For Quick Alerts
ALLOW NOTIFICATIONS  
For Daily Alerts

ರೆಪೋ, ರಿವರ್ಸ್ ರೆಪೋ ದರದಲ್ಲಿ ಬದಲಾವಣೆ ಇಲ್ಲ: ರೆಪೋ ದರ ಶೇ. 4ರಷ್ಟು ಮುಂದುವರಿಕೆ

|

ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಶುಕ್ರವಾರ ತನ್ನ ಹಣಕಾಸು ನೀತಿ ಪರಿಶೀಲನೆ ಮಾಡಿದ್ದು, ರೆಪೋ ದರ, ರಿವರ್ಸ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿಕೊಂಡಿದೆ.

ನಿಲ್ಲದ ಪೆಟ್ರೋಲ್, ಡೀಸೆಲ್‌ ದರ ಏರಿಕೆ! ಜೂನ್ 04ರಂದು ಹೆಚ್ಚಳನಿಲ್ಲದ ಪೆಟ್ರೋಲ್, ಡೀಸೆಲ್‌ ದರ ಏರಿಕೆ! ಜೂನ್ 04ರಂದು ಹೆಚ್ಚಳ

ರೆಪೋ ದರವನ್ನು ಈ ಹಿಂದಿನ ಶೇಕಡಾ 4ರಷ್ಟು ಮತ್ತು ರಿವರ್ಸ್ ರೆಪೋ ದರವನ್ನು ಶೇಕಡಾ 3.35ರಷ್ಟು ಉಳಿಸಿಕೊಂಡಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರೆಪೋ, ರಿವರ್ಸ್ ರೆಪೋ ದರದಲ್ಲಿ ಬದಲಾವಣೆ ಇಲ್ಲ

ಕೋವಿಡ್-19 ಅನಿಶ್ಚಿತತೆ ಮತ್ತು ಹಣದುಬ್ಬರದ ಮೇಲಿನ ಆತಂಕಗಳ ನಡುವೆ ಆರ್‌ಬಿಐ ಶುಕ್ರವಾರ ಬಡ್ಡಿದರವನ್ನು ಬದಲಿಸಲಿಲ್ಲ. ಏಪ್ರಿಲ್ 2021 ರಲ್ಲಿ ನಡೆದ ಕೊನೆಯ ಎಂಪಿಸಿ ಸಭೆಯಲ್ಲಿ ರೆಪೋ, ರಿವರ್ಸ್‌ ರೆಪೋ ದರಗಳನ್ನು ಬದಲಿಸಲಿಲ್ಲ.

ಇನ್ನು ಆರ್‌ಬಿಐ 2021-22ರ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ ಮುನ್ಸೂಚನೆಯನ್ನು ಈ ಹಿಂದಿನ ಶೇಕಡಾ 10.5 ರಿಂದ ಶೇಕಡಾ 9.5ಕ್ಕೆ ತಗ್ಗಿಸಿದೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಹರಡುವಿಕೆಯು ಬೇಡಿಕೆ ಮತ್ತು ಬೆಳವಣಿಗೆಗೆ ತೊಂದರೆಯನ್ನುಂಟುಮಾಡಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಜೊತೆಗೆ ಗ್ರಾಹಕ ದರ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ 2021-22ರಲ್ಲಿ ಶೇಕಡಾ 5.1ರಷ್ಟು, ಮೊದಲ ತ್ರೈಮಾಸಿಕದಲ್ಲಿ ಶೇ. 5.2, ದ್ವಿತೀಯ ತ್ರೈಮಾಸಿಕದಲ್ಲಿ ಶೇ. 5.4, ತೃತೀಯ ತ್ರೈಮಾಸಿಕದಲ್ಲಿ ಶೇ. 4.7ರಷ್ಟು ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 5.3ರಷ್ಟು ಅಂದಾಜಿಸಿದೆ.

English summary

RBI keeps repo rate unchanged at 4%; Reverse repo rate stands at 3.35%

Repo rate remains unchanged at 4% and Reverse repo rate stands at 3.35% said RBI Governor Shaktikanta Das
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X