ಕರ್ನಾಟಕ ಹೈಕೋರ್ಟ್ (Karnataka high Court) ರಾಜ್ಯದಲ್ಲಿ ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ (bike taxi) ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಆದೇಶವನ್ನು ಹೊರಡಿಸಿದೆ.
ಹೌದು, ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಹೀಗಾಗಿ ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶವನ್ನು ನೀಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ
ಓಲಾ, ಉಬರ್ ಮತ್ತು ರ‍್ಯಾಪಿಡೋ ಸಂಸ್ಥೆಗಳಿಗೆ ಆರು ವಾರಗಳ ಕಾಲಾವಕಾಶ ನೀಡಿದ್ದು,ಈ ಅವಧಿಯಲ್ಲಿ ರಾಜ್ಯದಲ್ಲಿ ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಯಮಗಳನ್ನು ರೂಪಿಸಬೇಕು ಇಲ್ಲವಾದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರು ಹೇಳಿಕೆ ನೀಡಿದ್ದಾರೆ.
ರ‍್ಯಾಪಿಡೋದ ಮಾತೃ ಕಂಪನಿ, ರೋಪೀನ್ ಟ್ರಾನ್ಸ್‌ಪೋರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಉಬರ್ ಮತ್ತು ಓಲಾ (ಎಎನ್‌ಐ ಟೆಕ್ನಾಲಜೀಸ್) ನಂತಹ ಇತರ ಟ್ಯಾಕ್ಸಿ ಸಂಗ್ರಾಹಕರು ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿ ನ್ಯಾಯಮೂರ್ತಿ ಬಿ ಶ್ಯಾಮ್ ಪ್ರಸಾದ್ ಈ ಆದೇಶವನ್ನು ಹೊರಡಿಸಿದರು.
ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅರ್ಜಿಗಳ ವಿಚಾರಣೆ
2022ರಲ್ಲಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರ ಸಂಸ್ಥೆಗಳು ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲು ಕರ್ನಾಟಕ ಹೈಕೋರ್ಟ್ ಅಧೀನವಾಗಿ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರು ಏಪ್ರಿಲ್ 2 ರಂದು ಆದೇಶ ಹೊರಡಿಸಿದ್ದಾರೆ.
ಈ ಆದೇಶದ ಮೂಲಕ, ರಾಜ್ಯ ಸರ್ಕಾರಕ್ಕೆ 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲು ಸೂಚನೆ ನೀಡಲಾಗಿದೆ. ಹೈಕೋರ್ಟ್, ಈ ಅರ್ಜಿಗಳ ವಿಚಾರಣೆಗೆ ಕ್ರಮ ಕೈಗೊಳ್ಳಲು ಹಕ್ಕು ನೀಡಿದ್ದು, ಸರಕಾರದ ಸೂಕ್ತ ನಿರ್ಧಾರಗಳನ್ನು ಕಾಯ್ದುಕೊಂಡು, ಮುಂದಿನ ಕ್ರಮಗಳನ್ನು ಕೈಗೊಳ್ಳಲು ನಿರ್ಧಸಲಾಗಿದೆ.
ಬೈಕ್ ಟ್ಯಾಕ್ಸಿಗಳಿಗೆ ಕಾನೂನು ಚೌಕಟ್ಟನ್ನು ಜಾರಿಗೆ ತರಲು ಅಧಿಕಾರಿಗಳಿಗೆ ನಿರ್ದೇಶಿಸುವಂತೆ ನ್ಯಾಯಾಲಯವನ್ನು ಒತ್ತಾಯ ಮಾಡಿದೆ. ಈಗಾಗಲೇ ಬೈಕ್ ಟ್ಯಾಕ್ಸಿ ಸೇವೆಗಳನ್ನು ಒದಗಿಸುತ್ತಿದ್ದ ರ‍್ಯಾಪಿಡೋ, ಅಧಿಕಾರಿಗಳು ತಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶನಗಳನ್ನು ಕೋರಿತು.
ಏಪ್ರಿಲ್ 2022 ರಲ್ಲಿ, ನ್ಯಾಯಮೂರ್ತಿ ಜ್ಯೋತಿ ಮಿಲಿಮಣಿ ಅವರನ್ನೊಳಗೊಂಡ ಮತ್ತೊಂದು ಪೀಠವು , ಅರ್ಜಿದಾರರ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಂತೆ ತಡೆಯುವ ಮೂಲಕ ಅರ್ಜಿದಾರರಿಗೆ ಮಧ್ಯಂತರ ಪರಿಹಾರವವನ್ನು ಈ ಹಿಂದೆ ಮಾಡಲಾಗುತ್ತು. ಈ ಮಧ್ಯಂತರ ಪರಿಹಾರವು ಇಂದಿನವರೆಗೂ ಮುಂದುವರೆದಿದ್ದು, ರಾಪಿಡೋ ಟ್ಯಾಕ್ಸಿಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಲು ಅನುವು ಮಾಡಿಕೊಟ್ಟಿತು.
ನ್ಯಾಯಮೂರ್ತಿ ಪ್ರಸಾದ್ ಅವರು ಈ ವಿಷಯವನ್ನು ಮೊದಲು 2023 ರಲ್ಲಿ ಗಮನಕ್ಕೆ ಬಂದಿತ್ತು. ಇಂದು, ಅರ್ಜಿದಾರರು ಕೋರಿರುವಂತೆ ನಿಯಮಗಳನ್ನು ರೂಪಿಸಲು ನ್ಯಾಯಾಲಯವು ರಾಜ್ಯಕ್ಕೆ ಆದೇಶಿಸಲು ಸಾಧ್ಯವಿಲ್ಲ ಅಥವಾ ಸಾರಿಗೆಯೇತರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ರಾಜ್ಯಕ್ಕೆ ಆದೇಶಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದ ನಂತರ ಅವರು ಅರ್ಜಿಗಳನ್ನು ವಜಾಗೊಳಿಸಿದರು.
1988 ರ ಮೋಟಾರು ವಾಹನ ಕಾಯ್ದೆ: ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತ
1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರದಿಂದ ನೀಡದಿರುವುದರಿಂದ, ಬೈಕ್ ಟ್ಯಾಕ್ಸಿ ಕಾರ್ಯಚರಣೆಗಳು ರಾಜ್ಯದಲ್ಲಿ ಸ್ಥಗಿತಗೊಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಪ್ರಿಲ್ 2 ರಂದು ಆದೇಶ ಹೊರಡಿಸಿದ್ದು, ಆರು ವಾರಗಳ ಅವಧಿ ಒಳಗೆ ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದೆ.
ರಾಜ್ಯ ಸರ್ಕಾರವು ಆ ಸಮಯಕ್ಕೆ ಅಗತ್ಯ ನಿಯಮಗಳನ್ನು ರೂಪಿಸುವ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಆರು ವಾರಗಳ ಒಳಗೆ ಎಲ್ಲಾ ಕಾರ್ಯಾಚರಣೆಗಳನ್ನು ನಿಲ್ಲಿಸಬೇಕು ಎಂದು ನ್ಯಾಯಾಲಯ
ಮಾಹಿತಿಯನ್ನು ತಿಳಿಸಿದೆ.


Click it and Unblock the Notifications