ಕೊರೊನಾ ವೈರಾಣು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಬಹುತೇಕ ಕಂಪೆನಿಗಳು ಸಿಬ್ಬಂದಿಗೆ 'ವರ್ಕ್ ಫ್ರಮ್ ಹೋಮ್'ಗೆ ಅವಕಾಶ ನೀಡಿವೆ. ಈ ಸನ್ನಿವೇಶದಲ್ಲಿ ರಿಲಯನ್ಸ್ ಜಿಯೋದಿಂದ ಉಚಿತ ಬ್ರಾಡ್ ಬ್ಯಾಂಡ್ ಸೇವೆಯನ್ನು ಸೋಮವಾರ ಘೋಷಣೆ ಮಾಡಿದ್ದು, ಇದು ಎಲ್ಲ ಹೊಸ ಗ್ರಾಹಕರಿಗೂ ಅನ್ವಯ ಆಗುತ್ತದೆ. ಇನ್ನು ಈಗಾಗಲೇ ಇರುವ ಗ್ರಾಹಕರಿಗೆ ಡೇಟಾ ಮಿತಿಯನ್ನು ದುಪ್ಪಟ್ಟು ಮಾಡಲಾಗಿದೆ.
ಟಾಪ್ ಅಪ್ ವೋಚರ್ ಗಳಲ್ಲಿ ಕೂಡ ಡೇಟಾ ಮಿತಿಯನ್ನು ದುಪ್ಪಟ್ಟು ಮಾಡಿದ್ದು, ಜಿಯೋ ಹೊರತುಪಡಿಸಿದ ಇತರ ನೆಟ್ ವರ್ಕ್ ಗಳಿಗೆ ಕರೆ ಮಾಡುವ ಉಚಿತ ನಿಮಿಷಗಳ ಅವಧಿಯನ್ನು ಸಹ ಹೆಚ್ಚಿಸಲಾಗಿದೆ. "ಎಲ್ಲರೂ ಮನೆಯಿಂದಲೇ ಕನೆಕ್ಟ್ ಆಗುವುದಕ್ಕೆ ಜಿಯೋದಿಂದ ಬೇಸಿಕ್ ಜಿಯೋ ಫೈಬರ್ ಬ್ರಾಡ್ ಬ್ಯಾಂಡ್ ಕನೆಕ್ಸ್ಟಿವಿಟಿ (10 Mbps) ಒದಗಿಸಲಾಗುತ್ತದೆ.
"ಅದು ಯಾವ ಪ್ರದೇಶದಲ್ಲಿ ಈ ಸಂಪರ್ಕ ಒದಗಿಸಲು ಸಾಧ್ಯವಿದೆಯೋ ಅಲ್ಲಿಗೆ ಅನ್ವಯಿಸುತ್ತದೆ. ಕೊರೊನಾ ಅವಧಿಯಲ್ಲಿ ಯಾವುದೇ ಸೇವಾ ಶುಲ್ಕ ಇರುವುದಿಲ್ಲ" ಎಂದು ಕಂಪೆನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜಿಯೋ ಫೈಬರ್ ಬ್ರಾಡ್ ಬ್ಯಾಂಡ್ ಗ್ರಾಹಕರು ಇನ್ ಸ್ಟಲೇಷನ್ ಸಂದರ್ಭದಲ್ಲಿ 2500 ರುಪಾಯಿ ಪಾವತಿಸಬೇಕಾಗುತ್ತದೆ. ಅದರಲ್ಲಿ 1500 ರುಪಾಯಿಯನ್ನು ಕನೆಕ್ಷನ್ ಸರೆಂಡರ್ ಮಾಡುವ ಸಂದರ್ಭದಲ್ಲಿ ಹಿಂತಿರುಗಿಸಲಾಗುತ್ತದೆ" ಎಂದು ತಿಳಿಸಲಾಗಿದೆ. ಜಿಯೋದಿಂದ ಕನಿಷ್ಠ ರೀಫಂಡಬಲ್ ಮೊತ್ತದೊಂದಿಗೆ ರೌಟರ್ ಗಳನ್ನು ಸಹ ಒದಗಿಸಲಾಗುತ್ತಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications