ಜನವರಿ 26 ರಂದು 76ನೇ ಗಣರಾಜ್ಯೋತ್ಸವವನ್ನು ಆಚರಣೆಯ ಸಂಭ್ರಮದಲ್ಲಿ ದೇಶವಿದ್ದು ಇದಕ್ಕಾಗಿ ರಾಜ್ಯ ರಾಜಧಾನಿ ಬೆಂಗಳೂರು ಸಿದ್ದವಾಗುತ್ತಿದೆ. ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಬ್ಬನ್ ರಸ್ತೆಯಲ್ಲಿರುವ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ರಾಜ್ಯ ಸರ್ಕಾರ ಗಣರಾಜ್ಯೋತ್ಸವ ನಡೆಸುವುದು ವಾಡಿಕೆ. ಈ ಬಾರಿ ಗಣತಂತ್ರ ದಿನ ಭಾನುವಾರ ಬಂದಿದ್ದು ಬೆಳಗ್ಗೆ 9 ಗಂಟೆಗೆ ಮೈದಾನದಲ್ಲಿ ವಿಶೇಷ ಕವಾಯತು ನಡೆಯಲಿದೆ. ರಾಜ್ಯಪಾಲರು ಧ್ವಜಾರೋಹಣ ಮಾಡಿ, ಗೌರವ ವಂದನೆ ಸ್ವೀಕರಿಸಲಿದ್ದಾರೆ.
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿರುವುದರಿಂದ ನಗರದ ಈ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಈ ಮಾರ್ಗಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಗಳ ಸುಗಮ ನಡೆಸಲು ಬೆಂಗಳೂರು ಸಂಚಾರ ಪೊಲೀಸರು ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಈ ವ್ಯವಸ್ಥೆಯ ಭಾಗವಾಗಿ, ಮೈದಾನದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ವಾಹನಗಳನ್ನು ನಿಲ್ಲಿಸುವುದಕ್ಕೂ ಅವಕಾಶವಿಲ್ಲ. ಈ ಬಗ್ಗೆ ಪೊಲೀಸರು ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಗಣರಾಜ್ಯೋತ್ಸವದಲ್ಲಿ ಬಿಗಿ ಭದ್ರತೆ
8 ಡಿಸಿಪಿಗಳು, 17 ಎಸಿಪಿಗಳು, 44 ಪಿಐಗಳು, 114 ಪಿಎಸ್ಐಗಳು, 58 ಎಎಸ್ಐಗಳು ಮತ್ತು 80 ಸಿಬ್ಬಂದಿ ಸೇರಿದಂತೆ ಒಟ್ಟು 1051 ಪೊಲೀಸ್ ಅಧಿಕಾರಿಗಳು ಭದ್ರತೆಗೆ ನಿಯೋಜಿತರಾಗಿದ್ದಾರೆ. ಅಲ್ಲದೇ 10 ಕೆಎಸ್‌ಆರ್‌ಪಿ ತುಕಡಿಗಳು, 2 ಅಗ್ನಿಶಾಮಕ ವಾಹನಗಳು ಮತ್ತು ಕ್ಷಿಪ್ರ ಕಾರ್ಯಾಚರಣಾ ತಂಡಗಳು ಸಹ ಭದ್ರತೆಗೆ ನಿಯೋಜಿತವಾಗಿದ್ದಾರೆ. ಮೈದಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ 103 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ನಿಗಾ ವಹಿಸಲಾಗುತ್ತಿದೆ.
ಮಾರ್ಗ ಬದಲಾವಣೆ:
ಗಣರಾಜ್ಯೋತ್ಸವದ ಆಚರಣೆಯ ಸಂದರ್ಭದಲ್ಲಿ, ಬೆಳಗ್ಗೆ 8:30 ರಿಂದ 10:30 ರವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್‌ನಿಂದ ಕಾಮರಾಜರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕಿನಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರ್ಯಾಯ ಮಾರ್ಗ
ಕಬ್ಬನ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿರುವುದರಿಂದ, ಇನ್‌ಫೆಂಟ್ರಿ ರಸ್ತೆಯಿಂದ ಮಣಿಪಾಲ್ ಸೆಂಟರ್‌ಗೆ ಹೋಗುವವರು ಸಫೀನಾ ಪ್ಲಾಜಾ ಬಳಿ ಎಡಕ್ಕೆ ತಿರುಗಿ, ಮೈನ್‌ಗಾರ್ಡ್ ರಸ್ತೆ, ಆಲೀಸ್ ಸರ್ಕಲ್, ಡಿಸ್ಸೆನ್ಸರಿ ರಸ್ತೆ ಮತ್ತು ಕಾಮರಾಜ ರಸ್ತೆಯ ಮೂಲಕ ಪರ್ಯಾಯ ಮಾರ್ಗವನ್ನು ಬಳಸಬೇಕು.
ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್ನಿಂದ ಬಿ.ಆರ್.ವಿ. ಜಂಕ್ಷನ್ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಬಂಧಿಸಿದ್ದು, ಸದರಿ ವಾಹನಗಳು ವೆಬ್ಸ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ. ರಸ್ತೆಯ ಮೂಲಕ ಮೆಯೋ ಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ತೆರಬೇಕು.
ಅನಿಲ್ ಕುಂಬ್ಳೆ ವೃತ್ತದಿಂದ ಕಬ್ಬನ್ ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟ್ರೀಟ್ನಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು ಇನ್ಫೆಂಟ್ರಿರಸ್ತೆ - ಸಫೀನಾ ಪ್ಲಾಜಾದಲ್ಲಿ ಎಡ ತಿರುವು ಪಡೆದು ಮೈನ್ ಗಾರ್ಡ್ ರಸ್ತೆ-ಅಲಿ ಸರ್ಕಲ್ -ಡಿಸ್ಪೆನ್ಸರಿರಸ್ತೆ-ಕಾಮರಾಜರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಕಾಮರಾಜ ರಸ್ತೆ - ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ನಲ್ಲಿ ಎಡ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬೇಕು.
ವಾಹನ ನಿಲುಗಡೆ ನಿಷೇಧಿತ ರಸ್ತೆಗಳು
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾದ ಪ್ರಮುಖ ರಸ್ತೆಗಳೆಂದರೆ ಸೆಂಟ್ರಲ್ ಸ್ಟ್ರೀಟ್ (ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ), ಕಬ್ಬನ್ ರಸ್ತೆ (ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ ಜಂಕ್ಷನ್‌ವರೆಗೆ) ಮತ್ತು ಎಂ.ಜಿ.ರಸ್ತೆ (ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ).
ಕಾರ್ಯಕ್ರಮಕ್ಕೆ ಪ್ರವೇಶ ಪಡೆಯಲು ಕಲರ್ ಕೋಡ್ ಹೊಂದಿರುವ ಪಾಸ್ ಕಡ್ಡಾಯವಾಗಿದ್ದು , ಪಾಸ್ ಗಳನ್ನು ನೋಡಿ ವಿವಿಧ ಗೇಟ್ ಗಳ ಮೂಲಕ ಪ್ರವೇಶಿಸಲು ಅನುಮತಿಸಲಾಗುತ್ತದೆ.
• ಪಿಂಕ್ ಪಾಸ್: ಸಾಮಾನ್ಯ ಪ್ರವೇಶಕ್ಕೆ
• ವಿಐಪಿ ಪಾಸ್: ಗೇಟ್-2 ಮೂಲಕ ಪ್ರವೇಶ
• ಮುಖ್ಯ ಅತಿಥಿಗಳು: ಗೇಟ್-3 ಮೂಲಕ ಪ್ರವೇಶ
• ಮಾಧ್ಯಮ: ಗೇಟ್-4 ಮೂಲಕ ಪ್ರವೇಶ (ಬಿಳಿ ಪಾಸ್)
ಭದ್ರತಾ ದೃಷ್ಟಿಯಿಂದ ಪೆರೇಡ್ ಗೆ ಬರುವ ಎಲ್ಲಾ ಆಹ್ವಾನಿತರು ಹಾಗೂ ಸಾರ್ವಜನಿಕರು ಮೊಬೈಲ್ ಫೋನ್. ಹೆಲ್ಮೆಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆ ನಿಷೇದ ಹೇರಲಾಗಿದೆ.


Click it and Unblock the Notifications