ಆಯುಷ್ಮಾನ್ ಭಾರತ್ ಯೋಜನೆ ಭಾರತ ಸರ್ಕಾರದ ಪ್ರಮುಖ ಆರೋಗ್ಯ ಯೋಜನೆಯಾಗಿದ್ದು, ಇದರ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಆರೋಗ್ಯ ರಕ್ಷಣೆಯನ್ನು ಒದಗಿಸುವ ಗುರಿ ಹೊಂದಿದೆ. ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಅಡಿಯಲ್ಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ನಾಗರಿಕರಿಗೆ ಅವರ ಆದಾಯದ ಸ್ಥಿತಿಯನ್ನು ಲೆಕ್ಕಿಸದೆ ಆರೋಗ್ಯ ರಕ್ಷಣೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಅಧಿಕೃತವಾಗಿ ಲಾಂಚ್ ಮಾಡಲಿದ್ದಾರೆ ಎಂದು ವರದಿಯಾಗಿದೆ.
ಪ್ರಸ್ತುತ ಪ್ರಾಯೋಗಿಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ, ದೇಶದಲ್ಲಿ ನೀಡಲಾಗುವ ವಾಡಿಕೆ ವಾಕ್ಸಿನ್ ಎಲೆಕ್ಟ್ರಾನಿಕ್ ರಿಜಿಸ್ಟ್ರಿಯನ್ನು ನಿರ್ವಹಿಸಲು ಅಭಿವೃದ್ಧಿಪಡಿಸಿದ U-WIN ಪೋರ್ಟಲ್ ಕೂಡಾ ಮಂಗಳವಾರದಂದು ಚಾಲನೆ ನೀಡಲಿದ್ದು ಇವೆರಡನ್ನು ಹೊರತುಪಡಿಸಿ, ಇನ್ನೂ ಕೆಲವು ಯೋಜನೆಗಳನ್ನು ಮಂಗಳವಾರ ಪ್ರಾರಂಭಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

COVID-19 ಲಸಿಕೆ ನಿರ್ವಹಣಾ ವ್ಯವಸ್ಥೆಯ Co-WIN ನ ಪ್ರತಿರೂಪವಾಗಿರುವ U-Win ಪ್ಲಾಟ್‌ಫಾರ್ಮ್ ಅನ್ನು ಸಾರ್ವತ್ರಿಕ ರೋಗನಿರೋಧಕ ಕಾರ್ಯಕ್ರಮ ಗರ್ಭಿಣಿಯರು ಮತ್ತು ಜನನದಿಂದ 17 ವರ್ಷದೊಳಗಿನ ಮಕ್ಕಳ ವ್ಯಾಕ್ಸಿನೇಷನ್‌ನ ಶಾಶ್ವತ ಡಿಜಿಟಲ್ ದಾಖಲೆಯನ್ನು ಇರಿಸಿಕೊಳ್ಳಲು ಅಭಿವೃದ್ಧಿಪಡಿಸಲಾಗಿದೆ.
ಭಾರತ ಸರ್ಕಾರವು 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಆರೋಗ್ಯ ವಿಮೆಯನ್ನು ಒದಗಿಸುವ ವಿಸ್ತೃತ ಯೋಜನೆಯನ್ನು ಪ್ರಧಾನಿ ಆರಂಭಿಸುವ ಸಾಧ್ಯತೆ ಇದೆ. ಇದು ಸುಮಾರು 4.5 ಕೋಟಿ ಕುಟುಂಬಗಳ ಅಂದಾಜು ಆರು ಕೋಟಿ ನಾಗರಿಕರಿಗೆ ಪ್ರಯೋಜನವನ್ನು ನೀಡುತ್ತದೆ" ಎಂದು ತಿಳಿದುಬಂದಿದೆ.
ಬಡವರಿರಲಿ, ಮಧ್ಯಮ ವರ್ಗದವರಿರಲಿ, ಮೇಲ್ಮಧ್ಯಮ ವರ್ಗದವರಿರಲಿ ಅಥವಾ ಶ್ರೀಮಂತರಾಗಿರಲಿ ಯಾವುದೇ ಆರ್ಥಿಕ ಸ್ಥಿತಿಯನ್ನು ಗಣನೆಗೆ ತೆಗೆದುಕೊಳ್ಳದೇ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬ ವ್ಯಕ್ತಿಯೂ ಆಯುಷ್ಮಾನ್ ಕಾರ್ಡ್ ಪಡೆಯಲು ಅರ್ಹರಾಗಿರುತ್ತಾರೆ. ವಿಸ್ತೃತ ಯೋಜನೆ ಪಡೆದ ನಂತರ ಯಾವುದೇ AB PMJAY ಎಂಪನೆಲ್ಡ್ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ.
2024 ರ ಸೆಪ್ಟೆಂಬರ್ 1ವರೆಗೆ, 12,696 ಖಾಸಗಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 29,648 ಆಸ್ಪತ್ರೆಗಳನ್ನು PMJAY ಅಡಿಯಲ್ಲಿ ನೋಂದಾಯಿಸಲಾಗಿದೆ. ಪ್ರಸ್ತುತ ದೆಹಲಿ, ಒಡಿಶಾ ಮತ್ತು ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ 33 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.ಆಧಾರ್ ಕಾರ್ಡ್‌ನ ಪ್ರಕಾರ 70 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಯಾರಾದರೂ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಮೂಲಗಳು ತಿಳಿಸಿವೆ.
ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯೂ ಅಪ್ಲಿಕೇಶನ್ ಆಧಾರಿತ ಯೋಜನೆಯಾಗಿದ್ದು, ಜನ ಇದರ ಪ್ರಯೋಜನ ಪಡೆಯಲು PMJAY ಪೋರ್ಟಲ್‌ನಲ್ಲಿ ಅಥವಾ ಆಯುಷ್ಮಾನ್ ಅಪ್ಲಿಕೇಶನ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಒಂದು ವೇಳೆ ಈಗಾಗಲೇ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಮತ್ತೆ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗೂ eKYC ಅನ್ನು ಮತ್ತೆ ಪೂರ್ಣಗೊಳಿಸಬೇಕಾಗುತ್ತದೆ" ಎಂದು ಮೂಲಗಳು ತಿಳಿಸಿವೆ.
ಈಗಾಗಲೇ AB PM-JAY ವ್ಯಾಪ್ತಿಗೆ ಒಳಪಡುವ ಕುಟುಂಬಗಳಿಗೆ ಸೇರಿದ 70 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರು ವರ್ಷಕ್ಕೆ 5 ಲಕ್ಷದವರೆಗೆ ಹೆಚ್ಚುವರಿ ಟಾಪ್-ಅಪ್ ಕವರೇಜ್ ಅನ್ನು ಪಡೆಯುತ್ತಾರೆ (ಇದು ಕುಟುಂಬದ ಇತರ ಸದಸ್ಯರೊಂದಿಗೆ ಹಂಚಿಕೊಳ್ಳುವಂತಿಲ್ಲ ). 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ಖಾಸಗಿ ಆರೋಗ್ಯ ವಿಮಾ ಪಾಲಿಸಿಗಳು ಅಥವಾ ಉದ್ಯೋಗಿಗಳ ರಾಜ್ಯ ವಿಮಾ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಿದ್ದರೂ ಈ ಯೋಜನೆಗಳ ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
ಅದರೂ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (CGHS), ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ (ECHS) ಮತ್ತು ಆಯುಷ್ಮಾನ್ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ನಂತಹ ಇತರ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆಗಳ ಪ್ರಯೋಜನಗಳನ್ನು ಈಗಾಗಲೇ ಪಡೆಯುತ್ತಿರುವವರು ತಮ್ಮ ಅಸ್ತಿತ್ವದಲ್ಲಿರುವ ಯೋಜನೆಗಳ ಪೈಕಿ ಯಾವುದನ್ನಾದರೂ ಆಯ್ಕೆ ಮಾಡಬಹುದು.


Click it and Unblock the Notifications