ಕನ್ನಡ ಚಲನಚಿತ್ರ ನಟಿ ರನ್ಯಾ ರಾವ್ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣದಲ್ಲಿ ಒಟ್ಟು 17.29 ಕೋಟಿ ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿಯನ್ನು ತಿಳಿಸಿದೆ.
ಹೌದು,ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ನ ಮಾರ್ಚ್ 3ರ ರಾತ್ರಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡು, ನಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಪ್ರಕರಣದ ತನಿಖೆ ಮುಂದುವರೆದಂತೆ ನಟಿಯ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಸಹ ವಶ ಪಡಿದುಕೊಳ್ಳಲಾಗಿದೆ. ಆದರೆ ಇದೀಗ ಅವರ ತಂದೆ, ಹಿರಿಯ ಐಪಿಎಸ್ ಅಧಿಕಾರಿ ಡಿಜಿಪಿ ಕೆ. ರಾಮಚಂದ್ರ ರಾವ್ ಅವರು ಅವರ ಕೃತ್ಯಗಳಿಂದ ದೂರ ಉಳಿದಿದ್ದಾರೆ.

ಇದೇ ಮೊದಲು ಬಾರಿಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇತಿಹಾಸದಲ್ಲಿಯೇ ಇಷ್ಟು ದೊಡ್ಡ ಮೊತ್ತದ ಚಿನ್ನ ವಶಪಡಿಸಿಕೊಂಡಿದೆ. ಡಿಆರ್‌ಐ ಅಧಿಕಾರಿಗಳು ಮೊನ್ನೆ ರನ್ಯಾ ಬಂಧನ ಬಳಿಕ ಆಕೆಯ ಮನೆಯಲ್ಲಿ ಪರಿಶೀಲನೆ ಕೂಡ ನಡೆಸಿದ್ದಾರೆ.
ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್ನ ಫ್ಲ್ಯಾಟ್ನಲ್ಲಿ ರನ್ಯಾ ಮನೆ ಇದ್ದು, 5ಕ್ಕೂ ಹೆಚ್ಚು ಅಧಿಕಾರಿಗಳು ಫ್ಲ್ಯಾಟ್ನಲ್ಲಿ ಪರಿಶೀಲನೆ ನಡೆಸಿದ್ದರು.ಈ ಘಟನೆ ಚಿಕ್ಕಮಗಳೂರು, ಬೆಂಗಳೂರು ಮತ್ತು ಇತರ ಭಾಗಗಳಲ್ಲಿ ಪ್ರಭಾವವನ್ನು ಬೀರಿದೆ. ಪುರಸ್ಕೃತ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರ ಬಂಗಲಿಯಲ್ಲಿನ ತಪಾಸಣೆ ಹಾಗೂ ವಶಪಡಿಸಿಕೊಂಡಿರುವ ಸೊತ್ತಿನ ಪತ್ತೆ ಮಾಧ್ಯಮಗಳಲ್ಲಿ ಹೆಚ್ಚಿನ ಗಮನವನ್ನು ಸೆಳೆಯಿತು.
ನಂದವಾಣಿ ಮ್ಯಾನ್ಶನ್ನ ಫ್ಲ್ಯಾಟ್ನಲ್ಲಿ ನಡೆಸಿದ ಅವಧಿಯಲ್ಲಿ ಅಧಿಕಾರಿಗಳು ಮೂರು ದೊಡ್ಡ ಪೆಟ್ಟಿಗೆಯಲ್ಲಿ ಬಹುಮೌಲ್ಯವನ್ನು ಹೊಂದಿದ್ದ ಚಿನ್ನ ಮತ್ತು ನಗದು ಹಣವನ್ನು ವಶಪಡಿಸಿಕೊಂಡರು.ಚಿನ್ನದ ಪ್ರಮಾಣವು 2.06 ಕೆಜಿ ಹಾಗೂ ನಗದು 2.67 ಕೋಟಿ ರೂಪಾಯಿಗಳು ಪತ್ತೆ ಆಗಿದೆ.
ಘಟನೆಯಲ್ಲಿ ನಟಿ ರನ್ಯಾ ಸಿಕ್ಕಿಬಿದ್ದಿದ್ದು ಹೇಗೆ..?
ನಟಿ ರನ್ಯಾ ಪ್ರತಿ ಬಾರಿ ವಿಮಾನ ನಿಲ್ದಾಣಕ್ಕೆ ಹೋದಾಗಲೂ ಹಿರಿಯ ಅಧಿಕಾರಿಗಳು ಬಳಸುವ ಅಫಿಷಿಯಲ್ ಪ್ರೋಟೊಕಾಲ್ ಸರ್ವೀಸ್ ಅನ್ನು ಬಳಸಿ ಸೆಕ್ಯುರಿಟಿ ಚೆಕ್ ನಿಂದ ತಪ್ಪಿಸಿಕೊಳ್ಳುತ್ತಿದ್ದರಂತೆ. ಮತ್ತು ಪ್ರತಿಬಾರಿ ಚಿನ್ನ ಕಳ್ಳಸಾಗಣೆಗೆ ಹೋದಾಗಲು ಒಂದೇ ರೀತಿಯ ಬಟ್ಟೆ ಹಾಕಿಕೊಂಡು ಹೋಗುತ್ತಿದ್ದರು ಎಂದು ಮಾಹಿತಿ ತಿಳಿದು ಬಂದಿದೆ.
ಇನ್ನೂ ಇವರು ಧರಿಸಿರುವ ಬಟ್ಟೆಯಲ್ಲಿ ಬೆಲ್ಟ್ ನ ಒಳಗೆ ಚಿನ್ನದ ಗಟ್ಟಿಗಳನ್ನು ಇಟ್ಟುಕೊಂಡು, ಆ ಬೆಲ್ಟು ಹೊರಗೆ ಕಾಣದಂತೆ ಬಟ್ಟೆ ಹಾಕಿಕೊಂಡು ಬರುತ್ತಿದ್ದರಂತೆ ಆದರಿಂದ ಯಾರಿಗೂ ಸಹ ನಟಿ ರನ್ಯಾ ಮೇಲೆ ಅನುಮಾನ ಬಂದಿರಲಿಲ್ಲ. ದೆಹಲಿಯಲ್ಲಿ ಕೂತಿದ್ದ ಡಿಆರ್'ಐ ಅಧಿಕಾರಿಗಳಿಗೆ ಅನುಮಾನ ಬಂದು ತಪಾಸಣೆ ನಡೆದಾಗ ನಟಿಯ ಕಳ್ಳತನ ಹೊರಬಂದಿದೆ
ತನಿಖಾಧಿಕಾರಿಗಳು ಆಕೆ ದೊಡ್ಡ ಕಳ್ಳಸಾಗಣೆ ಜಾಲದ ಭಾಗವಾಗಿದ್ದಳು ಮತ್ತು ಗಲ್ಫ್‌ಗೆ ಆಗಾಗ್ಗೆ ಸಣ್ಣ ಪ್ರವಾಸಗಳನ್ನು ಮಾಡುತ್ತಿದ್ದರಿಂದ ಆಕೆಯ ಮೇಲೆ ನಿಗಾ ಇಡಲಾಗಿತ್ತು. ಅಧಿಕಾರಿಗಳು ಈಗ ಹಿಂದಿನ ವಿಮಾನ ನಿಲ್ದಾಣದ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ಆಕೆಯ ತಂದೆ ಮತ್ತು ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಡಿಜಿಪಿ ಕೆ. ರಾಮಚಂದ್ರ ರಾವ್, ಆಕೆಯ ಕೃತ್ಯಗಳಿಂದ ದೂರ ಉಳಿದುಕೊಂಡರು, ಮದುವೆಯಾದಾಗಿನಿಂದ ಆಕೆ ಸಂಪರ್ಕದಲ್ಲಿಲ್ಲ ಮತ್ತು ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.
ನಟಿ ರನ್ಯಾ, ಕನ್ನಡದ 'ಮಾಣಿಕ್ಯ' ಮತ್ತು 'ಪಟಾಕಿ' ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮಿಳಿನ ಸಿನಿಮಾಗಳಲ್ಲಿಯೂ ರನ್ಯಾ ನಟಿಸಿದ್ದು, ರನ್ಯಾ ಬೆಂಗಳೂರಿನವರೇ ಆಗಿದ್ದಾರೆ.


Click it and Unblock the Notifications