ಮೊಂತಾ ಚಂಡಮಾರುತದ (Montha Cyclone) ಅಬ್ಬರ ಇದೀಗ ಕರ್ನಾಟಕದಲ್ಲೂ ಜೋರಾಗಿದೆ. ಕಳೆದೆರಡು ದಿನಗಳಿಂದ ಮೊಂತಾ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಅಲ್ಲದೇ ಕೆಲವು ಜಿಲ್ಲೆಗಳಿಗೆ ಈಗಾಗಲೇ ಹವಾಮಾನ ಇಲಾಖೆ (IMD) ಮಳೆ ಎಚ್ಚರಿಕೆಯನ್ನೂ ನೀಡಿದೆ. ಇದೀಗ ಒಂದು ವಾರ ವರುಣಾರ್ಭಟ ಇರಲಿದ್ದು, ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ (Rain Alert) ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

7 ದಿನ ಮಳೆಯಬ್ಬರ ಫಿಕ್ಸ್!
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಇನ್ನು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೊಂತಾ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಮಳೆಯಬ್ಬರ ನವೆಂಬರ್ 2 ರವರೆಗೆ ಮುಂದುವರಿಯುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರಿನ ಇಂದಿನ ಹವಾಮಾನ:
ಇನ್ನು ಬೆಂಗಳೂರಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಆದರೆ ತಾಪಮಾನದಲ್ಲಿ ಗರಿಷ್ಠ 30 ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಆದರೆ ಸಂಜೆವರೆಗೂ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೊಂತಾ ಚಂಡಮಾರುತ:
ಇನ್ನು ಪ್ರತೀ ಬಾರಿ ಚಂಡಮಾರುತಗಳಿಗೆ ಒಂದೊಂದು ವಿಶೇಷ ಹೆಸರಿಡಲಾಗುತ್ತದೆ. ಆದ್ರೆ ಈ ಬಾರಿ ಚಂಡಮಾರುತಕ್ಕೆ ಎಂದು ಹೆಸರಿಡಲಾಗಿದೆ. ಇದನ್ನು ಥೈಲ್ಯಾಂಡ್ ಹೆಸರಿಟ್ಟಿದೆ. ಥಾಯ್ ಭಾಷೆಯಲ್ಲಿ ಮೊಂತಾ ಎಂದರೆ ಕನ್ನಡದಲ್ಲಿ ಸುಂದರವಾದ ಹೂ ಎಂದರ್ಥ.
ಇನ್ನು ಈ ಬಾರಿ ಮೊಂತಾ ಚಂಡಮಾರುತದ ಎಫೆಕ್ಟ್ ದೇಶದ ಹಲವು ರಾಜ್ಯಗಳಿಗೆ ಕಾಡಲಿದ್ದು, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಒಡಿಶಾ ಭಾಗಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಜನರಿಗೆ ಸಲಹೆ:
ಇತ್ತೀಚೆಗೆ ರಾಜ್ಯದಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳ ಜನರು ಬೆಳೆ ಹಾನಿ, ಆಸ್ತಿ ಹಾನಿ, ಹೀಗೆ ಅನೇಕ ಸಮಸ್ಯೆಗಳನ್ನು ಎದುರಿಸಿದ್ದಾರೆ. ಇನ್ನು ಬೆಂಗಳೂರಿನಂತಹ ಮಹಾ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ದೊಡ್ಡ ತಲೆನೋವಾಗಿದೆ. ಆದ್ದರಿಂದ ಮಳೆ ಬರುವ ಸೂಚನೆಯಿದ್ದಾಗ, ಹವಾಮಾನ ಪರಿಸ್ಥಿತಿ ನೋಡಿಕೊಂಡು ಹೋದರೆ ಒಳ್ಳೆಯದು. ಏಕೆಂದರೆ ಅತಿಯಾದ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗುತ್ತದೆ. ಈ ಪರಿಣಾಮ ರಸ್ತೆಗುಂಡಿಗಳು ಸಹ ಮುಳುಗುತ್ತವೆ. ವಾಹನ ಚಾಲಕರು ಈ ಸಂದರ್ಭದಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸಿದರೆ ಒಳ್ಳೆಯದು. ಅಲ್ಲದೇ ಅಗತ್ಯ ಇದ್ದರೆ ಮಾತ್ರ ಹೊರಗೆ ಬನ್ನಿ, ಇಲ್ಲದಿದ್ರೆ ಮನೆಯಲ್ಲೇ ಇದ್ದರೆ ಉತ್ತಮ.


Click it and Unblock the Notifications