ವ್ಯವಸ್ಥಿತ ಹೂಡಿಕೆ ಯೋಜನೆಗಳು (SIPಗಳು) ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡವ ಜನಪ್ರಿಯ ಮಾರ್ಗವಾಗಿದೆ. SIPಗಳಲ್ಲಿ ಹೂಡಿಕೆ ಆರ್ಥಿಕ ಗುರಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಸಾಧಿಸಲು ಸಹಾಯಕಾರಿಯಾಗಿದೆ. ಇದು ಪ್ರತಿ ತಿಂಗಳು ಸಣ್ಣ ಮೊತ್ತದ ಹಣವನ್ನು ಹೂಡಿಕೆ ಮಾಡುವ ಮೂಲಕ ಸಂಪತ್ತನ್ನು ಸೃಷ್ಟಿಸಲು ನಿಮಗೆ ಸಹಾಯ ಮಾಡುತ್ತದೆ. ಬಹಳಷ್ಟು ಜನರಿಗೆ ಹೂಡಿಕೆ ಮಾಡುವ ಆಸಕ್ತಿ ಇದ್ರೂ, ಅವರು ಷೇರು ಮಾರುಕಟ್ಟೆ ಅಥವಾ ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡಲು ಯಾವುದೋ ಹಿಂಜರಿಕೆ ಕಾರಣ ಆರ್.ಡಿ, ಎಫ್. ಡಿಯಂತಹ ಸಾಂಪ್ರದಾಯಿಕ ಹೂಡಿಕೆಗಳನ್ನೇ ನೆಚ್ಚಿಕೊಳ್ಳುತ್ತಾರೆ. ಇದನ್ನು ಅರಿತುಕೊಂಡಿರುವ ಎಎಸ್‌ಐಬಿ ಬ್ಯಾಂಕ್ ನಸಾಮಾನ್ಯರಿಗೆ ಮ್ಯೂಚುವಲ್ ಫಂಡ್‌ಗಳ ಬಗ್ಗೆ ಅರಿವು ಮೂಡಿಸಲು ಮತ್ತು ಹೂಡಿಕೆ ಮಾಡಲು ಪ್ರೋತ್ಸಾಹಿಸಲು, SBI ಮ್ಯೂಚುವಲ್ ಫಂಡ್ JanNivesh SIP ಅನ್ನು ಪ್ರಾರಂಭಿಸಿದೆ.

SBI ಮ್ಯೂಚುವಲ್ ಫಂಡ್ ಮತ್ತು SBI (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ) ಸಹಯೋಗದೊಂದಿಗೆ JanNivesh SIP ಆರಂಭಿಸಿದ್ದು, ಸಣ್ಣ ಹೂಡಿಕೆದಾರರು, ಮೊದಲ ಬಾರಿಗೆ ಹೂಡಿಕೆ ಮಾಡುವವರನ್ನು ಮತ್ತು ಹಳ್ಳಿಗಳು ಮತ್ತು ನಗರಗಳಲ್ಲಿ ವಾಸಿಸುವ ಜನರನ್ನು ಮ್ಯೂಚುವಲ್ ಫಂಡ್‌ಗಳೊಂದಿಗೆ ಸಂಪರ್ಕಿಸುವುದು ಇದರ ಉದ್ದೇಶವಾಗಿದೆ.ಈ ಯೋಜನೆಯನ್ನು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ಚಲ್ಲಾ ಶ್ರೀನಿವಾಸುಲು ಶೆಟ್ಟಿ ಅವರ ಸಮ್ಮುಖದಲ್ಲಿ ಪ್ರಾರಂಭಿಸಲಾಗಿದ್ದು,ಮ್ಯೂಚುವಲ್ ಫಂಡ್‌ಗಳು ಹೆಚ್ಚು ಹೆಚ್ಚು ಜನರಿಗೆ ಲಭ್ಯವಾಗುವಂತೆ ಮಾಡುವುದು ಇದರ ಪ್ರಮುಖ ಗುರಿಯಾಗಿದೆ.
ಕಡಿಮೆ ಹಣದಿಂದ ಹೂಡಿಕೆ ಮಾಡಲು ಬಯಸುವ ಜನರಿಗಾಗಿಯೇ ಜನ್ ನಿವೇಶ್ SIP ಅನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯಲ್ಲಿ ಹೂಡಿಕೆಯನ್ನು ಕೇವಲ ₹250 ರಿಂದ ಪ್ರಾರಂಭಿಸಬಹುದು. ಜನರು ತಮ್ಮ ಅನುಕೂಲಕ್ಕೆ ತಕ್ಕಂತೆ ದೈನಂದಿನ, ವಾರಕ್ಕೊಮ್ಮೆ ಅಥವಾ ಮಾಸಿಕ ಆಧಾರದ ಮೇಲೆ SIPಯಲ್ಲಿ ಹೂಡಿಕೆ ಮಾಡಬಹುದಾಗಿದೆ.
250 ರೂಪಾಯಿಗಳ SIP ಪ್ರಯೋಜನಗಳು
ಎಸ್‌ಬಿಐ ಮ್ಯೂಚುವಲ್ ಫಂಡ್‌ಗಳು ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಎಸ್‌ಐಪಿಯ ಮೂರು ಪ್ರಮುಖ ಪ್ರಯೋಜನಗಳನ್ನು ಒಳಗೊಂಡಿದೆ. ಅವುಗಳೆಂದರೆ ಕಡಿಮೆ ವೆಚ್ಚದ ಹೂಡಿಕೆ, ಡಿಜಿಟಲ್ ಪ್ಲಾಟ್‌ಫಾರ್ಮ್ ಬಳಸಿ ಹೂಡಿಕೆ ಮತ್ತು ವೆಚ್ಚ-ಪರಿಣಾಮಕಾರಿತ್ವ ಅಂದರೆ ವೆಚ್ಚ-ಪರಿಣಾಮಕಾರಿತ್ವಕ್ಕಾಗಿ ವಿನ್ಯಾಸಗೊಳಿಸಲಾದ ಜನನಿವೇಶ್ SIP, ಎಲ್ಲಾ ಮಧ್ಯಸ್ಥಗಾರರಿಗೆ ಸಮರ್ಥನೀಯ ಬೆಳವಣಿಗೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಸುಲಭವಾಗಿ ಹೂಡಿಕೆ ಮಾಡಿ
ಎಸ್‌ಬಿಐ ಮ್ಯೂಚುವಲ್ ಫಂಡ್ ಈ ಯೋಜನೆಯನ್ನು ಸಂಪೂರ್ಣವಾಗಿ ಡಿಜಿಟಲ್ ಮಾಡಿದೆ, ಇದು ಹೂಡಿಕೆಯನ್ನು ಇನ್ನಷ್ಟು ಸುಲಭಗೊಳಿಸಿದೆ. SBI YONO ಅಪ್ಲಿಕೇಶನ್ ಜೊತೆಗೆ, ಈ ಸೌಲಭ್ಯವು Paytm, Groww ಮತ್ತು Zerodha ನಂತಹ ಫಿನ್‌ಟೆಕ್ ಪ್ಲಾಟ್‌ಫಾರ್ಮ್‌ಗಳಲ್ಲಿಯೂ ಲಭ್ಯವಿರುತ್ತದೆ.
ಹೂಡಿಕೆ ಮಾಡುವುದು ಹೇಗೆ?
ಮೊದಲು SBI YONO ಅಪ್ಲಿಕೇಶನ್ ಅಥವಾ Paytm, Groww, Zerodha ನಂತಹ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆ ಲಾಗಿನ್ ಮಾಡಿ. ಅಲ್ಲಿಗೆ ಹೋಗಿ ಜನನಿವೇಶ್ SIP ಆಯ್ಕೆಯನ್ನು ಆರಿಸಿ ಮತ್ತು ನಿಮ್ಮ ಅನುಕೂಲಕ್ಕೆ ಅನುಗುಣವಾಗಿ ₹250 ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತವನ್ನು ಹೂಡಿಕೆ ಮಾಡಲು ಪ್ರಾರಂಭಿಸಿ. ಅಲ್ಲಿ ದೈನಂದಿನ, ಸಾಪ್ತಾಹಿಕ ಅಥವಾ ಮಾಸಿಕ ಹೂಡಿಕೆ ಆಯ್ಕೆಯನ್ನು ಆರಿಸಿ ಮತ್ತು ನಿಮ್ಮ SIP ಅನ್ನು ಟ್ರ್ಯಾಕ್ ಮಾಡಿ.
ಈ ಬಗ್ಗೆ ಪ್ರತಿಕ್ರಿಯಿಸಿರುವ SBI ಮ್ಯೂಚುವಲ್ ಫಂಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದ ಕಿಶೋರ್ " ಮ್ಯೂಚುವಲ್ ಫಂಡ್ ಪ್ರವೇಶ ಅಡೆತಡೆಗಳನ್ನು ಕಡಿಮೆ ಮಾಡುವ ಮೂಲಕ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ, ನಾವು ಮೊದಲ ಬಾರಿಗೆ ಹೂಡಿಕೆದಾರರು, ಸಣ್ಣ ಉಳಿತಾಯಗಾರರು ಮತ್ತು ಅಸಂಘಟಿತ ವಲಯದಲ್ಲಿರುವವರನ್ನು ಆಕರ್ಷಿಸುವ ಗುರಿಯನ್ನು ಹೊಂದಿದ್ದೇವೆ, SIP ಕೇವಲ 250 ರೂ.ಗಳಿಂದ ಪ್ರಾರಂಭವಾಗುತ್ತದೆ" ಎಂದು ಹೇಳಿದರು.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications