ರಾಜ್ಯದಲ್ಲಿ ಮತ್ತೆ ಮಳೆ(Rain) ಅಬ್ಬರಿಸಲು ಶುರು ಮಾಡಿದೆ. ಜುಲೈ 24ರ ವರೆಗೂ ಬಹುತೇಕ ಕಡೆ ಮಳೆ ಹೆಚ್ಚಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಎಚ್ಚರಿಕೆ ನೀಡಿದೆ.
ಹೌದು, ಜುಲೈ 20 ರಂದು ರಾಜ್ಯಕ್ಕೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಣೆಯನ್ನು ಮಾಡಿದೆ. ಅದರಲ್ಲೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಇತ್ತೀಚಿನ ಹವಾಮಾನ ವರದಿಯ ಪ್ರಕಾರ, ನಗರದಲ್ಲಿ ಇಂದಿನಿಂದ ಗುಡುಗು ಸಹಿತ ನಿರಂತರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ತಿಳಿಸಿದೆ.

ದಕ್ಷಿಣ ಭಾರತದಾದ್ಯಂತ ಸಕ್ರಿಯ ಮಾನ್ಸೂನ್ ಗಾಳಿ ಬೀಸುತ್ತಿದೆ, ಕರ್ನಾಟಕದಲ್ಲಿ, ವಿಶೇಷವಾಗಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತದೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ಕೊಟ್ಟಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮಾನಿಟರಿಂಗ್ ಸೆಂಟರ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯ ಮೂಲಕ ಸಾರ್ವಜನಿಕರಿಕೆ ಎಚ್ಚರಿಕೆಯನ್ನು ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಮದಿಂದ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ, ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಗಿತಿಯನ್ನು ತಿಳಿಸಿದೆ.
ಬೆಂಗಳೂರು ಹವಾಮಾನ
ಇಂದು ಬೆಂಗಳೂರಿನಲ್ಲಿಮೋಡ ಕವಿದ ವಾತಾವರಣವಿದೆ. ಮಧ್ಯಂತರ ಮಳೆಯಾಗುವ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ಕೊಟ್ಟಿದೆ. ಇದು ದಿನವಿಡೀ ಮಳೆ ಮುಂದುವರಿಯಬಹುದುಯೆಂಬ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಸಂಜೆಯವರೆಗೆ ಗುಡುಗು ಸಹಿತ ಮಳೆಯಾಗುವ ಜೊತೆಗೆ, ಬೆಂಗಳೂರಿನಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಭಾರೀ ಮಳೆಯ ಸಮಯದಲ್ಲಿ ನಾಗರಿಕರು ಮನೆಯೊಳಗೆ ಇರುವಂತೆ ಮತ್ತು ನೀರು ನಿಲ್ಲುವ ಅಥವಾ ತಗ್ಗು ಪ್ರದೇಶಗಳಿಗೆ ಹೋಗದಂತೆ ಸೂಚನೆಯನ್ನು ನೀಡಲಾಗಿದೆ.
IMD ಎಚ್ಚರಿಕೆ:
ಕರಾವಳಿ ಕರ್ನಾಟಕಕ್ಕೆ ರೆಡ್ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಸೇರಿದಂತೆ ಕರಾವಳಿ ಪ್ರದೇಶಗಳು ಭಾರೀ ಮಳೆ ಮತ್ತು ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಅತ್ಯುನ್ನತ ಮಟ್ಟದ ಮುನ್ನೆಚ್ಚರಿಕೆ ವಹಿಸಲಾಗಿದೆ. ನಿನ್ನೆ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಿದ್ದು, ವಿಶೇಷವಾಗಿ ಮಂಗಳೂರಿನಲ್ಲಿ 55.4 ಮಿಮೀ ಮಳೆಯಾಗಿದ್ದು, ಮೂಲಸೌಕರ್ಯಗಳಿಗೆ ಹಾನಿಯಾಗಿದ್ದು, ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಭಾರೀ ಮಳೆಯ ನಡುವೆ ಸುರಕ್ಷತಾ ಮುನ್ನೆಚ್ಚರಿಕೆಗಳು ಮುನ್ಸೂಚನೆಗಳ ಪ್ರಕಾರ, ಜುಲೈ 20 ರ ಹವಾಮಾನ ಮಾದರಿಯು ದಕ್ಷಿಣ ಭಾರತದಾದ್ಯಂತ ಸಕ್ರಿಯವಾಗಿ ಉಳಿಯುವ ಸಾಧ್ಯತೆಯಿದೆ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದ್ದು, ಮುಂದಿನ 24-48 ಗಂಟೆಗಳ ಕಾಲ ಮಳೆ ಮುಂದುವರಿಯುತ್ತದೆ.
ಮಳೆಯ ಸಮಯದಲ್ಲಿ ಈ ಕೆಳಗಿನ ಸುರಕ್ಷತಾ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿ
- ಮಳೆಯ ಸಮಯದಲ್ಲಿ ಹೊರಗೆ ಹೆಚ್ಚಾಗಿ ಹೋಗಬೇಡಿ.
- ನೀರು ತುಂಬಿದ ಬೀದಿಗಳಿಂದ ದೂರವಿರಿ
- ಪ್ರವಾಹ ಉಂಟಾದ ಪ್ರದೇಶಗಳಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸಿ.
- ಜಲಮೂಲಗಳ ಬಳಿ ವಾಸಿಸುವವರು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು
ಒಟ್ಟಾರೆಯಾಗಿ, ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಖ್ಯವಾಗಿ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Click it and Unblock the Notifications