For Quick Alerts
ALLOW NOTIFICATIONS  
For Daily Alerts

ಪ್ರಧಾನ ಮಂತ್ರಿ ಆವಾಸ ಯೋಜನೆ: 1.75 ಲಕ್ಷ ಮನೆಗಳನ್ನು ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

|

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆ (ಗ್ರಾಮೀಣ) ಅಡಿಯಲ್ಲಿ ನಿರ್ಮಿಸಲಾದ 1.75 ಲಕ್ಷ ಮನೆಗಳನ್ನು ಶನಿವಾರ ಉದ್ಘಾಟಿಸಿದರು.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಯೋಜನೆಯ ಕೆಲವು ಫಲಾನುಭವಿಗಳೊಂದಿಗೆ ಮಾತನಾಡಲಿದ್ದಾರೆ.

2022 ರ ವೇಳೆಗೆ ಬಡವರಿಗೆ ಮನೆಗಳನ್ನು ಒದಗಿಸುವ ಗುರಿಯನ್ನು ಸಾಧಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಮೋದಿ ಶುಕ್ರವಾರ ಹೇಳಿದ್ದರು.

PMAY: 1.75 ಲಕ್ಷ ಮನೆಗಳನ್ನು ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

"2022 ರ ವೇಳೆಗೆ ದೇಶದ ಪ್ರತಿಯೊಂದು ಕುಟುಂಬಕ್ಕೂ ಮನೆ ನೀಡುವ ಗುರಿಯನ್ನು ಸಾಧಿಸುವಲ್ಲಿ ಇದು ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಪಿಎಂ ಆವಾಸ ಯೋಜನೆ-ಗ್ರಾಮೀಣ ಅಡಿಯಲ್ಲಿ ನಿರ್ಮಿಸಲಾದ ಈ ಮನೆಗಳು ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಅಭಿವೃದ್ಧಿ ಕಾರ್ಯಗಳನ್ನು ತಡೆಯಲು ಸಾಧ್ಯವಿಲ್ಲ ಎಂಬುದಕ್ಕೆ ಪುರಾವೆಯಾಗಿದೆ" ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾರ್ಚ್ 2022 ರ ವೇಳೆಗೆ 20 ಮಿಲಿಯನ್ ಕೈಗೆಟುಕುವ ಮನೆಗಳನ್ನು ನಿರ್ಮಿಸುವುದು ಪ್ರಧಾನ ಮಂತ್ರಿ ಆವಾಸ ಯೋಜನೆ ಗುರಿಯಾಗಿದೆ. ಪಿಎಂಎವೈ ನಗರ ಮತ್ತು ಗ್ರಾಮೀಣ ಬಡವರಿಗೆ ಕೈಗೆಟುಕುವ ವಸತಿ ಒದಗಿಸಲು 2015 ರಲ್ಲಿ ಪ್ರಾರಂಭಿಸಲಾದ ಭಾರತ ಸರ್ಕಾರದ ವಸತಿ ಯೋಜನೆಯಾಗಿದೆ.

English summary

PMAY: PM Modi To Inaugurate 1.75 Lakh Homes Built In MP Today

Prime Minister Narendra Modi inaugurate 1.75 lakh houses built in Madhya Pradesh under the Pradhan Mantri Awas Yojana (Rural) on Saturday.
Story first published: Saturday, September 12, 2020, 11:58 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X