ಕೊಟಕ್ ಮಹೀಂದ್ರಾ ಬ್ಯಾಂಕ್ ಗೆ ಸಿಇಒ ಆಗಿ ಉದಯ್ ಮರು ನೇಮಕಕ್ಕೆ ಒಪ್ಪಿಗೆ
ಕೊಟಕ್ ಮಹೀಂದ್ರಾ ಬ್ಯಾಂಕ್ ನ ಕಾರ್ಯ ನಿರ್ವಾಹಕ ನಿರ್ದೇಶಕ ಮತ್ತು ಸಿಇಒ ಆಗಿ ಉದಯ್ ಕೊಟಕ್ ಅವರನ್ನು ಮರು ನೇಮಕ ಮಾಡುವುದಕ್ಕೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಒಪ್ಪಿಗೆ ನೀಡಿದೆ. ಸ್ಟಾಕ್ ಎಕ್ಸ್ ಚೇಂಜ್ ಫೈಲಿಂಗ್ ನಲ್ಲಿ ಈ ಬಗ್ಗೆ ಸೋಮವಾರ ಮಾಹಿತಿ ನೀಡಲಾಗಿದೆ.
ಈಗಾಗಲೇ ಉದಯ್ ಕೊಟಕ್ ಹದಿನೇಳು ವರ್ಷಗಳ ಕಾಲ ಬ್ಯಾಂಕ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನೂ ಮೂರು ವರ್ಷ ಎಂ.ಡಿ., ಸಿಇಒ ಆಗಿ ಅವರು ಮುಂದುವರಿಯಲಿದ್ದಾರೆ. ಇನ್ನು ಪ್ರಕಾಶ್ ಆಪ್ಟೆ ಅವರನ್ನು ಅರೆಕಾಲಿಕ ಮುಖ್ಯಸ್ಥರಾಗಿ ಮತ್ತು ದೀಪಕ್ ಗುಪ್ತಾ ಅವರನ್ನು ಜಂಟಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿದೆ. ಈ ನೇಮಕವು 2021ರ ಜನವರಿಯಿಂದ ಜಾರಿಗೆ ಬರಲಿದೆ.

ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಬ್ಯಾಂಕ್ ಷೇರುದಾರರು ಈ ಮರು ನೇಮಕಾತಿಗೆ ಒಪ್ಪಿಗೆ ಸೂಚಿಸಿದ್ದಾರೆ. ಕಳೆದ ಮೇ 13 ಹಾಗೂ ಆಗಸ್ಟ್ 18ನೇ ತಾರೀಕಿನಂದು ನಡೆದಿದ್ದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
More From GoodReturns

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ಫೊರೆಕ್ಸ್ ಮಿತಿ: ಇಂದಿನ ಮಾರುಕಟ್ಟೆ ಕುಸಿತಕ್ಕೆ ಕಾರಣವೇ?

ಹಣದುಬ್ಬರ ವರದಿ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ ಅಥವಾ ಹೆಚ್ಚಾಗುತ್ತಾ?

ಹಣದುಬ್ಬರ ದರ ಏರಿಕೆ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ನಿರ್ಧಾರದ ಮುನ್ನ ನಿಮ್ಮ ಹಣ ಸುರಕ್ಷಿತವೇ?

ಷೇರು ಮಾರುಕಟ್ಟೆ ಕುಸಿತದ ಭೀತಿ: ಹೂಡಿಕೆದಾರರೇ ಎಚ್ಚರವಿರಲಿ!

ಚಿನ್ನದ ಬೆಲೆ ಏರಿಕೆ: ನಿಮ್ಮ ಹೂಡಿಕೆ ಸುರಕ್ಷಿತವಾಗಿಡಲು ಈ ತಂತ್ರ ಬಳಸಿ

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!



Click it and Unblock the Notifications