ಬೆಂಗಳೂರು, ಜೂನ್ 13: ಪಡಿತರ ಚೀಟಿದಾರರಿಗೆ ಅಗತ್ಯ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರಕಾರವು ಆಧಾರ್ ಮತ್ತು ಪಡಿತರ ಚೀಟಿ ಜೋಡಣೆಯ ಗಡುವನ್ನು ಮತ್ತೊಮ್ಮೆ ವಿಸ್ತರಿಸಿದೆ.
ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಲಿಂಕ್ ಮಾಡಲು ಇದ್ದ ಡೆಡ್ ಲೈನ್ 2024ರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಕೇಂದ್ರ ಸರ್ಕಾರ ಪಡಿತರ ಮತ್ತು ಆಧಾರ್ ಲಿಂಕಿಂಗ್ ಗೆ ಈ ಹಿಂದಿನ ಗಡುವು ಜೂನ್ 30 ನೀಡಿತ್ತು.

ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಜೂನ್ 30ರವರೆಗೆ ನಿಗದಿಗೊಳಿಸಿದ್ದ ಗಡುವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.
ಪಡಿತರ ಚೀಟಿಯು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NSFA) ಅಡಿಯಲ್ಲಿ ಸಬ್ಸಿಡಿ ಆಹಾರ, ಧಾನ್ಯ ಮತ್ತು ಗ್ಯಾಸೋಲಿನ್‌ಗೆ ಅರ್ಹರಾಗಿರುವ ಭಾರತದ ನಾಗರಿಕರಿಗೆ ಆಯಾ ರಾಜ್ಯ ಸರ್ಕಾರವು ನೀಡುವ ಅಧಿಕೃತ ದಾಖಲೆಯಾಗಿದ್ದು ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಲಿಂಕ್ ಮಾಡಲು ಇದ್ದ ಗಡುವನ್ನು ಈ ಹಿಂದೆಯೂ ಸರ್ಕಾರ ಹಲವಾರು ಬಾರಿ ವಿಸ್ತರಿಸಿತ್ತು ಇದೂಗ ಮತ್ತೆ ಮೂರು ತಿಂಗಳುಗಳ ಆವಧಿಗೆ ವಿಸ್ತರಿಸಲಾಗಿದೆ.
ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಬೆಂಗಳೂರಿನಲ್ಲಿರುವ ಬೆಂಗಳೂರು ಒನ್ ಹಾಗೂ ರಾಜ್ಯದ ನಾನಾ ಜಿಲ್ಲಾ ಕೇಂದ್ರಗಳಲ್ಲಿರುವ ಮುಂತಾದ ಸೇವಾ ಕೇಂದ್ರಗಳಲ್ಲಿ ಹಾಗೂ ಪಡಿತರ ಅಂಗಡಿಯಲ್ಲಿ ನಿಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಬಹುದು.
ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ಬೇಕಾಗಿರುವ ದಾಖಲೆಗಳು ಈ ಕೆಳಕಂಡಂತಿವೆ.
ಪಡಿತರ ಚೀಟಿಯ ಒರಿಜಿನಲ್ ಪ್ರತಿ
ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
ಬ್ಯಾಂಕ್ ಪಾಸ್‌ಬುಕ್‌ನ ಫೋಟೋಕಾಪಿ
ಕುಟುಂಬದ ಯಜಮಾನನ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋ
ಆಫ್ ಲೈನ್ ಮಾತ್ರವಲ್ಲದೇ ನೀವು ಆನ್ ಲೈನ್ ಮೂಲಕವೂ ಲಿಂಕ್ ಮಾಡಬಹುದು. ಕರ್ನಾಟಕ ಆಹಾರ ಇಲಾಖೆ ವೆಬ್ ಸೈಟ್ ನಲ್ಲಿ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಲಿಂಕ್ ಮಾಡಬಹುದು. ಅಥವಾ ಯುಐಡಿಎಐನ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಲಿಂಕ್ ಮಾಡಬಹುದು.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications