ಬೈಕ್ ಟ್ಯಾಕ್ಸಿ ಸೇವೆ ಒದಗಿಸುವ Rapido 11 ರಾಜ್ಯಗಳ 39 ನಗರಗಳಲ್ಲಿ ಮತ್ತೆ ಕಾರ್ಯ ನಿರ್ವಹಿಸಲು ಆರಂಭಿಸಿದೆ ಎಂದು ಬುಧವಾರ ತಿಳಿಸಲಾಗಿದೆ. ಕೇಂದ್ರ ಸರ್ಕಾರದಿಂದ ಮೇ 31ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿದ್ದು, ಹಲವು ವಿನಾಯಿತಿಗಳನ್ನು ಘೋಷಣೆ ಮಾಡಿದ ಬೆನ್ನಿಗೆ ಈ ತೀರ್ಮಾನ ಮಾಡಲಾಗಿದೆ.
"ಸದ್ಯಕ್ಕೆ ನಮ್ಮ ಬೈಕ್ ಟ್ಯಾಕ್ಸಿ ಸೇವೆಯು ಹಸಿರು ಮತ್ತು ಆರೇಂಜ್ ವಲಯದಲ್ಲಿ ಮಾತ್ರ ಇರಲಿದೆ. ಲಾಕ್ ಡೌನ್ ನಿಯಮಾವಳಿ ಪ್ರಕಾರ ಕಂಟೇನ್ ಮೆಂಟ್ ವಲಯಗಳಿಗೆ ಸೇವೆ ವಿಸ್ತರಿಸುವುದಕ್ಕೆ ಸಾಧ್ಯವಿಲ್ಲ" ಎಂದು ಕಂಪೆನಿಯು ಹೇಳಿಕೆಯಲ್ಲಿ ತಿಳಿಸಿದೆ. ಅಪ್ಲಿಕೇಷನ್ ನೋಟಿಫಿಕೇಷನ್ ನಲ್ಲಿ ವಿವಿಧ ನಗರಗಳಲ್ಲಿನ ಪರಿಸ್ಥಿತಿ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಲಾಗಿದೆ.
'ಕ್ಯಾಪ್ಟನ್ ಗಳು' ಅಥವಾ ಚಾಲಕರು ಕರ್ತವ್ಯಕ್ಕೆ ತೆರಳುವ ಮೊದಲು ಕಡ್ಡಾಯವಾಗಿ ಆರೋಗ್ಯ ಸೇತು ಅಪ್ಲಿಕೇಷನ್ ಇನ್ ಸ್ಟಾಲ್ ಮಾಡಿಕೊಂಡಿರಬೇಕು. ಸದಾ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದ್ದು, ಸದಾ ಸ್ಯಾನಿಟೈಸರ್ ಇಟ್ಟುಕೊಂಡಿರಬೇಕು. ಹೆಲ್ಮೆಟ್ ಜತೆಗೆ ಹೇರ್ ನೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಲಾಗಿದೆ.

ವೈಯಕ್ತಿಕವಾಗಿ ಚಾಲಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜತೆಗೆ ಬೈಕ್ ಅನ್ನು ಆಗಾಗ ಸ್ಯಾನಿಟೈಸ್ ಮಾಡಬೇಕು. ಗ್ರಾಹಕರು ಬೈಕ್ ನಲ್ಲಿ ಕೂರುವ ಮುನ್ನ ಹಿಂಬದಿ ಸೀಟನ್ನು ಸ್ಯಾನಿಟೈಸ್ ಮಾಡಬೇಕು ಎಂದು ಸೂಚಿಸಲಾಗಿದೆ. ಗ್ರಾಹಕರು ತಮ್ಮ ರೈಡ್ ನಂತರ ಸುರಕ್ಷತೆ ಬಗ್ಗೆ ಅಭಿಪ್ರಾಯ ದಾಖಲಿಸಬೇಕು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications