Rain in Karnataka: ಮುಂದಿನ ವಾರ ಹೇಗಿರಲಿದೆ ಕರ್ನಾಟಕದ ಹವಾಮಾನ? ಎಲ್ಲೆಲ್ಲಿ ಮಳೆ?

ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮಳೆ ಮುನ್ಸೂಚನೆಯ (Rain Alert) ವರದಿಗಳು ಹರಿದಾಡುತ್ತಲೇ ಇದೆ. ಅಯ್ಯೋ, ಚಳಿಗಾಲದಲ್ಲೂ ಮಳೆ ಏಕೆ ಬರುತ್ತಿದೆ ಎಂಬ ಪ್ರಶ್ನೆ ನಿಮಗೆ ಮೂಡಬಹುದು. ಹೌದು, ಭಾರತೀಯ ಹವಾಮಾನ ಇಲಾಖೆ (IMD) ಇದೀಗ ದೇಶದ ಹಲವು ರಾಜ್ಯಗಳಲ್ಲಿ ನವೆಂಬರ್‌ 17 ರಿಂದ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಮುಂದಿನ ವಾರ ಹೇಗಿರಲಿದೆ ಕರ್ನಾಟಕದ ಹವಾಮಾನ? ಎಲ್ಲೆಲ್ಲಿ ಮಳೆ?

ಹೌದು, ಎರಡು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆರಾಯ, ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿದೆ. ಈ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಳಾಖೆ ಅಲರ್ಟ್‌ ಘೋಷಿಸಿದೆ. ಹಾಗಿದ್ರೆ ಯಾವ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗಲಿದೆ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಇಂದು-ನಾಳಿನ ಹವಾಮಾನ:
ಹವಾಮಾನ ವರದಿ ಪ್ರಕಾರ, ಇಂದು ಮತ್ತು ನಾಳೆ ಯಾವುದೇ ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿಲ್ಲ. ಆದರೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ವರದಿಯಾಗಿದೆ.

ಆದರೆ ಇದೀಗ ಸೋಮವಾರದಿಂದ (ನ.17) ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಬಹುದು ಎಂದು ಹೇಳಲಾಗಿದೆ.

ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ವರುಣಾರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಇಲ್ಲಿ ನಮೂದಿಸಿರುವ ಜಿಲ್ಲೆಗಳನ್ನು ಹೊರತು ಪಡಿಸಿ, ಬೇರೆ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚೆನ್ನೈನಲ್ಲೂ ಭಾರೀ ಮಳೆ!
ಇನ್ನು ಕರ್ನಾಟಕ ಮಾತ್ರವಲ್ಲದೇ ಹಲವು ರಾಜ್ಯಗಳಿಗೂ ಮಳೆ ಮುನ್ಸೂಚನೆ ನೀಡಲಾಗಿದೆ. ಚೆನ್ನೈನಲ್ಲಿ ಇಂದೂ (ನ.15) ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ತಮಿಳುನಾಡು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಶನಿವಾರದಿಂದ ಚೆನ್ನೈನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದೆ. ಅಲ್ಲದೇ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಭಾನುವಾರ ಮತ್ತು ಸೋಮವಾರ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಈ ಭಾಗಗಳಿಗೆ ಯೆಲ್ಲೋ ಅಲರ್ಟ್‌!
ತಿರುವಾಲೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಮೈಲಾಡುತುರೈ, ನಾಗಪಟ್ಟಣಂ, ತಿರುವರೂರು, ತಂಜಾವೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ನವೆಂಬರ್‌ 16, ಭಾನುವಾರದಂದು ಮೋಡ ಕವಿದ ವಾತಾವರಣ ಇರುತ್ತದೆ. ಅಲ್ಲದೇ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಸಾರ್ವನಿಕರಿಗೆ ಸಲಹೆ:

ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂದರೆ ಎಲ್ಲಾದರೂ ಟ್ರಾವೆಲ್‌ ಪ್ಲಾನ್‌ ಇದ್ದರೆ, ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ನೋಡಿಕೊಂಡು ಪ್ಲಾನ್‌ ಮಾಡಿದರೆ ಉತ್ತಮ. ಯಾವುದೋ ಗೊತ್ತಿಲ್ಲದ ಜಾಗಕ್ಕೆ ಹೋಗಿ ಸಿಕ್ಕಿಕೊಳ್ಳುವ ಬದಲಿಗೆ, ಹವಾಮಾನ ವರದಿ ನೋಡಿಕೊಂಡರೆ ಉತ್ತಮ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+