ಆರ್ ಬಿಐ ರೆಪೋ ದರ ಬದಲಾವಣೆ ಇಲ್ಲ; 5.15% ಮುಂದುವರಿಕೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಸಕ್ತ ಆರ್ಥಿಕ ವರ್ಷದ ತನ್ನ ಐದನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಗುರುವಾರ ಪ್ರಕಟಿಸಿದೆ. ಅದರಲ್ಲಿ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದ ಹಣಕಾಸು ನೀತಿ ಸಮಿತಿಯು ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆ ಮೂಲಕ 5.15% ದರವನ್ನೇ ಮುಂದುವರಿಸಿದೆ. ಈ ನಿರ್ಧಾರದ ಪರವಾಗಿಯೇ ಸಮಿತಿಯ ಎಲ್ಲ ಸದಸ್ಯರು ಮತ ಚಲಾಯಿಸಿದ್ದಾರೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು 2020ರ ಆರ್ಥಿಕ ವರ್ಷಕ್ಕೆ ಜಿಡಿಪಿ ಬೆಳವಣಿಗೆ ದರದ ಅಂದಾಜನ್ನು 6.1 ಪರ್ಸೆಂಟ್ ನಿಂದ 5 ಪರ್ಸೆಂಟ್ ಗೆ ಇಳಿಸಿದೆ.

ಈಗಾಗಲೇ ಐದು ಬಾರಿ ಆರ್ ಬಿಐನಿಂದ ಬಡ್ಡಿ ದರ ಕಡಿಮೆ ಮಾಡಲಾಗಿತ್ತು. ಆದರೂ ಆರ್ಥಿಕ ಹಿಂಜರಿತವನ್ನು ತಡೆಯಲು ಸಾಧ್ಯವಾಗಿರಲಿಲ್ಲ. ಜೂನ್ ನಿಂದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರ ಆರು ವರ್ಷದಲ್ಲೇ ಕನಿಷ್ಠ ಮಟ್ಟವಾದ 4.5% ತಲುಪಿದೆ.

ಆರ್ ಬಿಐ ರೆಪೋ ದರ ಬದಲಾವಣೆ ಇಲ್ಲ; 5.15% ಮುಂದುವರಿಕೆ

ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶಗಳ ಪ್ರಕಾರ ಸರ್ಕಾರ ಮಾಡಿದ ವೆಚ್ಚದಿಂದ ಬೇಡಿಕೆ ಬಂದಿದೆಯೇ ವಿನಾ ಖಾಸಗಿ ಹೂಡಿಕೆ ಹೆಚ್ಚು ಮಾಡಲು ಸಾಧ್ಯವಾಗುತ್ತಿಲ್ಲ. ಈ ಬಾರಿ ಕೂಡ ರೆಪೋ ದರ ಇಳಿಕೆ ಆಗಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದರು. ಆದರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+