ಲಾಕ್‌ಡೌನ್ ಮುಗಿದ ಮೇಲೆ ಕೇಂದ್ರ ಸರ್ಕಾರಿ ನೌಕರರಿಗೆ ವರ್ಕ್‌ ಫ್ರಮ್ ಹೋಮ್ ಯೋಜನೆ

ಕೊರೊನಾವೈರಸ್ ಸೋಂಕು ಹರಡುವಿಕೆಯ ಭೀತಿಯಿಂದ ದೇಶದ ಅನೇಕ ಖಾಸಗಿ ಕಂಪನಿಗಳು ಈಗಾಗಲೇ ತಮ್ಮ ಉದ್ಯೋಗಿಗಳಿಂದ ಮನೆಯಿಂದಲೇ ಕೆಲಸ ಮಾಡಿಸಿಕೊಳ್ಳುತ್ತಿವೆ. ಎಲ್ಲೆಡೆ ಕೊರೊನಾವೈರಸ್ ವ್ಯಾಪಕವಾಗಿ ಹರಡಿರುವುದರಿಂದ ಕಚೇರಿಗೆ ಹೋಗಿ ಕೆಲಸ ಮಾಡುವವರು ತುಂಬಾ ಕಡಿಮೆ.

ಇದೇ ರೀತಿಯಲ್ಲಿ ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರವು ತಮ್ಮ ಅಧಿಕಾರಿಗಳಿಗೆ ಮತ್ತು ನೌಕರರಿಗೆ ವರ್ಷದಲ್ಲಿ 15 ದಿನಗಳು ಮನೆಯಿಂದಲೇ ಕೆಲಸ ಮಾಡುವ(ವರ್ಕ್‌ ಫ್ರಂ ಹೋಮ್) ಸೌಲಭ್ಯ ನೀಡುವ ಬಗ್ಗೆ ಯೋಜನೆ ಸಿದ್ಧಪಡಿಸಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ವರ್ಕ್‌ ಫ್ರಮ್ ಹೋಮ್ ಯೋಜನೆ

ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ದೂರುಗಳ ಇಲಾಖೆ (ಡಿಎಆರ್‌ಪಿಜಿ) ಈ ಬಗ್ಗೆ ಕರಡು ರೂಪಿಸಿದ್ದು, ಇತರ ಸಚಿವಾಲಯ ಮತ್ತು ಇಲಾಖೆಗಳೊಂದಿಗೆ ವರ್ಕ್ ಫ್ರಮ್ ಹೋಮ್ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಿದೆ. ಮುಂಬರುವ ದಿನಗಳಲ್ಲಿ ಕಚೇರಿಯಲ್ಲಿ ಅಂತರ ಕಾಯ್ದುಕೊಳ್ಳಲುವುದಕ್ಕಾಗಿ, ಕಡಿಮೆ ಉದ್ಯೋಗಿಗಳಿರುವಂತೆ ನೋಡಿಕೊಳ್ಳಲು ಈ ವ್ಯವಸ್ಥೆ ಅಳವಡಿಕೆಗೆ ಮುಂದಾಗಲಿದೆ.

ಸದ್ಯ ಲಾಕ್‌ಡೌನ್‌ ಇದ್ದರೂ ಮುಂದಿನ ದಿನಗಳಲ್ಲಿ ಅದರ ಸಡಿಲಿಕೆ ಆದ ಬಳಿಕವೂ ಇದೇ ರೀತಿಯ ಸಾಮಾಜಿಕ ಅಂತರ ಅನಿವಾರ್ಯವಾಗಿರುತ್ತದೆ. ಮನೆಯಲ್ಲಿಯೇ ಕುಳಿತು ಸರ್ಕಾರಿ ಕಡತಗಳನ್ನು ಬಳಸುವಾಗ ಅಲ್ಲಿ ಮಾಹಿತಿಯ ಸುರಕ್ಷೆ ಮತ್ತು ಗೌಪ್ಯತೆಯ ಬಗ್ಗೆ ಗಮನಹರಿಸಬೇಕಿದೆ ಎಂದು ಡಿಎಆರ್‌ಪಿಜಿ ಹೇಳಿದೆ.

ಡಿಎಆರ್‌ಪಿಜಿ ರೂಪಿಸಿರುವ ಕರಡುಗಳಿಗೆ ಮೇ 21ರೊಳಗೆ ಪ್ರತಿಕ್ರಿಯಿಸುವಂತೆ ಸಚಿವಾಲಯಗಳಿಗೆ ಮತ್ತು ಇಲಾಖೆಗಳಿಗೆ ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+