ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರವನ್ನು ಮತ್ತೆ ಏರಿಕೆ ಮಾಡಿದೆ. ಆರ್‌ಬಿಐ ರೆಪೋ ದರವನ್ನು 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 5.9ಕ್ಕೆ ತಲುಪಿದೆ. ಈ ಹಿಂದೆ ಮೂರು ಬಾರಿ ಆರ್‌ಬಿಐ ರೆಪೋ ದರ ಹೆಚ್ಚಳ ಮಾಡಿತ್ತು. ನಾಲ್ಕನೇ ಬಾರಿಗೆ ನಿರೀಕ್ಷೆಯಂತೆಯೇ ದರ ಏರಿಸಿದೆ.
ದೇಶದಲ್ಲಿ ಹಣದುಬ್ಬರವನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಆರ್‌ಬಿಯ ಹಲವು ಬಾರಿ ರೆಪೋ ದರವನ್ನು ಏರಿಕೆ ಮಾಡಿದೆ. ಏಪ್ರಿಲ್‌ನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಸತತ 10 ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಂಡಿತ್ತು. ಆದರೆ ಹಣದುಬ್ಬರವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮೇ ತಿಂಗಳಿನಲ್ಲಿ ಆರ್‌ಬಿಐ ರೆಪೋ ದರವನ್ನು ಕೂಡಲೇ ಜಾರಿಗೆ ಬರುವಂತೆ ಏರಿಕೆ ಮಾಡಿತ್ತು.
ಆ ಬಳಿಕ ಆರ್‌ಬಿಐ ಜೂನ್ ತಿಂಗಳಿನಲ್ಲಿ ಮತ್ತೆ ರೆಪೋ ದರ ಹೆಚ್ಚಳ ಮಾಡಿತ್ತು. ಜೂನ್‌ನಲ್ಲಿ ರೆಪೋ ದರವನ್ನು ಆರ್‌ಬಿಐ 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 4.90ಕ್ಕೆ ತಲುಪಿತ್ತು. ಆಗಸ್ಟ್‌ನಲ್ಲಿ ಮತ್ತೆ 50 ಮೂಲಾಂಕ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಸೆಪ್ಟೆಂಬರ್‌ನಲ್ಲಿ ರೆಪೋ ದರವನ್ನು ಹೆಚ್ಚಳ ಮಾಡಲಾಗಿದೆ.

ರೆಪೋ ದರ ಎಂದರೇನು?
ರೆಪೋ ದರ ಎಂದರೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್. ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರ ಇದಾಗಿದೆ.
ರೆಪೋ ದರ ಏರಿಕೆ ಸುಳಿವು ನೀಡಿದ ತಜ್ಞರು
ಈ ಹಿಂದೆಯೇ ಹಲವಾರು ತಜ್ಞರುಗಳು ರೆಪೋ ದರವನ್ನು ಹೆಚ್ಚಳ ಮಾಡಲಾಗುವುದು ಎಂದು ಸೂಚನೆಯನ್ನು ನೀಡಿದ್ದರು. ಆಗಸ್ಟ್‌ನಲ್ಲಿ ಮತ್ತೆ ರಿಟೇಲ್ ಹಣದುಬ್ಬರ ಅಧಿಕವಾಗಿದೆ. ಈ ಬೆನ್ನಲ್ಲೇ ಆರ್‌ಬಿಐ ವಿತ್ತೀಯ ನೀತಿಯಲ್ಲಿ ಬದಲಾವಣೆ ತರುವ ನಿರೀಕ್ಷೆ ಇತ್ತು. ಮೇ ಬಳಿಕ ಸತತ ನಾಲ್ಕು ಬಾರಿ ಆರ್‌ಬಿಐ ರೆಪೋ ದರವನ್ನು ಏರಿಸಿದೆ. ಇನ್ನು ಇದರ ಪರಿಣಾಮ ರೆಪೋ ಆಧಾರಿತ ಬಡ್ಡಿದರದ ಮೇಲೆ ಸಾಲ ಪಡೆದವರ ಮೇಲೆ ಬೀಳಲಿದೆ. ಇಎಂಐ ಹೊರೆ ಅಧಿಕವಾಗಲಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications