ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

ಮುಂಬೈ, ಏಪ್ರಿಲ್‌ 22: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ (ಆರ್‌ಐಎಲ್‌) ಅಂಗಸಂಸ್ಥೆ ರಿಲಯನ್ಸ್‌ ಜಿಯೊ ಇನ್ಫೊಕಾಮ್‌ ಲಿಮಿಟೆಡ್‌ನ ಲಾಭವು 2023-24ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಶೇಕಡ 13.16ರಷ್ಟು ಹೆಚ್ಚಳವಾಗಿದೆ.

ಕಂಪನಿಯು 2022-23ನೇ ಹಣಕಾಸು ವರ್ಷದ ಮಾರ್ಚ್‌ 31ಕ್ಕೆ ಕೊನೆಗೊಂಡ ಮೂರು ತಿಂಗಳ ಅವಧಿಯಲ್ಲಿ ₹ 4,716 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ 2023-24ನೇ ಹಣಕಾಸು ವರ್ಷದ ಮಾರ್ಚ್‌ 31ಕ್ಕೆ ಕೊನೆಗೊಂಡ ಮೂರು ತಿಂಗಳ ಅವಧಿಯಲ್ಲಿ ನಿವ್ವಳ ಲಾಭ ಶೇಕಡ 13.16ರಷ್ಟು ಹೆಚ್ಚಾಗಿ ₹ 5,337 ಕೋಟಿಗೆ ಏರಿಕೆ ಆಗಿದೆ.

ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

2023-24ನೇ ಹಣಕಾಸು ವರ್ಷದಲ್ಲಿ ಕಂಪನಿಯ ನಿವ್ವಳ ಲಾಭ ಶೇ 12.4ರಷ್ಟು ಹೆಚ್ಚಾಗಿ ₹ 20,607 ಕೋಟಿಗೆ ತಲುಪಿದೆ. 2022-23ನೇ ಹಣಕಾಸು ವರ್ಷದಲ್ಲಿ ನಿವ್ವಳ ಲಾಭ ₹ 18,299 ಕೋಟಿಯಷ್ಟು ಇತ್ತು.

ಕಂಪನಿಯ ವರಮಾನ 2022-23ನೇ ಹಣಕಾಸು ವರ್ಷದಲ್ಲಿ ₹ 91,373 ಕೋಟಿ ಇತ್ತು. ಇದಕ್ಕೆ ಹೋಲಿಸಿದರೆ 2023-24ನೇ ಹಣಕಾಸು ವರ್ಷದಲ್ಲಿ ಶೇ 10ರಷ್ಟು ಹೆಚ್ಚಾಗಿ ₹ 1,00,891 ಕೋಟಿಗೆ ಏರಿಕೆ ಕಂಡಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+