ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು (ಆರ್ ಬಿಐ) ಎರಡು ಕೋ ಆಪರೇಟಿವ್ ಬ್ಯಾಂಕ್ ಗಳಿಗೆ 15 ಲಕ್ಷ ರುಪಾಯಿ ದಂಡ ವಿಧಿಸಿದೆ. ಕರ್ನಾಟಕದ ದಾವಣಗೆರೆಯಲ್ಲಿ ಇರುವ ಮಿಲ್ಲತ್ ಕೋ ಆಪರೇಟಿವ್ ಬ್ಯಾಂಕ್ ಹಾಗೂ ತಮಿಳುನಾಡಿನ ತೂತ್ತುಕುಡಿಯಲ್ಲಿ ಇರುವ ತಿರುವೈಕುಂಠಂ ಕೋ ಆಪರೇಟಿವ್ ಬ್ಯಾಂಕ್ ಗೆ ಬುಧವಾರ ದಂಡ ವಿಧಿಸಿದೆ.
ಈ ಸಂಬಂಧ ಹೇಳಿಕೆ ನೀಡಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಗಳಿಗೆ ಇರುವ ನಿಯಮಾವಳಿ ಅನುಸರಿಸದ ಕಾರಣಕ್ಕೆ ದಾವಣಗೆರೆಯ ಮಿಲ್ಲತ್ ಕೋ ಆಪರೇಟಿವ್ ಬ್ಯಾಂಕ್ ಗೆ ಹತ್ತು ಲಕ್ಷ ರುಪಾಯಿ ದಂಡ ಹಾಕಲಾಗಿದೆ ಎಂದು ತಿಳಿಸಿದೆ. ಇನ್ನು ಮತ್ತೊಂದು ಹೇಳಿಕೆ ಹೊರಡಿಸಿ, ಬ್ಯಾಂಕ್ ನಿರ್ದೇಶಕರಿಗೆ ಸಾಲ ಮತ್ತು ಮುಂಗಡ ನೀಡುವ ವಿಚಾರದಲ್ಲಿ ಆರ್ ಬಿಐ ನಿಯಮಾವಳಿ ಮೀರಿರುವುದಕ್ಕೆ ತಮಿಳುನಾಡಿನ ಕೋ ಆಪರೇಟಿವ್ ಬ್ಯಾಂಕ್ ಗೆ ಐದು ಲಕ್ಷ ದಂಡ ಹಾಕಿದೆ.

ಈ ದಂಡವನ್ನು ಹಾಕಿರುವುದು ನಿಯಮಾವಳಿಗೆ ಬದ್ಧವಿಲ್ಲದೆ ಮೀರಿರುವ ಕಾರಣಕ್ಕೆ ಹೊರತು ಬ್ಯಾಂಕ್ ಗ್ರಾಹಕರ ಜತೆಗಿನ ಯಾವುದೇ ವ್ಯವಹಾರ ಅಥವಾ ಒಪ್ಪಂದದಲ್ಲಿನ ಸಮಸ್ಯೆ ಕಾರಣಕ್ಕ್ ಅಲ್ಲ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಎರಡೂ ಬ್ಯಾಂಕ್ ಗಳಿಗೆ ನೋಟಿಸ್ ನೀಡಲಾಗಿದೆ. ಪ್ರತಿಕ್ರಿಯೆ ಹಾಗೂ ವೈಯಕ್ತಿಕ ಹಾಜರಾಗುವ ವೇಳೆ ಮೌಖಿಕ ಸ್ಪಂದನೆಯನ್ನು ಪರಾಂಬರಿಸಲಾಗುವುದು. ಆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರ್ ಬಿಐ ತಿಳಿಸಿದೆ.
More From GoodReturns

ಚಿನ್ನದ ಬೆಲೆ ಏರಿಕೆ: ನಿಮ್ಮ ಹೂಡಿಕೆ ಸುರಕ್ಷಿತವಾಗಿಡಲು ಈ ತಂತ್ರ ಬಳಸಿ

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?



Click it and Unblock the Notifications