ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ(ಪಿಎಂಸಿ) ಬ್ಯಾಂಕ್ ಮೇಲಿನ ನಿರ್ಬಂಧವನ್ನು ಜೂನ್ 22ರವರೆಗೆ ವಿಸ್ತರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶನಿವಾರ ಹೇಳಿದೆ.
ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಆರ್‌ಬಿಐ, ಪಿಎಂಸಿ ಬ್ಯಾಂಕಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಬ್ಯಾಂಕಿನ ಪುನಶ್ಚೇತನ ಯೋಜನೆಯನ್ನು ರೂಪಿಸಲು ಬ್ಯಾಂಕಿನ ಆಡಳಿತಾಧಿಕಾರಿ ಮತ್ತು ಸಲಹಾ ಸಮಿತಿಯೊಂದಿಗೆ ಸಭೆ ನಡೆಸುತ್ತಿದೆ ಎಂದು ಹೇಳಿದೆ.

ಬ್ಯಾಂಕಿಂಗ್ ನಿಯಂತ್ರಣ ಕ್ರಮಗಳನ್ನು ಪಾಲಿಸದೇ ಇರುವ ಕಾರಣಕ್ಕೆ 2019 ಸೆಪ್ಟೆಂಬರ್‌ನಿಂದ, 2020 ಮಾರ್ಚ್ 23ರವರೆಗೆ ಬ್ಯಾಂಕ್ ಮೇಲೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿತ್ತು. ಆದರೆ ಅದನ್ನೂ ಇನ್ನೂ ಮೂರು ತಿಂಗಳು ವಿಸ್ತರಣೆ ಮಾಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
''ಠೇವಣಿದಾರರ ಹಿತಾಸಕ್ತಿ ಮತ್ತು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದ ಸ್ಥಿರತೆಗಾಗಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ವಿವಿಧ ಮಧ್ಯಸ್ಥಗಾರರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಬ್ಯಾಂಕಿನ ಪುನರುಜ್ಜೀವನಕ್ಕಾಗಿ ಒಂದು ಯೋಜನೆಯನ್ನು ರೂಪಿಸಲು ಪ್ರಯತ್ನಿಸುತ್ತಿದೆ. ಇದನ್ನು ಮುಂದಕ್ಕೆ ತೆಗೆದುಕೊಳ್ಳಲು, ಮೇಲಿನ ನಿರ್ದೇಶನಗಳನ್ನು ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸುವುದು ಅಗತ್ಯವೆಂದು ಪರಿಗಣಿಸಲಾಗಿದೆ "ಎಂದು ಆರ್‌ಬಿಐ ತಿಳಿಸಿದೆ.
ಸೆಕ್ಯೂರಿಟಿಗಳ ತ್ವರಿತ ಮಾರಾಟ ಮತ್ತು ಸಾಲಗಳ ವಸೂಲಿಗಾಗಿ ವಿವಿಧ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಆರ್‌ಬಿಐ ತನ್ನ ಪ್ರಕಟಣೆಯಲ್ಲಿ ಹೇಳಿದೆ.


Click it and Unblock the Notifications