ನೀವು ಹೊಸ ವರ್ಷಕ್ಕೆ ಹೊಸ ಉದ್ಯೋಗ ಹುಡುಕುತ್ತಿದ್ದೀರಾ? ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲ ಆಸಕ್ತಿ ಇದ್ಯಾ..? ಹಾಗಿದ್ರೆ ನಿಮಗೆ ಇದು ಒಂದು ಉತ್ತಮ ಅವಕಾಶವೆಂದೇ ಹೇಳಬಹುದು. ಹೌದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಭಾರೀ ಸಂಖ್ಯೆಯ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.ಈ ಹುದ್ದೆಗೆ ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಇಲ್ಲಿದೆ ಹೆಚ್ಚಿನ ಮಾಹಿತಿ
ದೇಶದಾದ್ಯಂತ ಖಾಲಿಯಿರುವ ಎಸ್‌ಬಿಐನ ಜೂನಿಯರ್ ಅಸೋಸಿಯೇಟ್ಸ್ ಕ್ಲರ್ಕ್ ಹುದ್ದೆಗಳ ನೇಮಕಕ್ಕೆ ಪ್ರಕ್ರಿಯೆ ಶುರುವಾಗಿದೆ. ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಎಸ್‌ಬಿಐ ಹೊರಡಿಸಿದ್ದು, 2024 ಡಿಸೆಂಬರ್ 17 ರಿಂದ ಅರ್ಜಿ ಸಲ್ಲಿಸುವ ಪಕ್ರಿಯೆಯೂ ಶುರುವಾಗಿದ್ದು, ಜನವರಿ 7, 2025ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಹುದ್ದೆ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್)
ಖಾಲಿ ಇರುವ ಹುದ್ದೆಗಳ ಸಂಖ್ಯೆ : 13,735
ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಸಂಖ್ಯೆ : 50 ಇತರೆ ರಾಜ್ಯಗಳಲ್ಲಿಯೂ ಅವಕಾಶವಿದೆ.
ವೇತನಶ್ರೇಣಿ : ಮಾಸಿಕ ಆರಂಭಿಕ ವೇತನ 24050-1340/3-28070-1650/3-33020-2000/4-41020-2340/7-57400-4400/1-61800-2680/1-64480.
ವಿದ್ಯಾರ್ಹತೆ ಏನಿರಬೇಕು...?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಪಡೆದಿರಬೇಕು. ಸ್ನಾತಕೋತ್ತರ ಪದವಿ ಮುಗಿಸಿದವರೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆ ಕಡ್ಡಾಯವಾಗಿ ತಿಳಿದಿರಬೇಕು.
ವಯಸ್ಸಿನ ಮಿತಿ ಎಷ್ಟಿರಬೇಕು?
ಎಸ್ ಬಿಐ ನಲ್ಲಿ ಖಾಲಿಯಿರುವ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ ವಯಸ್ಸು 28 ವರ್ಷ ಮೀರಿರಬಾರದು. ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೂ ವಯೋಮಿತಿ ಸಡಿಲಿಕೆ ಕೂಡ ಇದೆ.
ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು ರೂ 750 ಅರ್ಜಿ ಶುಲ್ಕವನ್ನು ಅರ್ಜಿಯೊಂದಿಗೆ ಪಾವತಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಂಗವಿಕಲ ವರ್ಗ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ ಮುಖ್ಯ ಪರೀಕ್ಷೆ ಹಾಗೂ ಭಾಷಾ ಪ್ರಾವಿಣ್ಯತೆ ಆಧಾರದ ಮೇಲೆ ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇದಕ್ಕಾಗಿ ಮುಂದಿನ ವರ್ಷದ ಆರಂಭದಲ್ಲಿ ವಿವಿಧ ಹಂತದಲ್ಲಿ ಪರೀಕ್ಷೆ, ಸಂದರ್ಶನಗಳು ನಡೆಯಲಿವೆ.
ನೇಮಕಾತಿ ದಿನಾಂಕ ವಿವರ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 2024 ಡಿಸೆಂಬರ್ 17
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2025 ಜನವರಿ 07
ಪೂರ್ವಭಾವಿ ಪರೀಕ್ಷೆಯ ಸಂಭಾವ್ಯ ಸಮಯ: 2025 ರ ಫೆಬ್ರವರಿ
ಮುಖ್ಯ ಪರೀಕ್ಷೆಯ ಸಂಭಾವ್ಯ ಅವಧಿ: 2025 ರ ಮಾರ್ಚ್ /ಏಪ್ರಿಲ್.
ಕ್ಲರ್ಕ್ ನೇಮಕಾತಿ 2024 ಗೆ ಅರ್ಜಿ ಸಲ್ಲಿಸುವುದು ಹೇಗೆ..?
- ಅಧಿಕೃತ ಎಸ್‌ಬಿಐ ವೆಬ್‌ಸೈಟ್ ಪುಟಕ್ಕೆ ಮೊದಲು ಭೇಟಿ ನೀಡಬೇಕು. ಮಾನ್ಯವಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳಬೇಕು.
- ನಿಖರವಾದ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳು ಮತ್ತು ಫೋಟೋಗಳನ್ನು ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ
- ಎಸ್‌ಬಿಐ ನೀಡಿರುವ ಈ ಹುದ್ದೆಯ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications