ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರವನ್ನು ಮತ್ತೆ ಏರಿಕೆ ಮಾಡಿದೆ. ಆರ್‌ಬಿಐ ರೆಪೋ ದರವನ್ನು 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 5.4ಕ್ಕೆ ತಲುಪಿದೆ. ಈ ಹಿಂದೆ ಆರ್‌ಬಿಐ ದಿಢೀರ್ ಆಗಿ ರೆಪೋ ದರ ಏರಿಕೆ ಮಾಡುವ ಮೂಲಕ ಜನರಿಗೆ ಶಾಕ್ ನೀಡಿತ್ತು.
ದೇಶದಲ್ಲಿ ಹಣದುಬ್ಬರವನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಆರ್‌ಬಿಯ ಹಲವು ಬಾರಿ ರೆಪೋ ದರವನ್ನು ಏರಿಕೆ ಮಾಡಿದೆ. ಏಪ್ರಿಲ್‌ನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಸತತ 10 ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಂಡಿತ್ತು. ಆದರೆ ಹಣದುಬ್ಬರವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮೇ ತಿಂಗಳಿನಲ್ಲಿ ಆರ್‌ಬಿಐ ರೆಪೋ ದರವನ್ನು ಕೂಡಲೇ ಜಾರಿಗೆ ಬರುವಂತೆ ಏರಿಕೆ ಮಾಡಿತ್ತು.
ಆ ಬಳಿಕ ಆರ್‌ಬಿಐ ಜೂನ್ ತಿಂಗಳಿನಲ್ಲಿ ಮತ್ತೆ ರೆಪೋ ದರ ಹೆಚ್ಚಳ ಮಾಡಿತ್ತು. ಜೂನ್‌ನಲ್ಲಿ ರೆಪೋ ದರವನ್ನು ಆರ್‌ಬಿಐ 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 4.90ಕ್ಕೆ ತಲುಪಿತ್ತು. ಈಗ ಮತ್ತೆ 50 ಮೂಲಾಂಕ ಏರಿಕೆ ಮಾಡಲಾಗಿದೆ.

ಇನ್ನು ಆರ್‌ಬಿಐ ಎಸ್‌ಡಿಎಫ್ ಅನ್ನು 5.15ಕ್ಕೆ ಕಾಯ್ದಿರಿಸಿದೆ. ಎಂಎಸ್‌ಎಫ್ ಹಾಗೂ ಬ್ಯಾಂಕ್ ದರವನ್ನು ಕೂಡಾ ಪರಿಷ್ಕರಣೆ ಮಾಡಲಾಗಿದ್ದು, ಬ್ಯಾಂಕ್ ದರವು ಶೇಕಡ 5.65ಕ್ಕೆ ತಲುಪಿದೆ. ಈ ಹಿನ್ನೆಲೆಯಿಂದಾಗಿ ಬ್ಯಾಂಕ್ ಮತ್ತೆ ಸಾಲದ ಮೇಲಿನ ಬಡ್ಡಿದರ ಹಾಗೂ ಎಫ್‌ಡಿ ಮೇಲೆ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ. ಸಾಮಾನ್ಯವಾಗಿ ರೆಪೋ ದರವನ್ನು ಏರಿಕೆ ಮಾಡಿದಾಗ ಬ್ಯಾಂಕ್‌ಗಳು ರೆಪೋ ಆಧಾರಿತ ಸಾಲದ ಮೇಲಿನ ಬಡ್ಡಿದರವನ್ನು ಏರಿಕೆ ಮಾಡುತ್ತದೆ. ರೆಪೋ ದರವು ಮತ್ತೆ ಕೊರೊನಾ ಸಾಂಕ್ರಾಮಿಕ ಮುಂಚಿನ ಅವಧಿಗೆ ಏರಿಕೆಯಾಗಿದೆ. ಆಗಸ್ಟ್ 2019ರ ಬಳಿಕ ರೆಪೋ ದರ ಮೊದಲ ಬಾರಿಗೆ ಇಷ್ಟು ಏರಿಕೆಯಾಗಿದೆ.
ರೆಪೋ ದರ ಎಂದರೇನು?
ರೆಪೋ ದರ ಎಂದರೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್. ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರ ಇದಾಗಿದೆ.
ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಿಷ್ಟು
ಇನ್ನು ರೆಪೋ ದರ ಪರಿಷ್ಕರಣೆ ಬಗ್ಗೆ ಘೋಷಣೆ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್, "ಕೆಲವು ತಿಂಗಳುಗಳಿಂದ ಸುಮಾರು 13.3 ಬಿಲಿಯನ್ ಡಾಲರ್ ಬಂಡವಾಳದ ಹೊರಹರಿವು ಆಗಿದೆ. ಏಪ್ರಿಲ್‌ನಲ್ಲಿ ಸಿಪಿಐ (ಗ್ರಾಹಕರ ದರ ಹಣದುಬ್ಬರ) ಇಳಿಕೆಯಾಗಿದೆ. ಆದರೂ ಆರ್‌ಬಿಐನ ಅಂದಾಜಿಗಿಂತ ಇನ್ನೂ ಕೂಡಾ ಅಧಿಕವಾಗಿಯೇ ಇದೆ. ಹಣದುಬ್ಬರವು ಈ ಹಣಕಾಸು ವರ್ಷದ ಎರಡನೇ, ಮೂರನೇ ತ್ರೈಮಾಸಿಕದಲ್ಲಿ ಆರ್‌ಬಿಐನ ಅಂದಾಜು ದರ ಶೇಕಡ 6ಕ್ಕಿಂತ ಹೆಚ್ಚೇ ಉಳಿಯುವ ನಿರೀಕ್ಷೆ ಇದೆ," ಎಂದು ತಿಳಿಸಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications