RBI MPC hikes repo rate : ರೆಪೋ ದರ 35 ಮೂಲಾಂಕ ಏರಿಸಿದ ಆರ್‌ಬಿಐ
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರವನ್ನು ಮತ್ತೆ ಏರಿಕೆ ಮಾಡಿದೆ. ಆರ್‌ಬಿಐ ರೆಪೋ ದರವನ್ನು 35 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 6.25ಕ್ಕೆ ತಲುಪಿದೆ. ಈ ಹಿಂದೆ ನಾಲ್ಕು ಬಾರಿ ಆರ್‌ಬಿಐ ದಿಡೀರ್ ಆಗಿ ರೆಪೋ ದರ ಏರಿಕೆ ಮಾಡಿದೆ.
ದೇಶದಲ್ಲಿ ಹಣದುಬ್ಬರವನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಆರ್‌ಬಿಐ ರೆಪೋ ದರವನ್ನು ಏರಿಕೆ ಮಾಡಿದೆ. ಏಪ್ರಿಲ್‌ನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಸತತ 10 ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಂಡಿತ್ತು. ಆದರೆ ಹಣದುಬ್ಬರವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮೇ ತಿಂಗಳಿನಲ್ಲಿ 40 ಮೂಲಾಂಕ ಆರ್‌ಬಿಐ ರೆಪೋ ದರವನ್ನು ಕೂಡಲೇ ಜಾರಿಗೆ ಬರುವಂತೆ ಏರಿಕೆ ಮಾಡಿತ್ತು.
ಆ ಬಳಿಕ ಆರ್‌ಬಿಐ ಜೂನ್ ತಿಂಗಳಿನಲ್ಲಿ ಮತ್ತೆ ರೆಪೋ ದರ ಹೆಚ್ಚಳ ಮಾಡಿತ್ತು. ಜೂನ್‌ನಲ್ಲಿ ರೆಪೋ ದರವನ್ನು ಆರ್‌ಬಿಐ 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 4.90ಕ್ಕೆ ತಲುಪಿತ್ತು. ಆಗಸ್ಟ್‌ನಲ್ಲಿ ಮತ್ತೆ 50 ಮೂಲಾಂಕ ಏರಿಕೆ ಮಾಡಲಾಗಿತ್ತು. ಬಳಿಕ ಸೆಪ್ಟೆಂಬರ್‌ನಲ್ಲಿ ರೆಪೋ ದರವನ್ನು 50 ಮೂಲಾಂಕ ಹೆಚ್ಚಳ ಮಾಡಲಾಗಿದೆ.

ರೆಪೋ ದರ ಎಂದರೇನು?
ರೆಪೋ ದರ ಎಂದರೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್. ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರ ಇದಾಗಿದೆ.
ಡಿಸೆಂಬರ್ 5ರಿಂದ 7ರವರೆಗೆ ಮಾನೆಟರಿ ಪಾಲಿಸಿ ಕಮೀಟಿ (ಎಂಪಿಸಿ) ಸಭೆ ನಡೆದಿದ್ದು ಈ ಸಭೆಯ ಅಂತ್ಯದಲ್ಲಿ ಅಂದರೆ ಡಿಸೆಂಬರ್ 7ರಂದು ಆರ್‌ಬಿಐ ರೆಪೋ ದರ ಪರಿಷ್ಕರಣೆ ಮಾಡಿದೆ. "ಹಣದುಬ್ಬರವು ವಿಶ್ವದಾದ್ಯಂತ ಅಧಿಕವಾಗಿದೆ.
ತಜ್ಞರ ಅಭಿಪ್ರಾಯ ಏನಿತ್ತು?
ಅಕ್ಟೋಬರ್ ಹಣದುಬ್ಬರವು ಮೂರು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಹಣದುಬ್ಬರವು ಶೇಕಡ 7.41ರಿಂದ ಶೇಕಡ 6.77ಕ್ಕೆ ಇಳಿಕೆಯಾಗಿದೆ. ಆದರೆ ಡಿಸೆಂಬರ್‌ನಲ್ಲಿ ನಡೆಯುವ ಆರ್‌ಬಿಐ ಸಭೆಯ ಬಳಿಕ ಕೇಂದ್ರ ಬ್ಯಾಂಕ್ ಮತ್ತೆ ರೆಪೋ ದರವನ್ನು 35 ಮೂಲಾಂಕ ಹೆಚ್ಚಿಸುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ಡಿಸೆಂಬರ್‌ನಲ್ಲಿ ನಡೆಯುವ ಸಭೆಯ ಬಳಿಕ ಸಣ್ಣ ಪ್ರಮಾಣದಲ್ಲಿ ದರ ಹೆಚ್ಚಳ ಮಾಡಬಹುದು ಎಂದು ಕೂಡಾ ತಜ್ಞರುಗಳು ಅಭಿಪ್ರಾಯಿಸಿದ್ದರು.