ್ಲಿ. ಅವರ ಮಗಳು ವಸುಂಧರಾ ರಾಜೇ ಹಾಗೂ ಮೊಮ್ಮಗ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಯ ಹಿರಿಯ ಮುಖಂಡರಾಗಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications