ರಾಜ್ಯದಲ್ಲಿ ಚಳಿಗಾಲ ಶುರುವಾಗುವ ಹೊತ್ತಲ್ಲಿ ಮಳೆರಾಯನ (Rain) ಆಗಮನಕ್ಕೆ ಮುನ್ಸೂಚನೆ ಸಿಕ್ಕಿದೆ. ಕೆಲವು ದಿನಗಳಿಂದ ಬಿಡುವು ಕೊಟ್ಟಿದ್ದ ವರುಣ ಇದೀಗ ಮತ್ತೆ ಆರ್ಭಟಿಸಲು ಸಿದ್ಧವಾಗಿದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ಸಾರ್ವಜನಿಕರು ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಹಾಗಿದ್ರೆ ಯಾವ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅರಬ್ಬೀ ಸಮುದ್ರದಲ್ಲಾಗುವ ಗಾಳಿಯ ಒತ್ತಡವು ರಾಜ್ಯದ ಹಲವು ಜಿಲ್ಲೆಗಳಲ್ಲಿ ಪರಿಣಾಮ ಬೀರಲಿದ್ದು, ಈ ಹಿನ್ನೆಲೆ ಹವಾಮಾನ ವೈಪರೀತ್ಯವಾಗಲು ಕಾರಣ ಎಂದು ಹೇಳಲಾಗಿದೆ. ಈ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಿಗೆ ಮಳೆ ಅಲರ್ಟ್!
ಕರ್ನಾಟಕದಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಅರಬ್ಬೀ ಸಮುದ್ರದಲ್ಲಾದ ಈ ಬದಲಾವಣೆಯು ಮುಂದಿನ ಎರಡು ದಿನಗಳವರೆಗೆ ಮುಂದುವರೆಯಲಿದೆ ಎನ್ನಲಾಗಿದೆ. ಆದ್ದರಿಂದ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ.
ತಮಿಳುನಾಡಿನಲ್ಲೂ ಮಳೆಯಬ್ಬರ!
ಇನ್ನು ತಮಿಳುನಾಡಿನಲ್ಲೂ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ತಂಜಾವೂರು, ಪುದುಕ್ಕೊಟ್ಟೈ, ರಾಮನಾಥಪುರಂ, ವಿರುಧುನಗರ, ತೂತುಕುಡಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ತಮಿಳುನಾಡಿನಲ್ಲಿ ಗುಡುಗು ಸಹಿತ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೂಚನೆಯ ಪ್ರಕಾರ, ಮಂಗಳವಾರ ಮತ್ತು ಬುಧವಾರ (ನ.11,12) ತೂತುಕುಡಿ, ವಿರುಧುನಗರ, ರಾಮನಾಥಪುರಂ, ಪುದುಕೊಟ್ಟೈ ಮತ್ತು ತಂಜಾವೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅದೇ ರೀತಿ ತಿರುನಲ್ವೇಲಿ, ಕನ್ಯಾಕುಮಾರಿ, ನೀಲಗಿರಿ, ಕೊಯಮತ್ತೂರು, ತಿರುಪ್ಪೂರು, ಥೇಣಿ ಮತ್ತು ತೆಂಕಸಿ ಜಿಲ್ಲೆಗಳಲ್ಲೂ ಇದೇ ಸಂದರ್ಭದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಲಾಗಿದೆ.
ಚೆನ್ನೈ ಮತ್ತು ಅದರ ಉಪನಗರಗಳಲ್ಲಿ ಸೋಮವಾರ (ನ.10) ಸಂಜೆ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಆರ್‌ಎಂಸಿ ಮುನ್ಸೂಚನೆ ನೀಡಿದೆ. ಇನ್ನು ಗಾಳಿಯ ವೇಗ, ಮಳೆ ಸಾಮಾನ್ಯ ಮಟ್ಟದಲ್ಲಿರುವುದರಿಂದ ಮೀನುಗಾರರಿಗೆ ಪ್ರಸ್ತುತ ಯಾವುದೇ ಎಚ್ಚರಿಕೆ ಅಥವಾ ಸಲಹೆಗಳನ್ನು ನೀಡಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಾರ್ವಜನಿಕರಿಗೆ ಸಲಹೆ
ಇನ್ನು ಸಾರ್ವಜನಿಕರು ಎಲ್ಲಾದರು ಟ್ರಿಪ್, ಟ್ರಾವೆಲ್ ಪ್ಲಾನ್‌ಗಳನ್ನು ಮಾಡಿದ್ದರೆ ಹವಾಮಾನ ಪರಿಸ್ಥಿತಿಯನ್ನು ನೋಡಿಕೊಂಡು ಪ್ಲಾನ್ ಮಾಡಿದ್ರೆ ಉತ್ತಮ. ಏಕೆಂದರೆ ಕೆಲವು ಕಡೆ ಗಾಳಿ, ಮಳೆ ತೀವ್ರವಾಗಿದ್ದರೆ ನಿಮ್ಮ ಪ್ರಯಾಣಕ್ಕೂ ತೊಂದರೆಯಾಗಬಹುದು. ಆದ್ದರಿಂದ ಮೊದಲೇ ಹವಾಮಾನ ಮುನ್ಸೂಚನೆಯನ್ನು ತಿಳಿದುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳಿ.


Click it and Unblock the Notifications