ಕರ್ನಾಟಕ (Karnataka) ರಾಜ್ಯದಲ್ಲಿ ಶುಷ್ಕ ವಾತಾವರಣವೇ ಮುಂದುವರೆದಿತ್ತು. ಅತ್ತ ಮಳೆಯೂ ಇಲ್ಲದೇ, ಚಳಿಯೂ ಇಲ್ಲದೇ, ಬಿಸಿಲಿನ ಬೇಗೆ ರಾಜ್ಯದಲ್ಲಿ ಹೆಚ್ಚಾಗಿತ್ತು. ಆದ್ರೆ ಇದೀಗ ಹಠಾತ್ ಮಳೆರಾಯನ ಆಗಮನವಾಗಿದೆ. ಶನಿವಾರ (ಫೆ.21) ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ, ಹಲವೆಡೆ ಸಣ್ಣ ಮಟ್ಟಿಗೆ ಮಳೆಯಾಗಿದ್ದು, ಇದೀಗ ಇಂದೂ (ಫೆ.22, ಭಾನುವಾರ) ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾದರೆ, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಇನ್ನು ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಣ್ಣಮಟ್ಟಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖ ಸೂಚನೆ ನೀಡಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಹಾಸನ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ರಾತ್ರಿ ಸಮಯದಲ್ಲಿ 30 ರಿಂ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ಕೊಡಗು, ಮಂಡ್ಯ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಇಂದು ಒಣಹವೆಯೇ ಇರಲಿದೆ. ಆದ್ರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ಕಡಿಮೆ ಒತ್ತಡದ ಪರಿಸ್ಥಿತಿಯಿಂದಾಗಿ ದಕ್ಷಿಣ ಭಾಗದಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಸೂಚನೆ ನೀಡಿದೆ.
ಎಲ್ಲೆಲ್ಲಿ ಬಿಸಿಲು ಹೆಚ್ಚು?
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಬಳ್ಳಾರಿ, ಯಾದಗಿರಿ, ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯನಗರದಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಹವಾಮಾನ ಹೇಗಿದೆ?
ಇನ್ನು ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಹರಿಷ್ಠ ತಾಪಮಾನ 31-32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18-19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ. ಅದೇ ರೀತಿ ಮಳೆಯ ಸಾಧ್ಯತೆ ಕಮ್ಮಿಯಾದರೂ, ಸಂಜೆಯ ಸುಮಾರಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


Click it and Unblock the Notifications